KPSC : ಕೆಪಿಎಸ್‌ಸಿ ನೇಮಕಾತಿ, ಪಿಡಿಓ 97 ಹುದ್ದೆಗಳ ಅರ್ಜಿಗೆ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹೈದರಾಬಾದ್-ಕರ್ನಾಟಕ ವೃಂದದ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 97 ಹುದ್ದೆ ಅರ್ಜಿ ಆಹ್ವಾನಿಸಿದೆ.

Written by - Zee Kannada News Desk | Last Updated : Mar 26, 2024, 06:18 PM IST
  • ಗ್ರೂಪ್-ಸಿ ಹುದ್ದೆಗಳ ಭರ್ತಿಗೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 97 ಹುದ್ದೆ ಅರ್ಜಿ ಆಹ್ವಾನಿಸಿದೆ.
  • ಕರ್ನಾಟಕ ಲೋಕಸೇವಾ ಆಯೋಗ ಆಸಕ್ತ ಅಭ್ಯರ್ಥಿಗಳು 15/4/2024 ರಿಂದ 15/5/2024ರ ತನಕ ಅರ್ಜಿಗಳನ್ನು ಸಲ್ಲಿಸಬಹುದು.
  • ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 080-30574957/ 30574901 0821-2545956, 0831-2475345, 08472-227944, 08182-228099 ಸಂಪರ್ಕಿಸಬಹುದು.
KPSC : ಕೆಪಿಎಸ್‌ಸಿ ನೇಮಕಾತಿ, ಪಿಡಿಓ 97 ಹುದ್ದೆಗಳ ಅರ್ಜಿಗೆ ಆಹ್ವಾನ title=

ಹೈದರಾಬಾದ್-ಕರ್ನಾಟಕ ವೃಂದದ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 97 ಹುದ್ದೆ ಅರ್ಜಿ ಆಹ್ವಾನಿಸಿದೆ.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 97 ಹುದ್ದೆ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಲೋಕಸೇವಾ ಆಯೋಗ  ಆಸಕ್ತ ಅಭ್ಯರ್ಥಿಗಳು 15/4/2024 ರಿಂದ 15/5/2024ರ ತನಕ ಅರ್ಜಿಗಳನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕವನ್ನು ನಂತರದಲ್ಲಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ. 

ಇದನ್ನು ಓದಿ : Chota Kashi: ಈ ರಾಜ್ಯದಲ್ಲಿರುವ ಚೋಟಾ ಕಾಶಿ ಬಗ್ಗೆ ನಿಮಗೆಷ್ಟು ಗೊತ್ತು?

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಭಾರತದ ಕಾನೂನಿನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಈ ಹುದ್ದೆಗಳಿಗೆ 37,900 ರಿಂದ 70,850 ರೂ. ವೇತನವನ್ನು ನಿಗದಿ ಮಾಡಲಾಗಿದೆ.  ಒಮ್ಮೆ ಅರ್ಜಿ ಸಲ್ಲಿಕೆ ಮಾಡಿದ ಬಳಿಕ ಅರ್ಜಿಯಲ್ಲಿನ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ಬರುವ ಯಾವುದೇ ಮನವಿಗಳನ್ನು ತಿರಸ್ಕಾರ ಮಾಡಲಾಗುತ್ತದೆ. ಆದ್ದರಿಂದ ಎಲ್ಲಾ ವಿವರ ಓದಿ ಅರ್ಥೈಸಿಕೊಂಡು ವಿವರಗಳನ್ನು ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ.

ಶುಲ್ಕದ ವಿವರ:
ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ.ಗಳು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 300 ರೂ.ಗಳು. ಮಾಜಿ ಸೈನಿಕರಿಗೆ 50 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. 
ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿ ವಾಪಸ್ ನೀಡಲಾಗುವುದಿಲ್ಲ 
ಅದನ್ನು ಆಯೋಗವು ನಡೆಸುವ ಇತರ ಯಾವುದೇ ಪರೀಕ್ಷೆಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. 

ವಯೋಮಿತಿ : 
ಈ ಹುದ್ದೆಗೆ ಅಭ್ಯರ್ಥಿಗಳನ್ನು ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನಿಯಮ) ನಿಯಮ 1977ರಲ್ಲಿ ನಿರ್ದಿಷ್ಟಪಡಿಸಿರುವಂತೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಆಯಾ ಮೀಸಲಾತಿಗಳ ಮುಂದೆ ನೀಡಲಾಗಿರುವ ಕನಿಷ್ಠ ವಯೋಮಿತಿ ಹೊಂದಿರತಕ್ಕದ್ದು. ಗರಿಷ್ಠ ವಯೋಮಿತಿ ಮೀರಬಾರದು. 
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ, 2ಬಿ, 3ಎ, 3ಬಿ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಗರಿಷ್ಠ ವಯೋಮತಿ 40 ವರ್ಷಗಳು. ಕೆಪಿಎಸ್‌ಸಿ ಅಭ್ಯರ್ಥಿಗಳಿಗೆ ಪ್ರಮಖ ಮಾಹಿತಿಯೊಂದನ್ನು ನೀಡಿದೆ. 
ಈ ಅಧಿಸೂಚನೆಯು ಜಾರಿಯಾದ ಮೇಲೆ ಈ ಅಧಿಸೂಚನೆಯಲ್ಲಿ ನಮೂದಿಸಿರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರವು ಯಾವುದೇ ನಿಯಮಗಳು ಮತ್ತು ನಿರ್ದೇಶನಗಳನ್ನು ಜಾರಿ ಮಾಡಿದಲ್ಲಿ, ತಿದ್ದುಪಡಿ ಮಾಡಿದಲ್ಲಿ, ಪರಿಷ್ಕರಿಸಿದಲ್ಲಿ ಅವುಗಳನ್ನು ನೇಮಕಾತಿ ಪ್ರಕ್ರಿಯೆಯ ಸಮುಚಿತ ಹಂತದಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದೆ. 

ಇದನ್ನು ಓದಿ : ನಿತ್ಯ ಕುಡಿಯುವ ಕಾಫಿಗೆ ಈ ಎಣ್ಣೆ ಬೆರೆಸಿ... ಕೇವಲ 10 ನಿಮಿಷದಲ್ಲಿ ಬಿಳಿಕೂದಲು ಶಾಶ್ವತವಾಗಿ ಬುಡದಿಂದಲೇ ಕಪ್ಪಾಗುತ್ತೆ!

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 080-30574957/ 30574901 0821-2545956, 0831-2475345, 08472-227944, 08182-228099 ಸಂಪರ್ಕಿಸಬಹುದು. 
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ವಿಭಾಗದಲ್ಲಿ NOTIFICATION FOR POST OF PANCHAYAT DEVELOPMENT OFFICER (HK) IN RDPR DEPT ಅಧಿಸೂಚನೆ ನೋಡಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News