Koppal :  ಕೊಪ್ಪಳದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜನೆ ಮಾಡಿದ್ದ ಮೂರು ದಿನಗಳ ಹಣ್ಣು ಮತ್ತು ಜೇನು ಮೇಳ 2024 ದಾಖಲೆಯ ವಹಿವಾಟು ಈ ಮೇಳದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ತೋಟಗಾರಿಕೆ ಇಲಾಖೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಮಹಾಶಿವರಾತ್ರಿ ಅಂಗವಾಗಿ ಹಣ್ಣು ಮತ್ತು ಜೇನು ಮೇಳ 2024 ಅನ್ನು ತೋಟಗಾರಿಕೆ ಇಲಾಖೆ (ಜಿಪಂ) ಕೊಪ್ಪಳ ಕಛೇರಿ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಮೇಳದಲ್ಲಿ ಹಿಂದಿನ ಮೇಳಕ್ಕಿಂತಲೂ ಹೆಚ್ಚಿನ ವಹಿವಾಟು ನಡೆದು ದಾಖಲೆ ನಿರ್ಮಿಸಲಾಗಿದೆ ಎಂದುಈ ಕುರಿತು ತೋಟಗಾರಿಕೆ ಉಪ ನಿರ್ದೇಶಕರಾದ ಕೃಷ್ಣ ಉಕ್ಕುಂದ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.


ಈ ಮೇಳದಲ್ಲಿ ವಿವಿಧ ತೋಟಗಾರಿಕೆ ರೈತ ಉತ್ಪಾದಕ ಕಂಪನಿಗಳು ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ಸಂಸ್ಥೆ, ಕೊಪ್ಪಳ ರೈತರು ಸಹ ಜಿಲ್ಲೆಯಲ್ಲಿ ರೈತರಿಂದ ಹಣ್ಣುಗಳನ್ನು ಖರೀದಿಸಿ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಅವಕಾಶವನ್ನು ಕಲ್ಪಿಸಲಾಗಿತ್ತು. ಮೇಳದಲ್ಲಿ ರೈತರ ವಿವಿಧ ಉತ್ಪನ್ನಗಳನ್ನು ಕೂಡಾ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿತ್ತು.


ಇದನ್ನು ಓದಿ  : ದಾವಣಗೆರೆಯಲ್ಲಿ 109.84 ಕೋಟಿ ವೆಚ್ಚದ ನೂತನ KSRTC ಬಸ್ ನಿಲ್ದಾಣದ ನಿರ್ಮಾಣ 


ಮೇಳದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಬೆಳೆಯುವ 10ಕ್ಕೂ ಹೆಚ್ಚಿನ ವಿವಿಧ ಹಣ್ಣುಗಳಾದ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಕರಬೂಜ, ಅಂಜೂರ, ಪೇರಲ, ಬಾಳೆ, ಡ್ರಾಗನ್ ಫ್ರೂಟ್, ಸಪೋಟಾ, ಪಪ್ಪಾಯ ಹಾಗೂ ಜೇನು ಹಾಗೂ ಜೇನಿನ ವಿವಿಧ ಉತ್ಪನ್ನಗಳನ್ನು ಸಹ ಮಾರಾಟ ಮಾಡಲು 18ಕ್ಕೂ ಹೆಚ್ಚು ಮಳಿಗೆಗಳನ್ನು ರೈತರಿಗೆ ಉಚಿತವಾಗಿ ನೀಡಲಾಗಿತ್ತು.


 ದ್ರಾಕ್ಷಿಯ ವಿವಿಧ ತಳಿಗಳಲ್ಲದೇ ಕಲ್ಲಂಗಡಿ ಹಣ್ಣಿನ ಹಳದಿ ಮತ್ತು ಗುಲಾಬಿ ತಿರುಳು ಹೊಂದಿದ ತಳಿಗಳು ಮತ್ತು ಪಪ್ಪಾಯ ಹಣ್ಣಿನ ಮೂರು ತರಹದ ತಳಿಗಳು ಮತ್ತು ಪೇರಲ ಹಾಗೂ ದಾಳಿಂಬೆ ಹಣ್ಣಿನ ತಳಿಗಳನ್ನು ಗ್ರಾಹಕರಿಗೆ ಪೂರೈಸಲಾಗಿದೆ.


