ಹೈಕಮಾಂಡ್ ನಮ್ಮ ತಪ್ಪೇನಾದರು ಇದ್ರೆ ಕರೆದು ಬುದ್ದಿ ಹೇಳಿ, ರಾಜ್ಯಾಧ್ಯಕ್ಷರನ್ನು ಘೋಷಿಸಿ : ಈಶ್ವರಪ್ಪ
ಕೇಂದ್ರ ಬಿಜೆಪಿ ನಾಯಕರು ರಾಜ್ಯದ ಬೆಳವಣಿಗೆಯನ್ನು ಗಮನಿಸುತ್ತಿದ್ದಾರೆ. ರಾಜ್ಯಾಧ್ಯಕ್ಷ ನೇಮಕ ವಿಚಾರವಾಗಿ ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ. ನಮ್ಮ ತಪ್ಪೇನಾದರು ಇದ್ದರೆ ಕರೆದು ಬುದ್ದಿ ಹೇಳಿ ಎಂದು ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ ಬಿಜೆಪಿ ಹೈಕಮಾಂಡ್ಗೆ ಮನವಿ ಮಾಡಿದರು.
ಶಿವಮೊಗ್ಗ : ರಾಜ್ಯದ ಬಿಜೆಪಿಯ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ಕಾರ್ಯಕರ್ತರು ಕೂಡ ಕೇಳುತ್ತಿದ್ದಾರೆ. ಕಾಂಗ್ರೆಸ್ ನವರು ಇದೇ ವಿಚಾರದಲ್ಲಿ ನಮ್ಮನ್ನು ಟೀಕಿಸುತ್ತಿದ್ದಾರೆ. ಸದನದಲ್ಲಿ ಲೇವಡಿ ಮಾಡುತ್ತಿದ್ದಾರೆ. ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರ ಬಿಜೆಪಿ ನಾಯಕರು ರಾಜ್ಯದ ಬೆಳವಣಿಗೆಯನ್ನು ಗಮನಿಸುತ್ತಿದ್ದಾರೆ. ರಾಜ್ಯಾಧ್ಯಕ್ಷ ನೇಮಕ ವಿಚಾರವಾಗಿ ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ. ನಮ್ಮ ತಪ್ಪೇನಾದರು ಇದ್ದರೆ ಕರೆದು ಬುದ್ದಿ ಹೇಳಿ, ನಮಗೆ ಗೊತ್ತಾಗದೆ ಯಾವುದಾದರೂ ತಪ್ಪಾಗಿರಬಹುದು ಎಂದರು.
ಇದನ್ನೂ ಓದಿ : ನೀರು ಬಿಡಲು ಸಾಧ್ಯವಿಲ್ಲವೆಂದು ನಾಳೆಯೇ ಸುಪ್ರೀಂಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ: ಸಿದ್ದರಾಮಯ್ಯ
ಅಲ್ಲದೆ, ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಆಸೆ. ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿ 28 ಸ್ಥಾನ ಗೆಲ್ಲಬೇಕಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನ ಘೋಷಿಸಬೇಕಾಗಿದೆ. ಸಂಸತ್ ಚುನಾವಣೆ ಹತ್ತಿರ ಬರುತ್ತಿದೆ. ಕಟೀಲರನ್ನೇ ಮುಮನದುವರೆಸುವುದಾದರೆ ಮುಂದುವರಿಸಲಿ. ಯಾವುದಾದರೂ ತೀರ್ಮಾನ ಬೇಗನೇ ತೀರ್ಮಾನ ತೆಗೆದುಕೊಳ್ಳಲಿ ಎಂದು ಪ್ರಾರ್ಥಿಸುತ್ತೆನೆ. ಕೇಂದ್ರದ ನಾಯಕರಿಗೂ ನಾನು ಮನವಿ ಮಾಡುತ್ತೆನೆ ಎಂದು ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.