ಬೆಂಗಳೂರು: RSS ತತ್ವವನ್ನು ಮಕ್ಕಳ ತಲೆಗೆ ತುಂಬಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಸಂಬಂಧ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಡಿಕೆಶಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ದೇಶ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ಶಿಕ್ಷಣ ಅಡಿಪಾಯ. ಆದರೆ ಪ್ರಸ್ತುತ ಬಿಜೆಪಿ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲೂ ರಾಜಕೀಯ ಮಾಡಲು ಹೊರಟಿದೆ. ನೈಜ ಇತಿಹಾಸವನ್ನು ತಿರುಚಿ, ಮುಂದಿನ ಪೀಳಿಗೆಗೆ ಹೊಸ ಇತಿಹಾಸವನ್ನು ನೀಡುವ ಕಾರ್ಯದಲ್ಲಿ ಮಗ್ನವಾಗಿದೆ. RSS ತತ್ವವನ್ನು ಮಕ್ಕಳ ತಲೆಗೆ ತುಂಬಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ’ ಎಂದು ಟೀಕಿಸಿದ್ದಾರೆ.
ದೇಶ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ಶಿಕ್ಷಣ ಅಡಿಪಾಯ. ಆದರೆ ಪ್ರಸ್ತುತ BJP ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲೂ ರಾಜಕೀಯ ಮಾಡಲು ಹೊರಟಿದೆ. ನೈಜ ಇತಿಹಾಸವನ್ನು ತಿರುಚಿ, ಮುಂದಿನ ಪೀಳಿಗೆಗೆ ಹೊಸ ಇತಿಹಾಸವನ್ನು ನೀಡುವ ಕಾರ್ಯದಲ್ಲಿ ಮಗ್ನವಾಗಿದೆ. RSS ತತ್ವವನ್ನು ಮಕ್ಕಳ ತಲೆಗೆ ತುಂಬಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ.
1/3— DK Shivakumar (@DKShivakumar) May 27, 2022
ಇದನ್ನೂ ಓದಿ: DK Sivakumar : 'ಒಂದು ಬಿಜೆಪಿಯವರಿಗೆ ಶರಣಾಗಬೇಕು, ಇಲ್ಲ ಅವರ ಜೊತೆ ಸೇರಿಕೊಳ್ಳಬೇಕು'
‘ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲೂ ಬಿಜೆಪಿ ಎಲ್ಲರ ವಿರೋಧವನ್ನು ಎದುರಿಸುತ್ತಿದೆ. ಬಿಸಿಯೂಟ ಯೋಜನೆ ಹಳ್ಳ ಹಿಡಿದಿದೆ, ಶಾಲೆಗಳಲ್ಲಿ ಮೂಲ ಸೌಕರ್ಯವಿಲ್ಲ. ಇದರ ನಡುವೆ NEP ಹೆಸರಿನಲ್ಲಿ ‘ನಾಗ್ಪುರ ಶಿಕ್ಷಣ ನೀತಿʼ ಜಾರಿಗೆ ತರುವ ಧಾವಂತಕ್ಕೆ ರಾಜ್ಯ ಸರ್ಕಾರ ಬಿದ್ದಿದೆ’ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.
‘ಶಿಕ್ಷಣ ಕ್ಷೇತ್ರವನ್ನು ಮತ್ತೆ ಸರಿಯಾದ ದಾರಿಗೆ ತರುವ ನಿಟ್ಟಿನಲ್ಲಿ ಶಿಕ್ಷಣ ತಜ್ಞರು, ಸಾಹಿತಿಗಳು, ಚಿಂತಕರು ಸೇರಿದಂತೆ ಸಂಬಂಧಪಟ್ಟ ಎಲ್ಲ ವರ್ಗದವರೂ ಧ್ವನಿಗೂಡಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಶಿಕ್ಷಣವು ಮಕ್ಕಳ ಭವಿಷ್ಯಕ್ಕೆ ಒಂದು ಭದ್ರ ಅಡಿಪಾಯ. ಆ ಅಡಿಪಾಯವು ಎಂದಿಗೂ ಅಲುಗಾಡದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ’ ಎಂದು ಡಿಕೆಶಿ ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರವನ್ನು ಮತ್ತೆ ಸರಿಯಾದ ದಾರಿಗೆ ತರುವ ನಿಟ್ಟಿನಲ್ಲಿ ಶಿಕ್ಷಣ ತಜ್ಞರು, ಸಾಹಿತಿಗಳು, ಚಿಂತಕರು ಸೇರಿದಂತೆ ಸಂಬಂಧಪಟ್ಟ ಎಲ್ಲ ವರ್ಗದವರೂ ಧ್ವನಿಗೂಡಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಶಿಕ್ಷಣವು ಮಕ್ಕಳ ಭವಿಷ್ಯಕ್ಕೆ ಒಂದು ಭದ್ರ ಅಡಿಪಾಯ. ಆ ಅಡಿಪಾಯವು ಎಂದಿಗೂ ಅಲುಗಾಡದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ.
3/3— DK Shivakumar (@DKShivakumar) May 27, 2022
ಇದನ್ನೂ ಓದಿ: RSS ಮೆಚ್ಚಿಸಲು ಬಿಜೆಪಿ ಸರ್ಕಾರ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ: ಕಾಂಗ್ರೆಸ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.