D.K.Shivakumar: 'ಏಳು ಜನ್ಮ ಎತ್ತಿದರೂ ಕರ್ನಾಟಕ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗುವುದಿಲ್ಲ’

ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

Last Updated : Jan 14, 2021, 05:12 PM IST
  • ಬಿಜೆಪಿ ಜನಸೇವಕ ಸಮಾವೇಶದಲ್ಲಿ ಕಾಂಗ್ರೆಸ್ ದೇಶಕ್ಕೆ ಮಾರಕ ಎಂದು ಯಡಿಯೂರಪ್ಪ ಹೇಳಿದ್ದಾರೆ. ಪಾಪ ಅವರಿಗೆ ಅವರ ಪಕ್ಷದಲ್ಲಿರುವವರ ಇತಿಹಾಸ ಗೊತ್ತಿಲ್ಲ.
  • ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
  • ಬಿಜೆಪಿ ಶಾಸಕರು ಹೇಳಿರುವ ಸಿಡಿ ವಿಚಾರವು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
D.K.Shivakumar: 'ಏಳು ಜನ್ಮ ಎತ್ತಿದರೂ ಕರ್ನಾಟಕ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗುವುದಿಲ್ಲ’ title=

ಬೆಂಗಳೂರು: ಬಿಜೆಪಿ ಜನಸೇವಕ ಸಮಾವೇಶದಲ್ಲಿ ಕಾಂಗ್ರೆಸ್ ದೇಶಕ್ಕೆ ಮಾರಕ ಎಂದು ಯಡಿಯೂರಪ್ಪ ಹೇಳಿದ್ದಾರೆ. ಪಾಪ ಅವರಿಗೆ ಅವರ ಪಕ್ಷದಲ್ಲಿರುವವರ ಇತಿಹಾಸ ಗೊತ್ತಿಲ್ಲ. ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ(BJP) ಶಾಸಕರು ಹೇಳಿರುವ ಸಿಡಿ ವಿಚಾರವು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

Ramesh Jarkiholi: ಸಿಪಿ ಯೋಗೀಶ್ವರ್ ಪರ ಬೆಳಗಾವಿ ಸಾಹುಕಾರ್ ಬ್ಯಾಟಿಂಗ್..!

ಬಿಜೆಪಿ ಎಂದರೆ ಭಾರತೀಯ ಜನತಾ ಪಾರ್ಟಿ ಅಲ್ಲ, 'ಬ್ಲಾಕ್ ಮೇಲರ್ಸ್ ಜನತಾ ಪಾರ್ಟಿ' ಇದನ್ನು ಬಿಜೆಪಿ ನಾಯಕರೇ ಹೇಳಿದ್ದಾರೆ ಎಂದು ಡಿಕೆಶಿ ಆರೋಪಿಸಿದರು.

BJP: ಸಚಿವ ಸ್ಥಾನ ಸಿಗದೇ ಕೊತಕೊತ ಕುದಿಯುತ್ತಿರುವವರಿಗೆ ಸಿಎಂ ಬಿಎಸ್‍ವೈ 'ಖಡಕ್ ವಾರ್ನಿಂಗ್'..!

ಕೋವಿಡ್ ಸಂಕಷ್ಟದ ಸಮಯದಲ್ಲಿ ನಗರ ಸ್ಥಳೀಯ ಸಂಸ್ಥೆಯಲ್ಲಿ ತೆರಿಗೆ ಹಾಕುವ ಕಾನೂನು ತಂದಿರುವುದು ಜನರ ಸುಲಿಗೆ ಮಾಡುವ ಕ್ರಮ. ತಿಂಗಳಲ್ಲಿ ಮೂರು ಬಾರಿ ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆ ಆಗಿದೆ ಇವುಗಳನ್ನು ವಿರೋಧಿಸಿ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

Blackmail CD : ಯಾವ ಸೀಡಿಗೂ ಹೆದರಲ್ಲ..!ಭಿನ್ನರಿಗೆ BSY ಖಡಕ್ ಮೆಸೆಜ್.! ಈಗ ಸೀಡಿಯದ್ದೇ ಚರ್ಚೆ

ರೈತರಿಗೆ ಶಕ್ತಿ ತುಂಬಲು ಬೃಹತ್ ಕಾರ್ಯಕ್ರಮ ಕಾಂಗ್ರೆಸ್ ಹಮ್ಮಿಕೊಂಡಿದ್ದು ಜ. 20 ರಂದು ರಾಜಭವನ ಮುತ್ತಿಗೆ ಹಾಕಲಿದ್ದೇವೆ ಎಂದರು.

Property tax : ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News