ಹೃದಯಾಘಾತ: ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ನಿಧನ

R Dhruvanarayan Passes Away: ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಧ್ರುವನಾರಾಯಣ್‍ರನ್ನು ಮೈಸೂರಿನ DRMS ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.

Written by - Zee Kannada News Desk | Last Updated : Mar 11, 2023, 09:38 AM IST
  • ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ನಿಧನ
  • ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಅವರಿಗೆ 61 ವರ್ಷ ವಯಸ್ಸಾಗಿತ್ತು
  • ಹಠಾತ್ ಹೃದಯಾಘಾತ, ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ ಧ್ರುವನಾರಾಯಣ
ಹೃದಯಾಘಾತ: ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ನಿಧನ   title=
ಆರ್.ಧ್ರುವನಾರಾಯಣ ನಿಧನ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಶನಿವಾರ ಬೆಳಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಅವರಿಗೆ 61 ವರ್ಷ ವಯಸ್ಸಾಗಿತ್ತು. ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಧ್ರುವನಾರಾಯಣ್‍ರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.

ಆರ್.ಧ್ರುವನಾರಾಯಣ ನಿಧನದ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಇಂಥಾ ಒಳ್ಳೆಯ ವ್ಯಕ್ತಿಯನ್ನೂ ಕಿತ್ತುಕೊಂಡೆಯಲ್ಲಾ ದೇವರೇ... ಓಂ ಶಾಂತಿ’ ಎಂದು ಬರೆದುಕೊಂಡಿದ್ದಾರೆ. ಕೆಲವೇ ಹೊತ್ತಿನಲ್ಲಿ ಮೈಸೂರಿನತ್ತ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರು ಆಗಮಿಸಲಿದ್ದಾರೆ.

ಇದನ್ನೂ ಓದಿ: ಸಚಿವ ನಾರಾಯಣ ಗೌಡ ರಾಜೀನಾಮೆ? ಮುಂದೆ ‘ಕೈ’ ಸಹವಾಸವೋ.. ಪಕ್ಷೇತರ ಸ್ಪರ್ಧೆಯೋ?

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್.ಧ್ರುವನಾರಾಯಣ ನಂಜನಗೂಡು ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಿರ್ಧರಿಸಿದ್ದರು. ಈ ಹಿನ್ನೆಲೆ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು. ಧ್ರುವನಾರಾಯಣ ನಿಧನದ ಹಿನ್ನೆಲೆ ಇಂದು ಕಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಸುದ್ದಿಗೋಷ್ಠಿಯನ್ನು ರದ್ದುಪಡಿಸಲಾಗಿದೆ.

1983ರಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ್ದ ಧ್ರುವನಾರಾಯಣ ನಂತರ ಪಕ್ಷದ ಮುಖಂಡನಾಗಿ ಬೆಳೆದಿದ್ದರು. 2004ರಲ್ಲಿ ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ 2 ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರ ಸಂತೇಮರಹಳ್ಳಿ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್.ಕೃಷ್ಣಮೂರ್ತಿ ಎದುರು ಸೋಲು ಕಂಡಿದ್ದರು. ನಂತರ 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಅವರು ಕೃಷ್ಣಮೂರ್ತಿಯವರನ್ನು ಸೋಲಿಸಿದ್ದರು.

2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ದ್ರುವನಾರಾಯಣ ಸಂಸದರಾಗಿದ್ದರು. ಧ್ರುವನಾರಾಯಣ ಅವರು ಬೆಂಗಳೂರು ಕೃಷಿ ವಿವಿಯಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರ ನಿಧನಕ್ಕೆ ಅನೇಕ ರಾಜಕೀಯ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.  

ಇದನ್ನೂ ಓದಿ: ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಕೊಡ್ತಿದ್ದಂತೆ ಫುಲ್ ಖುಷ್ ಆದ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ! ಯಾಕೆ ಗೊತ್ತಾ?

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

 

Trending News