ನೀರಸ, ಅಪ್ರಸ್ತುತ, ನಿರ್ದಿಷ್ಟ ಗುರಿಯಿಲ್ಲದ ಬಜೆಟ್: ದಿನೇಶ್ ಗುಂಡೂರಾವ್

ಇಂದೊಂದು ನೀರಸ, ಅಪ್ರಸ್ತುತ, ನಿರ್ದಿಷ್ಟ ಗುರಿಯಿಲ್ಲದ ಬಜೆಟ್ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

Updated: Jul 6, 2019 , 09:37 AM IST
ನೀರಸ, ಅಪ್ರಸ್ತುತ, ನಿರ್ದಿಷ್ಟ ಗುರಿಯಿಲ್ಲದ ಬಜೆಟ್: ದಿನೇಶ್ ಗುಂಡೂರಾವ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2 ಅವಧಿಯ ಮೊದಲ ಬಜೆಟ್ ಅನ್ನು ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬೆನ್ನಲ್ಲೇ ಸಾಕಷ್ಟು ಟೀಕೆಗಳು ಕೇಳಿಬಂದಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಇಂದೊಂದು ನೀರಸ, ಅಪ್ರಸ್ತುತ, ನಿರ್ದಿಷ್ಟ ಗುರಿಯಿಲ್ಲದ ಬಜೆಟ್ ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆರ್ಥಿಕತೆ ಪುನಶ್ಚೇತನ, ಉದ್ಯೋಗ ಸೃಷ್ಟಿ, ರೈತರ ಆದಾಯ ಹೆಚ್ಚಳ, ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಬಜೆಟ್ ನಲ್ಲಿ ಯಾವುದೇ ಸ್ಪಷ್ಟ ಯೋಜನೆಗಳಿಲ್ಲ. ಅಲ್ಲದೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಕಡೆಗಣಿಸಲಾಗಿದೆ. ಜಲಸಂರಕ್ಷಣೆ, ಪರಿಸರ ರಕ್ಷಣೆಗೆ ಆದ್ಯತೆ ನೀಡಲಾಗಿಲ್ಲ. ಅಷ್ಟೇ ಅಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಜನಸಾಮಾನ್ಯರಿಗೆ ಬಾರೆ ಎಳೆದಂತಾಗಿದೆ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಹ ಇದೇ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಸೂರ್ಯನ ಕೆಳಗೆ ಎಲ್ಲವೂ ಇದೆ. ಆದರೆ ಯಾವುದನ್ನೂ ಹಿಡಿಯಲು ಸಾಧ್ಯವಿಲ್ಲ ಎಂಬಂತಿದೆ ಕೇಂದ್ರ ಬಜೆಟ್ ಎಂದು ಟೀಕಿಸಿದ್ದಾರೆ.