ಬೆಂಗಳೂರು: ಮನುಶಾಸ್ತ್ರವನ್ನು ನಂಬುವ ಬಿಜೆಪಿಗೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದು ಪರಂಪರೆಯಿಂದ ಬಂದ ಗುಣ ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿಗರ ವಿರುದ್ಧ ಕಿರಿಕಾರಿದೆ.
ಮಹಿಳೆಗೆ ಶಾಸಕ ಅರವಿಂದ್ ಲಿಂಬಾವಳಿ ಅವಾಜ್ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಸರಣಿ ಟ್ವಿಟ್ ಮಾಡಿರುವ ಕೆಪಿಸಿಸಿ ಮಹಿಳೆಯನ್ನು ನಿಂದಿಸಿ, ದೌರ್ಜನ್ಯವೆಸಗಿದ ಅರವಿಂದ್ ಲಿಂಬಾವಳಿ ವಿರುದ್ಧ ಯಾವ ಕ್ರಮ ಕೈಗೊಳ್ಳುವಿರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ? ಅಥವಾ ಈ ದೌರ್ಜನ್ಯಕ್ಕೆ ನಿಮ್ಮ ಬೆಂಬಲವೂ ಇದೆಯೇ? ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಈದ್ಗಾ ಮೈದಾನ ಬಳಿ ಮತ್ತೆ ಗಣೇಶ ಕೂರಿಸೋ ವಿಚಾರಕ್ಕೆ ಗಲಾಟೆ
ಅಲ್ಲದೆ, ಮಹಿಳಾ ವಿರೋಧಿ ಬಿಜೆಪಿಗೆ ಲಿಂಬಾವಳಿ ಮಾತು ಪ್ರಿಯವಾಗಬಹುದು, ಆದರೆ ರಾಜ್ಯದ ಮಹಿಳೆಯರಿಗೆ ಅದು ಅಸಹ್ಯವಾಗಿದೆ. ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.
ಸ್ತ್ರೀಪರ ಕಾಳಜಿ ವಹಿಸುವ ವೀರಾಧಿವೀರರೇ, ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ.. ನಿಮ್ಮ ಪಕ್ಷದ ಅರವಿಂದ್ ಲಿಂಬಾವಳಿಯ ಮಹಿಳೆ ಮೇಲಿನ ದೌರ್ಜನ್ಯಕ್ಕೆ ರೊಚ್ಚಿಗೇಳುವುದು ಯಾವಾಗ? ಸ್ತ್ರೀ ಕುಲದ ಗೌರವವನ್ನು ಎತ್ತಿ ಹಿಡಿಯುವುದು ಯಾವಾಗ? ನಳಿನ್ಕುಮಾರ್ ಕಟೀಲ್ ಅವರೇ, ಲಿಂಬಾವಳಿಯವರನ್ನು ಉಚ್ಛಾಟಿಸುವುದು ಯಾವಾಗ? ಎಂದು ಪ್ರಶ್ನೆ ಮಾಡಿದೆ.
ಬಿಜೆಪಿ ರೇಪ್ ಆರೋಪಿ ರಮೇಶ್ ಜಾರಕಿಹೊಳಿಯನ್ನೇ ಸಮರ್ಥಿಸಿಕೊಂಡಿದೆ, ಮೈಸೂರಿನ ರೇಪ್ ಸಂತ್ರಸ್ತೆಯನ್ನು ದೂಷಿಸಿದೆ, ಗುಜರಾತಿನಲ್ಲಿ ರೇಪಿಸ್ಟರನ್ನು ಸನ್ಮಾನಿಸಿದೆ, ಕಾಶ್ಮೀರದಲ್ಲಿ ರೇಪ್ ಆರೋಪಿಗಳ ಮೆರವಣಿಗೆಯನ್ನೇ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಹರಿಹಾಯ್ದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.