ಬೆಂಗಳೂರು : ನಾವು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿಯನ್ನು ಎರಡು ದಿನ ಪೂರೈಸಿದ್ದು, ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ಇಂದು  ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ಡಿಕೆ ಶಿವಕುಮಾರ್(DK Shivakumar), ನಾವು ಬಚ್ಚಲು ಬಾಯಿ ಈಶ್ವರಪ್ಪನ ರಾಜೀನಾಮೆ ಕೇಳುತ್ತಿಲ್ಲ. ಅವನನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದ್ದೇವೆ. ನಮ್ಮ ಆಗ್ರಹ ಈಡೇರುವವರೆಗೂ ನಾವು ಅಧಿವೇಶನ ನಡೆಯಲು ಬಿಡುವುದಿಲ್ಲ.


ಇದನ್ನೂ ಓದಿ : ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು?: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ


ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ, ಈಗ ದೊಡ್ಡ ಸಾಧನೆ ಮಾಡಿರುವಂತೆ ಬೀಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದೆ. ರಾಷ್ಟ್ರಗೀತೆ, ಧ್ವಜ, ಪ್ರಜಾಪ್ರಭುತ್ವ, ಸಂವಿಧಾನ ನೀಡಿದ್ದೇವೆ.


ನಾವು ಅಧಿವೇಶನ(Session)ದ ಸಮಯದಲ್ಲಿ ರಾಷ್ಟ್ರಧ್ವಜ ಹಾರಿಸಿ ತಪ್ಪು ಮಾಡಿದ್ದರೆ ನಮ್ಮ ಮೇಲೆ ಕೇಸ್ ದಾಖಲಿಸಲಿ. ಕಾನೂನು ಕ್ರಮ ಕೈಗೊಳ್ಳಲಿ. ಇನ್ನು ಯಾಕೆ ದಾಖಲಿಸಿಲ್ಲ? ಅದಕ್ಕಿಂತ ಮೊದಲು ದೇಶದ ಧ್ವಜಕ್ಕೆ ಅಪಮಾನ ಮಾಡಿರುವ ಈತನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಿ. 


ರಾಜ್ಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಸೋಮವಾರ ಈತನನ್ನು ವಜಾಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸುತ್ತೇವೆ. ನಂತರ ಹಳ್ಳಿ, ಹಳ್ಳಿಗೂ ಹೋಗಿ ಜನರ ಮಧ್ಯೆ ಹೋರಾಟ ಮಾಡುತ್ತೇವೆ.


ಈಶ್ವರಪ್ಪ(KS Eshwarappa) ದೊಡ್ಡ ಸಾಧನೆ ಮಾಡಿದವರಂತೆ ಅವರಿಗೆ ಸ್ವಾಗತ ಕೋರಲು ಐನೂರು ಮಂದಿ ಸೇರಿದ್ದಾರಂತೆ. ಸಂತೋಷ ಅವರು ಏನಾದರೂ ಮಾಡಿಕೊಳ್ಳಲಿ. ಆದರೆ ದೇಶದ್ರೋಹದ ಹೇಳಿಕೆ ಕೊಟ್ಟ ಈಶ್ವರಪ್ಪನ ವಿರುದ್ಧ ಪ್ರಕರಣ ದಾಖಲಿಸದೆ, ಅವರ ಹೇಳಿಕೆ ವಿರುದ್ಧ ಕಪ್ಪು ಬಾವುಟ ಹಾರಿಸಲು ಹೋದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.


ನಾನು ಎಸ್ ಪಿ ಹಾಗೂ ಡಿಜಿ ಜೊತೆ ಮಾತನಾಡುತ್ತೇನೆ. ಅವರು ಪೊಲೀಸ್ ಸಮವಸ್ತ್ರ ಕಳಚಿ ಕೇಸರಿ ಬಟ್ಟೆ ಧರಿಸಿ ಬಿಜೆಪಿಯ ಕಾರ್ಯಕರ್ತರಾಗಿ ಕೆಲಸ ಮಾಡುವಂತೆ ಹೇಳುತ್ತೇನೆ.


ಇದನ್ನೂ ಓದಿ : ರಾಷ್ಟ್ರಧ್ವಜ ಬದಲಿಸುವುದು ಕಾಂಗ್ರೆಸ್ ಅಜೆಂಡಾ, ಸಾಕ್ಷಿ ಇಲ್ಲಿದೆ ನೋಡಿ: ಬಿಜೆಪಿ


ಈಶ್ವರಪ್ಪನಿಗೆ ಸ್ವಾಗತ ಕೋರಲು ಐನೂರು ಜನ ಸೇರಬಹುದಂತೆ, ಅವರ ವಿರುದ್ಧ ಪ್ರಕರಣವಿಲ್ಲವಂತೆ, ಆದರೆ ಪ್ರತಿಭಟನೆ ಮಾಡಲು ಹೋದ 15-20 ಮಂದಿ ವಿರುದ್ಧ ಪ್ರಕರಣವಂತೆ. ಇದೆಂಥ ನ್ಯಾಯ?


ನಾವು ಪಾದಯಾತ್ರೆ(Padayatre) ಮಾಡಿದಾಗ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದರು, ಬಿಜೆಪಿಯ ಹಲವು ನಾಯಕರು ಸಾವಿರಾರು ಜನ ಸೇರಿಸಿ ಕಾರ್ಯಕ್ರಮ ಮಾಡಲಿಲ್ಲವೇ? ಅವರ ವಿರುದ್ಧ ಯಾಕೆ ಕೇಸ್ ಹಾಕಿಲ್ಲ?


ಮುಖ್ಯಮಂತ್ರಿಗಳು ನಿಷ್ಪಕ್ಷಪಾತರಾಗಿರುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರೂ ಅವರ ಕೈಗೊಂಬೆಯಾಗಿದ್ದಾರೆ. ಅವರು ಮುಖ್ಯಮಂತ್ರಿ ಕೆಲಸ ಮಾಡುತ್ತಿಲ್ಲ. ಅವರ ಮೊದಲ ಆದ್ಯತೆ ಅವರ ಪಕ್ಷದ ಅಜೆಂಡಾ. ಸಂವಿಧಾನದ ಮೇಲೆ ಪ್ರಮಾಣ ಮಾಡಿ, ಈಗ ಅದರಂತೆ ಅವರು ನಡೆದುಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.