DK Shivakumar: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ಡಿಕೆ ಶಿವಕುಮಾರ್..!

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಬ್ಬಲ್ ಇಂಜಿನ್ ಸರ್ಕಾರಕ್ಕೆ ಸವಾಲು

Last Updated : Jan 18, 2021, 05:56 PM IST
  • ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಬ್ಬಲ್ ಇಂಜಿನ್ ಸರ್ಕಾರ ಮಹದಾಯಿ ಯೋಜನೆಯನ್ನು ಜಾರಿಗೊಳಿಸಲಿ. ಕೃಷ್ಣಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಿ
  • ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಬ್ಬಲ್ ಇಂಜಿನ್ ಸರ್ಕಾರಕ್ಕೆ ಸವಾಲು
  • ಈ ಡಬ್ಬಲ್ ಇಂಜಿನ್ ಸರ್ಕಾರ ಜನರ ಆಶೋತ್ತರಗಳನ್ನು ಈಡೇರಿಸಲಿ. ಮಹದಾಯಿ ವಿಚಾರ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದೆ. ನ್ಯಾಯಾದೀಕರಣದ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸುವ ಮೂಲಕ ತನ್ನ ಬದ್ಧತೆಯನ್ನು ಸಾಬೀತುಪಡಿಸಲಿ
DK Shivakumar: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ಡಿಕೆ ಶಿವಕುಮಾರ್..! title=

ಕಲಬುರಗಿ: ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಬ್ಬಲ್ ಇಂಜಿನ್ ಸರ್ಕಾರ ಮಹದಾಯಿ ಯೋಜನೆಯನ್ನು ಜಾರಿಗೊಳಿಸಲಿ. ಕೃಷ್ಣಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

ನಿನ್ನೆ (ಭಾನುವಾರ) ಬೆಳಗಾವಿಯ ಜನಸೇವಕ್ ಸಮಾವೇಶದಲ್ಲಿ ಅಮಿತ್ ಶಾ(Amit Shah), ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಡಬ್ಬಲ್ ಇಂಜಿನ್ ಸರ್ಕಾರ ಇದೆ. ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಹೇಳಿದ್ದರು.

H.D.Kumaraswamy: ಕುಮಾರಸ್ವಾಮಿಗೆ 'ಬಿಗ್ ಶಾಕ್' ನೀಡಿದ ಸುಪ್ರೀಂಕೋರ್ಟ್..!

ಈ ಬಗ್ಗೆ ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಈ ಡಬ್ಬಲ್ ಇಂಜಿನ್ ಸರ್ಕಾರ ಜನರ ಆಶೋತ್ತರಗಳನ್ನು ಈಡೇರಿಸಲಿ. ಮಹದಾಯಿ ವಿಚಾರ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದೆ. ನ್ಯಾಯಾದೀಕರಣದ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸುವ ಮೂಲಕ ತನ್ನ ಬದ್ಧತೆಯನ್ನು ಸಾಬೀತುಪಡಿಸಲಿ ಎಂದು ಟಾಂಗ್ ಕೊಟ್ಟರು.

Laxman Savadi : 'ನಷ್ಟದಿಂದ ಸಾರಿಗೆ ಸಂಸ್ಥೆ ಮುಚ್ಚಲಿದೆ ಅನ್ನೋ ಭಯ ಬೇಡ'

ನಂಜುಂಡಪ್ಪ ವರದಿ ಅನುಸಾರ ಅತಿ ಹೆಚ್ಚು ಹಿಂದುಳಿದ ಪ್ರದೇಶಗಳನ್ನು ಹೊಂದಿರುವ ಕಲ್ಯಾಣ ಕರ್ನಾಟಕಕ್ಕೆ ಅನುದಾನ ಹಂಚಿಕೆಯಲ್ಲಿ ಭಾರೀ ತಾರತಮ್ಯವಾಗಿದೆ. ಈ ಭಾಗದಲ್ಲಿ ಕಾಂಗ್ರೆಸ್‍ನಿಂದ ಹೆಚ್ಚಿನ ಶಾಸಕರು ಆಯ್ಕೆಯಾಗಿದ್ದಾರೆ ಎಂಬ ಕಾರಣಕ್ಕಾಗಿ ಸರ್ಕಾರ ತಾರತಮ್ಯ ಮಾಡುತ್ತಿದೆ. ಮೊದಲು ಹೆಚ್ಚಿನ ಅನುದಾನ ಬಿಡುಗಡೆ ಮಾಡಲಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪ್ರಕಟಿಸುವ ಮೂಲಕ ಡಬ್ಬಲ್ ಇಂಜಿನ್ ಸರ್ಕಾರ ರಾಜ್ಯದ ಜನರಿಗೆ ಅನುಕೂಕ ಮಾಡಿಕೊಡಲಿ. ರಾಜಕಾರಣ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಲಿ ಎಂದರು.

K.S.Eshwarappa: 'ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ವಯಂಘೋಷಿತ ಮುಖ್ಯಮಂತ್ರಿ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News