KPSC : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹೈದರಾಬಾದ್-ಕರ್ನಾಟಕ ವೃಂದದ ಗ್ರೂಪ್-ಬಿ ವೃಂದದ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 50 ಹುದ್ದೆಗಳಿದ್ದು, ಅರ್ಜಿ ಸಲ್ಲಿಕೆಯನ್ನು 15/4/2024 ರಿಂದ 14/5/2024ರ ತನಕ ಸಲ್ಲಿಸಬಹುದಾಗಿದೆ. 


COMMERCIAL BREAK
SCROLL TO CONTINUE READING

ಹುದ್ದೆಗಳು : 
ಪ್ರತಾಂಕಿತ ವ್ಯವಸ್ಥಾಪಕರು/ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು 19. ಕಾರ್ಖಾನೆಗಳ ಸಹಾಯಕ ನಿರ್ದೇಶಕರು 2. ಸಹಾಯಕ ಇಂಜಿನಿಯರ್ 8. ಭೂ ದಾಖಲೆಗಳ ಸಹಾಯಕ ನಿರ್ದೇಶಕರು 3. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕರು 3. ಭೂ ವಿಜ್ಞಾನಿ 15 ಸೇರಿ ಒಟ್ಟು 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.


ವಯೋಮಿತಿ : 
ಪ್ರತಾಂಕಿತ ವ್ಯವಸ್ಥಾಪಕರು/ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಗೆ 43,100-83,900 ರೂ. ಗಳು. ಕಾರ್ಖಾನೆಗಳ ಸಹಾಯಕ ನಿರ್ದೇಶಕರು 43,100-83,900 ರೂ.ಗಳು. ಸಹಾಯಕ ಇಂಜಿನಿಯರ್ ಬಿಬಿಎಂಪಿ 43,100-83,900 ರೂ.ಗಳು. ಭೂ ದಾಖಲೆಗಳ ಸಹಾಯಕ ನಿರ್ದೇಶಕರು 43,100-83,900ರೂ.ಗಳು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕರು 45,300-88,300 ರೂ.ಗಳು. ಭೂ ವಿಜ್ಞಾನಿ ಹುದ್ದೆಗೆ 43,100-83,900 ರೂ.ಗಳ ವೇತನ ನಿಗದಿ ಪಡಿಸಲಾಗಿದೆ.


ಇದನ್ನು ಓದಿ : Happiness Index : ವಿಶ್ವದ ಅತ್ಯಂತ ಸಂತೋಷಭರಿತ ದೇಶ ಫಿನ್ಲೆಂಡ್, ಭಾರತಕ್ಕೆ 126ನೇ ಸ್ಥಾನ


ವೇತನ : 
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ. ಪ್ರವರ್ಗ 2ಎ, ಪ್ರವರ್ಗ 2ಬಿ, ಪ್ರವರ್ಗ 3ಎ, ಪ್ರವರ್ಗ 3ಬಿ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 40 ವರ್ಷಗಳು.


ಶುಲ್ಕ : 
ಅರ್ಜಿ ಸಲ್ಲಿಸುವ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 300 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 150 ರೂ.ಗಳು, ಮಾಜಿ ಸೈನಿಕರಿಗೆ 50 ರೂ. ಶುಲ್ಕ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.


ವಿದ್ಯಾರ್ಹತೆ : 
 ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ನಿಗದಿ ಪಡಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು ಹಾಗೂ ಈ ಸಂಬಂಧ ಅರ್ಜಿ ಸಲ್ಲಿಸುವಾಗ Convocation/ PDC ಅನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು. ನಿಗದಿಪಡಿಸಿರುವ  ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. 


ಇದನ್ನು ಓದಿ : ‌Health Tips: ಲಟಿಕೆ ತೆಗೆಯುವ ಅಭ್ಯಾಸ ನಿಮ್ಮ ಜೀವಕ್ಕೆ ಕುತ್ತು ತರುತ್ತೆ ಹುಷಾರ್!


ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರಲ್ಲಿನ ಉಪಬಂಧಗಳಂತೆ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು, ಅರ್ಹ ಅಭ್ಯರ್ಥಿಗಳಿಗೆ ಸೂಚನಾ ಪತ್ರಗಳನ್ನು ಸ್ಪೀಡ್ ಪೋಸ್ಟ್ ಮೂಲಕ ರವಾನಿಸಲಾಗುವುದು ಅಥವಾ ಆಯೋಗವು ನಿರ್ಧರಿಸಿದಂತೆ ದಾಖಲೆಗಳನ್ನು ಪರಿಶೀಲಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ವಿಭಾಗದಲ್ಲಿ NOTIFICATION FOR THE VARIOUS GROUP-B(HK) POSTS IN VARIOUS DEPARTMENTS ಯನ್ನು ಓದಿಕೊಳ್ಳುವುದು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.