ದೇವೆಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ: ಕೃಷ್ಣಭೈರೇಗೌಡ

ಕಾಂಗ್ರೆಸ್ ಸರ್ಕಾರ ಕನ್ನಡಿಗರ ಅನುದಾನದ ಪಾಲನ್ನು ಪಡೆಯಲು ಸುಪ್ರೀಂ ಕೋರ್ಟಿಗೆ ಹೋಗಿ ಹೋರಾಟ ಮಾಡಿ ಜಯ ಸಾಧಿಸಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಹೇಳಿದರು.

Written by - Ranjitha R K | Last Updated : Apr 23, 2024, 01:32 PM IST
  • ಬಿಜೆಪಿ ವಿರುದ್ದ ಕೃಷ್ಣ ಭೈರೇಗೌಡ ವಾಗ್ದಾಳಿ
  • ಎಂ.ವಿ.ರಾಜೀವ್ ಗೌಡ ಪರ ಮತಯಾಚನೆ
  • ಕಾಂಗ್ರೆಸ್ ಪಕ್ಷದಿಂದ ಚುನಾವಣಾ ರೋಡ್ ಶೋ
ದೇವೆಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ: ಕೃಷ್ಣಭೈರೇಗೌಡ title=

ಬೆಂಗಳೂರು : ದೇವೇಗೌಡರು ದೇಶದ ಪ್ರಧಾನಿಯಾಗಿದ್ದು, ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್ ಪಕ್ಷದ ಸಹಕಾರದಿಂದಲೇ ಹೊರತು ಬಿಜೆಪಿ ಪಕ್ಷದಿಂದಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಿಡಿ ಕಾರಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ.ರಾಜೀವ್ ಗೌಡ ಪರ  ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಾದ್ಯಂತ ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಚುನಾವಣಾ ರೋಡ್ ಶೋ ಉದ್ದೇಶಿಸಿ ಸಚಿವ ಕೃಷ್ಣ ಭೈರೆಗೌಡ ಮಾತನಾಡುತ್ತಿದ್ದರು. ಕೇಂದ್ರ ಸರ್ಕಾರ ಆರು ಕೋಟಿ ಕನ್ನಡಿಗರಿಗೆ ಅನುದಾನ ಕಡಿತ ಮಾಡಿದ ವಿಚಾರದಲ್ಲಿ ಧ್ವನಿ ಎತ್ತದವರು, ಬರ ಪರಿಹಾರದಲ್ಲಿ ಆಗಿರುವ ಅನ್ಯಾಯದ ವಿರುದ್ದ ತುಟಿ ಬಿಚ್ಚದವರು ಈಗ ಪ್ರಧಾನಿಗಳ ಪಕ್ಕದಲ್ಲಿ ಕೂತು ಏನೇನೋ ಮಾತನಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಅನುದಾನದ ಪಾಲನ್ನು ಪಡೆಯಲು ಸುಪ್ರೀಂ ಕೋರ್ಟಿಗೆ ಹೋಗಿ ಹೋರಾಟ ಮಾಡಿ ಜಯ ಸಾಧಿಸಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಹೇಳಿದರು.

ಇದನ್ನೂ ಓದಿ : ನೇಹಾ ಕೊಲೆ ಪ್ರಕರಣ- ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ: ಬಸವರಾಜ ಬೊಮ್ಮಾಯಿ ಆರೋಪ

ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕ ರಾಜ್ಯಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅತಿ ಕಡಿಮೆ ಅನುದಾನ ನೀಡಿ ಸತತ ಹತ್ತು ವರ್ಷಗಳ ಕಾಲ ವಂಚನೆ ಎಸಗಿದೆ. ಇದನ್ನು ಡಬಲ್ ಇಂಜಿನ್ ಸರ್ಕಾರ ಇದ್ದಾಗಲೂ ಯಾವ ಬಿಜೆಪಿ ನಾಯಕರು ಕೂಡ ಪ್ರಶ್ನಿಸಲಿಲ್ಲ.ಬೇರೆ ಬೇರೆ ರಾಜ್ಯಗಳಿಗೆ ಕಣ್ಣ ಮುಂದೆಯೇ ವಿಶೇಷ ಪ್ಯಾಕೇಜುಗಳು ಘೋಷಣೆಯಾದಾಗಲೂ ಕೂಡಾ ಕರ್ನಾಟಕದ ಬಿಜೆಪಿ ಸಂಸದರು ಬಾಯಿ ಮುಚ್ಚಿಕೊಂಡಿದ್ದನ್ನು ಕನ್ನಡಿಗರು ಇನ್ನೂ ಮರೆತಿಲ್ಲ.ಹೀಗಾಗಿ ಕಾಂಗ್ರೆಸ್ ಸರ್ಕಾರ ಅನುದಾನಕ್ಕಾಗಿ ನ್ಯಾಯಾಲಯದ ಮೊರೆ ಹೋಗಬೇಕಾಯಿತು. ಕೊನೆಗೆ ಸರ್ವೋಚ್ಚ ನ್ಯಾಯಾಲಯವು ಒಂದು ವಾರದ ಒಳಗೆ ಕರ್ನಾಟಕಕ್ಕೆ ಬರಬೇಕಾದ ಪಾಲನ್ನು ಒಂದು ವಾರದೊಳಗೆ ಬಿಡುಗಡೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿದೆ. ಇದು ಆರು ಕೋಟಿ ಕನ್ನಡಿಗರ ಆತ್ಮಸಾಕ್ಷಿಯ ಹೋರಾಟಕ್ಕೆ ಸಂದ ಜಯ ಎಂದು ಸಚಿವ ಕೃಷ್ಣಭೈರೆಗೌಡ ಅಭಿಪ್ರಾಯಪಟ್ಟರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ.ರಾಜೀವಗೌಡ ಸುಸಂಸ್ಕೃತರು.ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದವರಿಗೆ ಬೆಂಗಳೂರಿಗರ ನೋವು ಅರ್ಥವಾಗುತ್ತದೆ. ಹೀಗಾಗಿ ಎಲ್ಲಿಂದಲೋ ಬಂದು ಬಿಜೆಪಿ ಪಕ್ಷದಿಂದ ಪ್ರತಿಷ್ಠಾಪನೆಗೊಂಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳದೇ ನಿಮ್ಮೊಂದಿಗೆ ಸದಾ ಕಾಲ ಜೊತೆಗಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ.ರಾಜೀವ್ ಗೌಡ ರನ್ನು ಲೋಕಸಭೆಗೆ ಕಳುಹಿಸಿಕೊಡಬೇಕೆಂದು  ಸಚಿವ ಕೃಷ್ಣ ಭೈರೆಗೌಡ ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ : ಸಿಎಂಗೆ ವಿದ್ಯಾರ್ಥಿನಿಯಿಂದ ಉಚಿತ ಬಸ್ ಟಿಕೆಟ್ ಗಳ ಮಾಲೆ : ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News