ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದು ಒಪ್ಪಿಕೊಂಡ್ರಾ ಡಿ.ಕೆ.ಶಿವಕುಮಾರ್..!?
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ತಿರುಗೇಟು ನೀಡಿದೆ ಬಿಜೆಪ
ಬೆಂಗಳೂರು: ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ಎಂದ ಹೇಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ.
D.K.Shivakumar) ಅವರೇ, ಅಕ್ರಮ ಆಸ್ತಿ ಸಂಪಾದಿಸಿದ್ದೇನೆ ಎಂದು ಒಪ್ಪಿಕೊಂಡಿರುವುದಕ್ಕಾಗಿ ಧನ್ಯವಾದಗಳು. ನೀವಿಷ್ಟು ಬಹಿರಂಗವಾಗಿಯೇ ತಪ್ಪನ್ನು ಒಪ್ಪಿಕೊಂಡ ಮೇಲೂ ತನಿಖಾ ಸಂಸ್ಥೆಗಳನ್ನು ಬಿಜೆಪಿ ಸರ್ಕಾರವನ್ನು ದೂರುತ್ತೀರುವುದೇಕೆ? ಮಾಡಿದ್ದುಣ್ಣೋ ಮಹಾರಾಯ ಎಂದು ವ್ಯಂಗ್ಯವಾಡಿದೆ.
ಗ್ರಾ .ಪಂ ಚುನಾವಣಾ ದಿನಾಂಕ ಘೋಷಣೆಗೂ ಮೊದ್ಲೇ ‘ಅಖಾಡಕ್ಕೆ ಧುಮುಕಿದ ಬಿಜೆಪಿ’
ನಿನ್ನೆ ಮಾಧ್ಯಮದವರ ಜೊತೆ ಮಾತನಾಡುತ್ತ ಡಿ.ಕೆ.ಶಿವಕುಮಾರ್,‘ರಾಜಕೀಯ ದ್ವೇಷದಿಂದ ನನ್ನ ವಿರುದ್ಧ ಸಿಬಿಐ ವಿಚಾರಣೆ ನಡೆಸಲಾಗುತ್ತಿದೆ. ನಾನು ಮಾಡಬಾರದ ಕೆಲಸ ಮಾಡಿಲ್ಲ. ಹೀಗಾಗಿ ಹೆದರುವ ಅಗತ್ಯವಿಲ್ಲ. ನಾನು ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಇಡೀ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ನನ್ನ ವಿರುದ್ಧ ತನಿಖೆ ಮಾಡುವಂತೆ ಸಿಬಿಐಗೆ ಅನುಮತಿ ನೀಡಿದ್ದಾರೆ. ಇದುವರೆಗೂ ಯಾರ ಮೇಲೆ ಈ ರೀತಿ ತನಿಖೆ ಮಾಡಿಸಿದ್ದಾರೆ? ರಾಜ್ಯದಲ್ಲಿ ನಾನೊಬ್ಬನೇ ಆಸ್ತಿ ಸಂಪಾದಿಸಿದ್ದೇನಾ? ನನ್ನ ಮೇಲೆ ಯಾವುದಾದರೂ ದೂರು ದಾಖಲಾಗಿದೆಯಾ? ಯಾವುದಾದರೂ ಆರೋಪ ಸಾಬೀತಾಗಿದೆಯಾ? ಯಾರ ಬಳಿಯಾದರೂ ನಾನು ಲಂಚ ಪಡೆದಿದ್ದೇನಾ? ಅಧಿಕಾರ ದುರುಪಯೋಗ ಮಾಡಿಕೊಂಡಿದ್ದೇನಾ? ಇಂಧನ ಸಚಿವ ಆಗಿದ್ದಾಗ ಅಕ್ರಮ ಮಾಡಿದ್ದೇನಾ? ಯಡಿಯೂರಪ್ಪನವರೇ ಅಧಿಕಾರದಲ್ಲಿದ್ದಾರೆ. ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಲಿ. ಅದನ್ನು ಬಿಟ್ಟು ಸಿಬಿಐಗೆ ಕೊಡುವ ಅಗತ್ಯ ಏನಿತ್ತು?’ ಎಂದು ಅವರು ಖಾರವಾಗಿಯೇ ಪ್ರಶ್ನಿಸಿದರು.