Superintendent of Library and Information Centres : ಕೊಪ್ಪಳ ಜಿಲ್ಲಾ ವ್ಯಾಪ್ತಿಯ 21 ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದೆ.  ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಒಟ್ಟು 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 


COMMERCIAL BREAK
SCROLL TO CONTINUE READING

ಆಸಕ್ತರು ಅರ್ಜಿ ನಮೂನೆಗಳನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ, ಜಿಲ್ಲಾ ಪಂಚಾಯತ್, ಕೊಪ್ಪಳ ಹಾಗೂ ಎಲ್ಲಾ ತಾಲೂಕು ಪಂಚಾಯತಿ ಮತ್ತು ಸಂಬಂಧಿಸಿದ 21 ಗ್ರಾಮ ಪಂಚಾಯತಿಗಳಲ್ಲಿ ಮತ್ತು ಜಿಲ್ಲಾ ವೆಬ್‌ಸೈಟ್ www.koppal.nic.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.


ಇದನ್ನು ಓದಿ : ESCOM : ಮಾರ್ಚ್ 10ರಿಂದ ಎಸ್ಕಾಂ ಆನಲೈನ್ ಸೇವೆ ಲಭ್ಯವಿಲ್ಲ, ಮತ್ತೆ ಯಾವಾಗ ಆರಂಭ? ಮಾಹಿತಿ ಇಲ್ಲಿದೆ 


ಖಾಲಿ ಇರುವ ಗ್ರಾಮ ಪಂಚಾಯಿತಿಗಳು: ಕುಷ್ಟಗಿ ತಾಲ್ಲೂಕಿನ ಅಂಟರಠಾಣ, ಕೇಸೂರು, ಗುಮಗೇರಾ, ತುಮರಿಕೊಪ್ಪ, ಬಿಳೇಕಲ್, ಶಿರಗುಂಪಿ, ಹಾಬಲಕಟ್ಟಿ ಹಾಗೂ ಹಿರೇನಂದಿಹಾಳ ಗ್ರಾಮ ಪಂಚಾಯತಿ. ಕೊಪ್ಪಳ ತಾಲ್ಲೂಕಿನ ಕಲಕೇರಿ, ಮುನಿರಾಬಾದ ಡ್ಯಾಂ, ವಣಬಳ್ಳಾರಿ ಹಾಗೂ ಹಾಲವರ್ತಿ ಗ್ರಾಮ ಪಂಚಾಯತಿ. ಯಲಬುರ್ಗಾ ತಾಲ್ಲೂಕಿನ ತುಮ್ಮರಗುದ್ದಿ, ಬೋದೂರು ಹಾಗೂ ಸಂಕನೂರು ಗ್ರಾಮ ಪಂಚಾಯತಿ.ಗಂಗಾವತಿ ತಾಲ್ಲೂಕಿನ ಜಂಗಮರಕಲ್ಗುಡಿ ಹಾಗೂ ಸಣಾಪೂರ ಗ್ರಾಮ ಪಂಚಾಯತಿ. ಕನಕಗಿರಿ ತಾಲ್ಲೂಕಿನ ಜೀರಾಳ ಹಾಗೂ ಬಸರಿಹಾಳ ಗ್ರಾಮ ಪಂಚಾಯತಿ. ಕನಕಗಿರಿಯ ನೆಲಜೇರಿ ಗ್ರಾಮ ಪಂಚಾಯತಿ, ಕಾರಟಗಿ ತಾಲ್ಲೂಕಿನ ಮೈಲಾಪೂರ ಗ್ರಾಮ ಪಂಚಾಯತಿಗಳಲ್ಲಿ ಹುದ್ದೆ ಭರ್ತಿ ಮಾಡಲಾಗುತ್ತಿದೆ.


ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 3 ಕೊನೆಯ ದಿನವಾಗಿದ್ದು,  ಸಂಜೆ 5.30 ಗಂಟೆಯೊಳಗೆ ನಿಗದಿತ ನಮೂನೆಯಲ್ಲಿ ಭರ್ತಿಮಾಡಿದ ಅರ್ಜಿಯೊಂದಿಗೆ ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ 'ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್, ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್ ಕೊಪ್ಪಳ' ವಿಳಾಸಕ್ಕೆ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಗಾಗಿ ಜಿಲ್ಲಾ ವೆಬ್‌ಸೈಟ್ ಅಥವ ದೂರವಾಣಿ ಸಂಖ್ಯೆ 9480871001 ಯನ್ನು ಸಂಪರ್ಕಿಸಬಹುದು. 


 ಮಿನಿ ಉದ್ಯೋಗ ಮೇಳ; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಾರ್ಚ್ 7 ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಿನಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಹಲವು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. 


ಇದನ್ನು ಓದಿ :  Shah Rukh Khan ದಕ್ಷಿಣ ಅಂದರೆ ಕೇವಲ ಇಡ್ಲಿ-ವಡೆ ಅಲ್ಲ, ರಾಮ್ ಚರಣ್ ಕುರಿತು ತಮಾಷೆ ಮಾಡಲು ಹೋಗಿ!


ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಇರುವುದಿಲ್ಲ. ಪಿಯುಸಿ/ ತತ್ಸಮಾನ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ, ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳಿಗೆ 18 ರಿಂದ 32 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಹ ವಿದ್ಯಾರ್ಹತೆ ಹೊಂದಿದ ಯುವಕ ಮತ್ತು ಯವತಿಯರು, ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್‌ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಹಾಜರಾಗಬೇಕು.


ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08539-220859, 8105693234.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.