ಬೆಂಗಳೂರು : ಅಂತರ ರಾಜ್ಯ ಜಲ ವಿವಾದಗಳ ಬಗ್ಗೆ ಇಂದು ಏರ್ಪಡಿಸಿದ್ದ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.


COMMERCIAL BREAK
SCROLL TO CONTINUE READING

ಮೇಕೆದಾಟು ಯೋಜನೆ(Mekedatu Project) ಅನುಷ್ಠಾನಕ್ಕೆ ಬೇಕಿರುವುದು ರಾಜಕೀಯ ಇಚ್ಛಾಶಕ್ತಿ. ತಮಿಳುನಾಡು ಪರ ವಕೀಲರೆ 2018 ರಲ್ಲಿ ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸುವಾಗ ಮೆಟ್ಟೂರಿನ ಮೇಲ್ಭಾಗದಲ್ಲಿ ಕರ್ನಾಟಕವು ಮತ್ತೊಂದು ಅಣೆಕಟ್ಟೆ ಕಟ್ಟುವ ಬಗ್ಗೆ ಪರಿಗಣಿಸಬೇಕು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.


ಇದನ್ನೂ ಓದಿ : ಮೌಡ್ಯಾಚರಣೆಯ ತಾಣವಾಯಿತಾ ದಕ್ಷಿಣ ಕಾಶಿ ನಂಜನಗೂಡು


ಮೇಕೆದಾಟು ಯೋಜನೆ ಕರ್ನಾಟಕ(Karnataka)ದ ಭೌಗೋಳಿಕ  ಪರಿಧಿಯಲ್ಲಿ ಬರುತ್ತದೆ. ಕರ್ನಾಟಕವು ಇದಕ್ಕಾಗಿ ನೆರೆರಾಜ್ಯಗಳ ಅನುಮತಿ ಪಡೆಯಬೇಕು ಎಂದು ಯಾವ ಕಾನೂನು ಹೇಳಿಲ್ಲ. ಕಾವೇರಿ ನ್ಯಾಯಾಧೀಕರಣವು ಈಗಾಗಲೇ ನೀರು ಹಂಚಿಕೆ ಮಾಡಿ ಆಗಿದೆ. ಹೀಗ ಯಾರ ನೀರನ್ನೂ ಯಾರೂ ಕಬಳಿಸಲು ಆಗಲ್ಲ. ಸುಪ್ರೀಂ ಕೋರ್ಟ್ ಕೂಡ ಕುಡಿಯುವ ನೀರು ಯೋಜನೆಗೆ ಯಾವುದೇ ಅಡಚಣೆ ಮಾಡಬಾರದು ಎಂದು ಸ್ಪಷ್ಟವಾಗಿ ಹೇಳಿದೆ.


ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್(Supreme Court), ರಾಷ್ಟ್ರೀಯ ಜಲ ಆಯೋಗ, ಕಾವೇರಿ ಪ್ರಾಧಿಕಾರ, ಕೇಂದ್ರ ಸರಕಾರ ಸೇರಿದಂತೆ ಯಾರ ಅಭ್ಯಂತರವೂ ಇಲ್ಲ.ಅರಣ್ಯ ಮತ್ತು ಪರಿಸರ ಇಲಾಖೆ ಅನುಮತಿ ಮಾತ್ರ ಬಾಕಿ ಉಳಿದಿದೆ. ಕೇಂದ್ರ ಸರಕಾರದ ಮೇಲೆ ಒತ್ತಡ ತಂದು ಈ ಅನುಮತಿ ಪಡೆಯಿರಿ. ಮೇಕೆದಾಟು ಯೋಜನೆಯನ್ನು ಅನುಷ್ಠಾನಕ್ಕೆ ತರಲು ಇರುವ ಸುಲಭ ಮಾರ್ಗೋಪಾಯಗಳ ಬಗ್ಗೆ ರಾಜ್ಯದ ಪರ ವಕೀಲರು, ಕಾನೂನು ಸಲಹೆಗಾರರು ಸರಕಾರಕ್ಕೆ ಸಲಹೆ ಮಾಡಬೇಕು.ಇಲ್ಲದ ಅಡಚಣೆಗಳ ಬಗ್ಗೆ ಹೇಳಿ ಗೊಂದಲ ಸೃಷ್ಟಿಸಬಾರದು ಎಂದರು.


ನೀವಿರುವುದು ಯೋಜನೆ ಅನುಷ್ಠಾನ ಸುಲಭ ಮಾಡುವ ಸಲಹೆ ನೀಡಲು. ಅದು ಬಿಟ್ಟು ಆಗಲ್ಲ, ನೋಡಬೇಕು ಅಂತ ಕತೆ ಹೇಳಬಾರದು.ರಾಜ್ಯ ಸರಕಾರ(Karnataka Govt) ಅದನ್ನು ಜಾರಿಗೆ ತರಲು ಏನು ಮಾಡಬೇಕೋ ಅದನ್ನು ಮಾಡಲಿ.ವಾಸ್ತವವಾಗಿ ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಲಾಭ. ಏಕೆಂದರೆ ನಾವೇನು ಇದನ್ನು ನೀರಾವರಿಗೆ ಬಳಸಲ್ಲ. ಬೆಂಗಳೂರಿನ ಜನತೆಗೆ ಕುಡಿಯುವ ನೀರಿಗೆ ಮಾತ್ರ ಬಳಸಲು ಉದ್ದೇಶಿಸಿದ್ದೇವೆ. ಹಾಗೆ ನೋಡಿದರೆ ಸಂಕಷ್ಟ ಕಾಲದಲ್ಲಿ ತಮಿಳುನಾಡಿಗೆ ಇದರಿಂದ ಲಾಭ. ಅದು ತಮಿಳುನಾಡಿಗೆ ಚೆನ್ನಾಗಿ ಗೊತ್ತಿದೆ.


ಇದನ್ನೂ ಓದಿ : ಭಗವದ್ಗೀತೆ ಪಠ್ಯಕ್ರಮದಲ್ಲಿ ಸೇರ್ಪಡೆ ವಿಚಾರ: ಹೊಸದಾಗಿ ವೈಭವಿಕರಿಸೋದು ಏನೂ ಬೇಡ ಎಂದ ಡಿಕೆಶಿ


ರಾಜಕೀಯ ಕಾರಣಗಳಿಗಾಗಿ ತಮಿಳುನಾಡು(Tamilunadu) ವಿರೋಧ ವ್ಯಕ್ತಪಡಿಸುತ್ತಾ ಬಂದಿದೆ. ಮುಂದೆಯೂ ವ್ಯಕ್ತಪಡಿಸುತ್ತಾರೆ. ಅವರನ್ನು ಕಾಯ್ದುಕೊಂಡು ಕೂರಲು ಆಗುವುದಿಲ್ಲ ಎಂದು ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.