ಶಿವಮೊಗ್ಗ : ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ದಿ ಬಂದಂತೆ ಕಾಣುತ್ತಿದೆ. ಕಾವೇರಿ ನೀರು ಕಳ್ಳತನದಿಂದ ಬಿಡದೇ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಕಳ್ಳತನದಿಂದ ನೀರು ಬಿಟ್ಟಿರುವುದೇ ದೊಡ್ಡ ತಪ್ಪು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ರಾಜ್ಯ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.


COMMERCIAL BREAK
SCROLL TO CONTINUE READING

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಳ್ಳತನದಿಂದ ನೀರು ಬಿಟ್ಟಿದ್ದಕ್ಕೆ ಕಳ್ಳ ಎಂದರೆ ತಪ್ಪು ಇವರಿಗೆ. ಎಲ್ಲರ ಜೊತೆ ಮಾತುಕತೆ ನಡೆಸಿದ್ದರೆ ರಾಜ್ಯದ ಜನರು ಅವರ ಜೊತೆಗೆ ಇರುತ್ತಿದ್ದರು. ಸ್ಟಾಲಿನ್ ಎಂಬ ಪುಣ್ಯಾತ್ಮನಿಗಾಗಿ, ಇಂಡಿಯಾ ಸಂಸ್ಥೆ ಓಲೈಸಲು ಡಿ.ಕೆ. ಶಿವಕುಮಾರ್ ನೀರು ಬಿಟ್ಟಿದ್ದಾರೆ ಎಂದು ದೂರಿದರು.


ಇದನ್ನೂ ಓದಿ: ಹೈಕಮಾಂಡ್‌ ನಮ್ಮ ತಪ್ಪೇನಾದರು ಇದ್ರೆ ಕರೆದು ಬುದ್ದಿ ಹೇಳಿ, ರಾಜ್ಯಾಧ್ಯಕ್ಷರನ್ನು ಘೋಷಿಸಿ : ಈಶ್ವರಪ್ಪ


ಅಲ್ಲದೆ, ಸಿದ್ಧರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರಾಜ್ಯದ ಜನರಿಗೆ ದ್ರೋಹ ಮಾಡಿದ್ದಾರೆ. ಈಗ ವಕೀಲರು, ತಜ್ಞರು ಹಾಗೂ ಹಲವರನ್ನು ಕರೆದು ಮಾತುಕತೆ ನಡೆಸಿದ್ದಾರೆ. ಮೊದಲು ಕಳ್ಳ ಎಂದೆ, ಈಗ ದಡ್ಡರು ಎನ್ನಬೇಕಾಗಿದೆ. ನಾವು ಜನರ ಜೊತೆ ಇದ್ದೆವೆ ಎಂದು ಈಗ ಹೇಳುತ್ತಿದ್ದಾರೆ. ಇದಕ್ಕಿಂತ ಅನ್ಯಾಯ ಮತ್ತೇನಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ರೈತರು, ವಕೀಲರು ಹಾಗೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಂದೆ ಮುಖ್ಯಮಂತ್ರಿಗಳು ನೀರು ಬಿಟ್ಟಿದ್ದ ಉದಾಹರಣೆ ಇದೆ. ಇವರಿಬ್ಬರು ರಾಜ್ಯದ ಜನರ ಕ್ಷಮೆ ಕೋರಬೇಕು. ನೀರೆಲ್ಲಾ ಬಿಟ್ಟಾದ ಮೇಲೆ ಈಗ ಸಭೆ ನಡೆಸಿ ಉಪಯೋಗವೇನು...!? ಎಲ್ಲವೂ ಸಂವಿಧಾನಬದ್ಧವಾಗಿ ಆಗಬೇಕು. ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಚರ್ಚೆ ನಡೆಸದೇ ನೀರು ಬಿಟ್ಟಿದ್ದೆ ತಪ್ಪು ಎಂದರು.


ಇದನ್ನೂ ಓದಿ: ನೀರು ಬಿಡಲು ಸಾಧ್ಯವಿಲ್ಲವೆಂದು ನಾಳೆಯೇ ಸುಪ್ರೀಂಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ: ಸಿದ್ದರಾಮಯ್ಯ


ಅಲ್ಲದೆ, ಎಲ್ಲ ಪಕ್ಷದವರ ಜೊತೆ ಚರ್ಚಿಸಿ ನೀರು ಬಿಡಬೇಕಿತ್ತು. ಎಲ್ಲದಕ್ಕೂ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕೆಂಬುದು ಕೂಡ ತಪ್ಪು. ಬರ ಕೂಡ ಇದ್ದು, ರಾಜ್ಯಕ್ಕೆ ಎಷ್ಟು ನೀರು ಬೇಕು ಎಂದು ಸರ್ವೆ ಮಾಡಿಲ್ಲ. ಇದು ನೂರಾರು ವರ್ಷಗಳ ಸಮಸ್ಯೆ. ಚಲನಚಿತ್ರ ನಟರು ಬರಲಿಲ್ಲ ಎಂದು ಈಗ ಬೊಬ್ಬೆ ಹೊಡೆಯುತ್ತಿದ್ದಾರೆ. ನೀವು ನೀರು ಬಿಟ್ಟು ಬೇರೆಯವರ ಮೇಲೆ ಬೊಟ್ಟು ತೋರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.


ಜನ ಆಯ್ಕೆ ಮಾಡಿದ ಸರ್ಕಾರ 5 ವರ್ಷ ಇರಬೇಕು ಎಂಬುದು ನಮ್ಮ ಆಸೆ. ಪ್ರಧಾನಮಂತ್ರಿ ಮೇಲೆ ಆರೋಪ ಮಾಡುವುದೇ ಇವರ ಕೆಲಸವಾಗಿದೆ. ಅಕ್ಕಿ ಕೊಟ್ಟಿಲ್ಲ ಎಂದು ಆರೋಪಿಸಿದ್ದರು. ಈಗ ನೀರಿನ ಬಗ್ಗೆ ಆರೋಪಿಸುತ್ತಿದ್ದಾರೆ. ಬರ ಬಂದಿದೆ, ಎಷ್ಟು ದುಡ್ಡು ಬೇಕು ಅಂಕಿ ಅಂಶ ಕೇಂದ್ರಕ್ಕೆ ಕಳಿಸಿದ್ದಿರಾ...!? ರಾಜ್ಯದ ಹಿತಾಸಕ್ತಿ ಕಾಪಾಡಬೇಕೆಂದರೆ ಎಲ್ಲರೂ ಒಟ್ಟಾಗಿರಬೇಕು, ಇಡೀ ಕರ್ನಾಟಕವನ್ನು ಒಟ್ಟಾಗಿ ಕರೆದು ಕಾನೂನು ತಜ್ಞರ ಬಳಿ ಚರ್ಚಿಸಬೇಕು ಎಂದು ಸಲಹೆ ನೀಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.