ಬೆಂಗಳೂರು: 'ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ರೂ. ಹಾಗೂ ಮಂತ್ರಿ ಆಗಬೇಕಾದರೆ 100 ಕೋಟಿ ರೂ ನೀಡಬೇಕು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿ, ಉನ್ನತ ಮಟ್ಟದ ತನಿಖೆ ಆಗಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷಿ ಡಿ.ಕೆ. ಶಿವಕುಮಾರ್,  ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಅವರು ಈಗಾಗಲೇ ಹೇಳಿರುವಂತೆ ಮುಖ್ಯಮಂತ್ರಿ ಆಗಬೇಕಾದರೆ ಎರಡೂವರೆ ಸಾವಿರ ಕೋಟಿ ರೂ., ಮಂತ್ರಿ ಆಗಬೇಕಾದರೆ 100 ಕೋಟಿ ರೂ. ನಿಗದಿಯಾಗಿದೆ. ಈ ವಿಚಾರದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗಬೇಕು.  ಯತ್ನಾಳ್ ಅವರು ಕೇಂದ್ರದ ಮಾಜಿ ಸಚಿವರಾಗಿದ್ದು ಹಾಲಿ ಶಾಸಕರು ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಉನ್ನತ ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದರು.


ಇದನ್ನೂ ಓದಿ- ರಾಜ್ಯದಲ್ಲಿ ವಿನೂತನ ಕಾರ್ಯಕ್ರಮ ನಡೆಸಿ ಎಲ್ಲರ ಗಮನ ಸೆಳೆದ ಶೇಗುಣಸಿ ಮಠ


ಬಿಜೆಪಿ ಶಾಸಕ ಬಸನಗೌಡ ಪಾಟೀಲ್  ಯತ್ನಾಳ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಜೆ.ಪಿ. ನಡ್ಡಾ ಹಾಗೂ ಇತರೆ ನಾಯಕರ ಜತೆ ಈ ವಿಚಾರದ ಬಗ್ಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.  ಇದು ಈ ರಾಷ್ಟ್ರ ಮಟ್ಟದಲ್ಲಿ ಚರ್ಚೆ ಆಗಬೇಕಾದ ವಿಷಯ. ಬಿಜೆಪಿ ಆಡಳಿತದಲ್ಲಿ ಸಬ್ ಇನ್ಸ್ಪೆಕ್ಟರ್, ಪಿಎಸ್ಐ ಸೇರಿದಂತೆ ವಿವಿಧ ಇಲಾಖೆ ಹುದ್ದೆಗಳ ನೇಮಕಾತಿಗೆ ಇಂತಿಷ್ಟು ಎಂದು ಹಣ ನಿಗದಿಯಾಗಿದೆ. 


ಇದನ್ನೂ ಓದಿ- R Ashok : 'ಪಿಎಸ್ಐ ಹಗರಣ ಕಂಡು ಹಿಡಿದಿದ್ದೇ ಗೃಹ ಸಚಿವರು'


ಈ ಹಿಂದೆ ಬೆಂಗಳೂರು ವಿವಿ ಉಪಕುಲಪತಿ ನೇಮಕ ವಿಚಾರವಾಗಿ ಪ್ರೊಫೆಸರ್ ಅಶೋಕ್ ಕುಮಾರ್ ಅವರು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದಲ್ಲಿ ಸರ್ಕಾರ ಕ್ಲೀನ್ ಚಿಟ್ ನೀಡಿತ್ತು. ಬೇರೆ ಸಮಯದಲ್ಲಿ ಈ ವಿಚಾರ ಮಾತನಾಡುತ್ತೇವೆ. ಈ ಎಲ್ಲಾ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ ಯತ್ನಾಳ್ ಅವರ ಹೇಳಿಕೆ ಆಧಾರದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದೂರು ದಾಖಲಿಸಿಕೊಂಡು ತನಿಖೆ ಮಾಡಬೇಕು  ಎಂದು ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.