ಬೆಂಗಳೂರು: ಸಂತೋಷ ಪಾಟೀಲ್ ಆತ್ಮಹತ್ಯೆ ವಿಚಾರವಾಗಿ ಪ್ರತಿಪಕ್ಷಗಳಿಂದ ತೀವ್ರ ಒತ್ತಡ ಬಂದಿರುವ ಹಿನ್ನಲೆಯಲ್ಲಿ ಕೊನೆಗೂ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಬೆಂಬಲಿಗರ ಜೊತೆ ಶಿವಮೊಗ್ಗದಿಂದ ಬೆಂಗಳೂರಿಗೆ ಆಗಮಿಸಿದ ಸಚಿವ ಕೆ ಎಸ್ ಈಶ್ವರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೆ ಎಸ್ ಈಶ್ವರಪ್ಪ ಅವರಿಗೆ ನೈತಿಕ ಬೆಂಬಲ ನೀಡಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಚಿವರಾದ ಮುರುಗೇಶ್ ನಿರಾಣಿ, ಎಂಟಿಬಿ ನಾಗರಾಜ್, ಬೈರತಿ ಬಸವರಾಜ, ಗೃಹ ಸಚಿವ ಆರಗ ಜ್ಞಾನೇಂದ್ರ ಉಪಸ್ಥಿತರಿದ್ದರು.


ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಸಚಿವ ಸ್ಥಾನದಿಂದ ಈಶ್ವರಪ್ಪ ಅವರನ್ನ ವಜಾ ಮಾಡುವ ಜೊತೆಗೆ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಸಿಎಂ ನಿವಾಸಕ್ಕೆ ಘೇರಾವ್ ಹಾಕಲು ಯತ್ನಿಸಿದ್ದರು.ಹಾಗೂ 24 ಗಂಟೆ ಆಹೋರಾತ್ರಿ ಧರಣಿಯನ್ನ ವಿಧಾನಸೌಧದಲ್ಲಿ ನಡೆಸಿದ್ದರು.ಕಾಂಗ್ರೆಸ್ ಪಕ್ಷದಿಂದ ಧರಣಿ ಹೆಚ್ಚಾಗುತ್ತಿದ್ದ ಬೆನ್ನಲ್ಲೇ ಈಶ್ವರಪ್ಪ ರಾಜೀನಾಮೆ ಸಲ್ಲಿಸುವುದಾಗಿ ಶಿವಮೊಗ್ಗದಲ್ಲಿ ನಿನ್ನೆ ಘೋಷಣೆ ಮಾಡಿದ್ದರು. 


KGF Chapter 2: ‘ಕೆಜಿಎಫ್ – 2’ ಚಿತ್ರದ ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ..?


ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡುತ್ತಿರುವ ಹಿನ್ನೆಲೆಯಲ್ಲಿ ರೇಸ್ ಕೋರ್ಸ್ ನ ಸಿಎಂ ನಿವಾಸದ ಮುಂದೆ ಈಶ್ವರಪ್ಪ ಪರವಾಗಿ ಅವರ ಬೆಂಬಲಿಗರು ಬೇಡ ಬೇಡ ರಾಜೀನಾಮೆ ಬೇಡ ಎಂದು ಘೋಷಣೆ ಕೂಗಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.