ಇದನ್ನು ಓದಿ : ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ: ಮುಖ್ಯಮಂತ್ರಿ ಸಿದ್ದರಾಮ


ಮೇಳದಲ್ಲಿ ಉತ್ಕೃಷ್ಟ ಗುಣಮಟ್ಟದ ಜೇನು ತುಪ್ಪ ಹಾಗೂ ಜೇನಿನ ಉಪ ಉತ್ಪನ್ನಗಳನ್ನು ಕಲ್ಲಳ್ಳಿ ಜೇನು ಶಿರಸಿ ಅವರು ಹಾಗೂ ಕೊಪ್ಪಳದ ರೈತ ಜೇನು ಬೆಳೆಗಾರರು ಕೂಡಾ ಭಾಗವಹಿಸಿ ಗ್ರಾಹಕರಿಗೆ ಪೂರೈಸಿದರು. ಈ ಮೇಳದಲ್ಲಿ ರೈತರು ಹಾಗೂ ಗ್ರಾಹಕರು ಇಬ್ಬರೂ ಲಾಭವನ್ನು ಪಡೆದರು. ಈ ಮೇಳದಲ್ಲಿ 25,000ಕ್ಕೂ ಹೆಚ್ಚು ಗ್ರಾಹಕರು ಭಾಗವಹಿಸಿರುತ್ತಾರೆ ಹಾಗೂ ರೂ. 38 ಲಕ್ಷಕ್ಕೂ ಹೆಚ್ಚಿನ ವಹಿವಾಟು ನಡೆದಿರುತ್ತದೆ. ಮೇಳದಲ್ಲಿ ಗ್ರಾಹಕರು ಹಳದಿ ತಿರುಳಿನ ಕಲ್ಲಂಗಡಿ ಹಣ್ಣನ್ನು ಅತೀ ಹೆಚ್ಚು ಖರೀದಿಸಿದರು ಹಾಗೂ ಕೆಂಪು ತಿರುಳಿನ ಕಲ್ಲಂಗಡಿ ಸಹ ಮಾರಾಟವಾಗಿ ಒಟ್ಟು 30 ಟನ್‌ಗೂ ಹೆಚ್ಚಿನ ಕಲ್ಲಂಗಡಿ ಮಾರಾಟವಾಯಿತು. 15 ಟನ್‌ಗೂ ಹೆಚ್ಚಿನ ಕರಬೂಜ, 5 ಟನ್‌ಗೂ ಹೆಚ್ಚು ದಾಳಿಂಬೆ, 10 ಟನ್‌ಗೂ ಹೆಚ್ಚು ದ್ರಾಕ್ಷಿ ಹಾಗೂ ಅಂಜೂರ, ಪೇರಲ, ಚಿಕ್ಕು, ಬಾಳೆ ಹಾಗೂ ವಿವಿಧ ಹಣ್ಣುಗಳು ಮಾರಾಟವಾದವು.


ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಗೆ ಈ ಮೇಳದಲ್ಲಿ ಹಣ್ಣುಗಳನ್ನು ಉತ್ತಮ ರೀತಿಯಲ್ಲಿ ಪ್ಯಾಕ್‌ ಮಾಡಿ ಸರಬರಾಜು ಮಾಡಲು ಪುನೆಟ್ ಬಾಕ್ಸ್ ಮತ್ತು ರಟ್ಟಿನ ಬಾಕ್ಸ್ ಗಳನ್ನು ಸಬ್ಸಿಡಿ ದರದಲ್ಲಿ ನೀಡುವ ಮುಖಾಂತರ ಮೌಲ್ಯವರ್ಧನೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು,ರೈತರು ಮತ್ತು ಗ್ರಾಹಕರ ನಡುವೆ ಉತ್ತಮ ಸೇತುವೆ ಕಲ್ಪಿಸುವಲ್ಲಿ ಈ ಮೇಳ ಅತ್ಯಂತ ಸಹಕಾರಿಯಾಗಿದ್ದು, ರೈತರಿಗೆ ಉತ್ತಮ ದರ ಮತ್ತು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಯೋಗ್ಯ ದರದಲ್ಲಿ ಒದಗಿಸುವಲ್ಲಿ ಸಹಕಾರಿಯಾಗಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.