ಇಂದು ಕೆಪಿಸಿಸಿ ನೂತನ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ
ಬೆಂಗಳೂರು ಅರಮೆನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನವಾಗಿ ಆಯ್ಕೆ ಆಗಿರುವ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ಇಂದು ನಡೆಯಲಿದೆ.
ಬೆಂಗಳೂರು ಅರಮೆನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಪದಗ್ರಹಣ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆ ಆಗಿರುವ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಈಶ್ವರ್ ಖಂಡ್ರೆ ಅಧಿಕಾರ ಸ್ವಿಕರಿಸಲಿದ್ದಾರೆ.
ಕಳೆದ ಎಂಟು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರು, ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಶಾಸಕರು, ಸಚಿವರು ಮತ್ತು ಹಲವು ಕಾರ್ಯಕರ್ತರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.