ಬೆಳಗಾವಿ: ರಮೇಶ್‌ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿರುವ ಯುವತಿಗೆ ಅನ್ಯಾಯ ‌ಆಗಿದ್ದರೆ ಹೊರ ಬಂದು ದೂರು ದಾಖಲಿಸಬೇಕು. ಸಿ.ಡಿ ಹಿಂದಿರುವ ಕಾಣದ ಕೈಗಳು ಹೊರ ಬರಲು ಪೊಲೀಸರಿಂದ ಸಮಗ್ರ ತನಿಖೆ‌ ಆಗಬೇಕು ಆಗಲೇ ಸತ್ಯಾಂಶ ಹೊರಬರುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ತಿಳಿಸಿದರು.


COMMERCIAL BREAK
SCROLL TO CONTINUE READING

ಯುವತಿ ಶನಿವಾರ ಬಿಡುಗಡೆ ಮಾಡಿದ ವಿಡಿಯೋಗೆ ಸಂಬಂಧಸಿದಂತೆ ನಗರದಲ್ಲಿ ಭಾನುವಾರ ಪ್ರತಿಕ್ರಿಯಿಸಿದ ಸತೀಶ್‌ ಜಾರಕಿಹೊಳಿ(Satish Jarkiholi), ರಮೇಶ್ ಜಾರಕಿಹೊಳಿ‌ ಈಗಾಗಲೇ ದೂರು ದಾಖಲಿಸಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರಿಂದ ತನಿಖೆ ಆಗುತ್ತಿದೆ. ತನಿಖೆ ಆದ ಬಳಿಕ ಸತ್ಯಾಂಶ ಹೊರಬರುತ್ತದೆ ಅಲ್ಲಿಯವರೆಗೆ ಎಲ್ಲರೂ ಕಾಯಲೇಬೇಕು ಎಂದರು.


FactCheck: ಕೊರೊನಾ ಭೀತಿ ಹಿನ್ನಲೆಯಲ್ಲಿ ಕಾಲೇಜುಗಳಿಗೆ ಮತ್ತೆ ರಜೆ ಘೋಷಿಸಿದೆಯೇ ಸರ್ಕಾರ?


ಸಿಡಿ ಪ್ರಕರಣ(CD Case)ದ ಬಗ್ಗೆ ನಮ್ಮ ಕಡೆಯೂ ಸಂಪೂರ್ಣ ಮಾಹಿತಿ ಇಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಉತ್ತರ ನೀಡಬೇಕು. ಇದರಲ್ಲಿ ರಾಜಕೀಯ ಷಡ್ಯಂತ್ರ ಇದೆಯೋ ಅಥವಾ ಇಲ್ಲವೋ‌ ಎಂಬುದು ನನಗೆ ಮಾಹಿತಿ ಇಲ್ಲ. ಒಂದು ವೇಳೆ ಯುವತಿಗೆ ಅನ್ಯಾಯವಾಗಿದ್ದರೆ ಅವಳಿಗೂ ಕಾನೂನಿನ ಚೌಕಟ್ಟಿನಲ್ಲಿ ಲೀಗಲ್ ಪ್ಲಾಟ್‌ಫಾರ್ಮ್‌ ಇದೆ ಎಂದರು.


BS Yediyurappa: ರಾಜ್ಯದಲ್ಲಿ ಹೆಚ್ಚಿದ ಕೊರೋನಾ: 'ಮತ್ತೆ ಲಾಕ್ ಡೌನ್, ನೈಟ್ ಕರ್ಫ್ಯೂ ಜಾರಿ ಇಲ್ಲ'


ಅದಕ್ಕೆ ಸಂತ್ರಸ್ತೆ ಹೊರ ಬಂದು ದೂರು ದಾಖಲಿಸಬೇಕು. ಪೊಲೀಸರ ಮುಂದೆ ಬಂದು ಹೇಳಿಕೆ ನೀಡಿದರೆ, ಪೊಲೀಸರ ತನಿಖೆಗೆ ಸಹಕಾರಿಯಾಗುತ್ತದೆ. ಆಗ ಸತ್ಯಾಂಶ ಹೊರಬರುತ್ತದೆ ಎಂದು ತಿಳಿಸಿದರು. ಇನ್ನು, ಸಿ.ಡಿ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸುವ ಪ್ರಯತ್ನ ನಡೆದಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar)‌ ಹೇಳಿಕೆಗೆ ಪ್ರತಿಕ್ರಿಯಿಸಿದ ಸತೀಶ್‌ ಜಾರಕಿಹೊಳಿ ಯಾರನ್ನು ಸುಖಾಸುಮ್ಮನೆ ಸಿಲುಕಿಸಲಾಗುವುದಿಲ್ಲ. ಇದೆಲ್ಲವೂ ಪೊಲೀಸರ ತನಿಖೆಯಿಂದ ಮಾತ್ರ ಸಾಧ್ಯ, ಅಲ್ಲಿಯವರೆಗೂ ಕಾಯಿರಿ ಎಂದು ಹೇಳಿದರು.


Basanagouda Patil Yatnal: 'SIT ತಂಡ'ದಲ್ಲಿ ವಿಜಯೇಂದ್ರ ಪರ ಇರುವ ಅಧಿಕಾರಿಗಳಿದ್ದಾರೆ: ಯತ್ನಾಳ್ ಹೊಸ ಬಾಂಬ್


ಇನ್ನು, ರಮೇಶ್‌ ಜಾರಕಿಹೊಳಿ(Ramesh Jarkiholi)ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಶನಿವಾರ ಅಜ್ಞಾತ ಸ್ಥಳದಿಂದ ವಿಡಿಯೋವೊಂದನ್ನು ಬಿಡುಗಡೆ ಮಾಡಿ, ತನಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಕೆಲಸ ಮಾಡುತ್ತೇನೆ ಎಂದು ಈ ರೀತಿ ಮೋಸ ಮಾಡಿದ್ದಾರೆ. ರಕ್ಷಣೆ ನೀಡಬೇಕೆಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಳು. ಅದಕ್ಕೂ ಮುನ್ನ ರಮೇಶ್‌ ಜಾರಕಿಹೊಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದರು.


DK Shivakumar: 'ನಾವು ಶ್ರೀರಾಮನ ಮಕ್ಕಳೇ, ಅದೇ ಸಂಸ್ಕೃತಿಯಲ್ಲಿ ಬೆಳೆದವರು'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.