ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಅನಗತ್ಯ ಹೇಳಿಕೆ ನೀಡಿದ್ದಕ್ಕಾಗಿ ಇಬ್ಬರು ಕಾಂಗ್ರೆಸ್ ಹಿರಿಯ ಮುಖಂಡರಿಗೆ ಕೆಪಿಸಿಸಿ ನೋಟಿಸ್ ಜಾರಿ ಮಾಡಿದೆ. 


COMMERCIAL BREAK
SCROLL TO CONTINUE READING

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕಣ್ಣೀರಿಗೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಹೇಳಿದ್ದ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಮತ್ತು ಸಮ್ಮಿಶ್ರ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ, ಅದರ ಆಯಸ್ಸು ಕಡಿಮೆ ಎಂದು ಹೇಳಿದ್ದ ಕೆ.ಎನ್.ರಾಜಣ್ಣ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್​ ಸೂಚನೆ ಮೇರೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಎಂ.ವೈ. ಘೋರ್ಪಡೆ ನೋಟಿಸ್​ ಜಾರಿ ಮಾಡಿದ್ದಾರೆ.


ಪಕ್ಷಕ್ಕೆ ಮುಜುಗರವಾಗುವಂಥ ಹೇಳಿಕೆಯನ್ನು ಈ ನಾಯಕರು ನೀಡಿದ್ದು, ಇದು ಪಕ್ಷದ ತತ್ವ ಮತ್ತು ಸಿದ್ಧಾಂತಕ್ಕೆ ವಿರುದ್ಧವಾಗಿದೆ. ಈ ನಡೆ ಪಕ್ಷ ವಿರೋಧಿಯಾಗಿದ್ದು, ಒಂದು ವಾರದೊಳಗೆ ಹೇಳಿಕೆಗಳಿಗೆ ಸೂಕ್ತ ಉತ್ತರ ನೀಡಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಜಾರಿಗೊಳಿಸಲಾಗುವುದು ಎಂದು ನೋಟಿಸ್'ನಲ್ಲಿ ಉಲ್ಲೇಖಿಸಲಾಗಿದೆ.