ಬೆಂಗಳೂರು: ಬಿಜೆಪಿಗರು 40% ಕಮಿಷನ್‌ ಲೂಟಿಯ ಹಣದಲ್ಲಿ ʼಕಮಿಷನ್‌ ಸಮಾವೇಶʼ ನಡೆಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಕಮಲಪಾಳಯದ ವಿರುದ್ಧ ಗುಡುಗಿದೆ.


COMMERCIAL BREAK
SCROLL TO CONTINUE READING

ಈ ಕುರಿತು ಸರಣಿ ಟ್ಟೀಟ್‌ ಮಾಡಿರುವ ಕೆಪಿಸಿಸಿ, ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮಾವೇಶವಲ್ಲ "ಕಮಿಷನ್ ಸಮಾವೇಶ" 40% ಕಮಿಷನ್ ಲೂಟಿಯ ಪಾಪದ ಹಣದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವ ಸಾಧನೆ ಹೇಳಿಕೊಳ್ಳುವಿರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ?. ನಿಮ್ಮದೇ ಪಕ್ಷದ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್‌ರನ್ನು ಕಮಿಷನ್ ಕಿರುಕುಳದಲ್ಲಿ ಕೊಂದಿದ್ದನ್ನು ಹೇಳಿಕೊಳ್ಳುವಿರಾ? ಎಂದು ಪ್ರಶ್ನಿಸಿದೆ.


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ 'ಎಸಿಬಿ' ರದ್ದುಗೊಳಿಸಿ ಅಧಿಕೃತ ಅಧಿಸೂಚನೆ!


ಅಲ್ಲದೆ, ಗುತ್ತಿಗೆದಾರರು ಸರ್ಕಾರದ ಕಮಿಷನ್ ಕಿರುಕುಳದ ಬಗ್ಗೆ ಪ್ರಧಾನಿಗೆ ಪತ್ರ ಬರೆದರೂ ಪ್ರಯೋಜನವಿಲ್ಲ, ಪತ್ರಿಕಾಗೋಷ್ಠಿ ನಡೆಸಿದರೂ ಉಪಯೋಗವಿಲ್ಲ, 40% ಕಮಿಷನ್ ಲೂಟಿ ನಿಂತೇ ಇಲ್ಲ. ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ನಿಮ್ಮ ಸರ್ಕಾರದ ಸಾಧನೆ ಏನು..? ಅಕ್ರಮಗಳನ್ನು ಮುಚ್ಚಿಕೊಳ್ಳುವುದೇ ಸಾಧನೆಯೇ..? ಸರ್ಕಾರ ಪರ್ಸೆಂಟೇಜ್ ಮೇಲೆ ನಡೆಯುತ್ತಿದೆಯೇ? ಗುತ್ತಿಗೆದಾರರು, ಜನಸಾಮಾನ್ಯರ ನಂತರ ಹೈಕೋರ್ಟ್ ಕೂಡ 40% ಸರ್ಕಾರದ ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿದೆ. ಸಿಎಂ ಬೊಮ್ಮಾಯಿ ಅವರೇ  ʼಬಿಜೆಪಿ ಬ್ರಷ್ಟೋತ್ಸವʼದ ಇಂತಹ ನಾಚಿಕೆಗೇಡಿನ ಸಂಗತಿ ಎದುರಿಟ್ಟುಕೊಂಡು ಯಾವ ಪುರುಷಾರ್ಥಕ್ಕೆ ಸಮಾವೇಶ ನಡೆಸುತ್ತಿದ್ದೀರಿ? ನಾಡಿನ ಎದುರು ತಲೆ ತಗ್ಗಿಸಬೇಕಾದ ಸಮಯವಿದು ಎಂದು ಕಿಡಿಕಾರಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.