ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೊತ್ತದ ಮಾರ್ಜಕಗಳನ್ನು (ಡಿಟರ್ಜೆಂಟ್ಸ್) ಮಾರಾಟ ಮಾಡಿದ್ದು, ಕಳೆದ 40 ವರ್ಷಗಳ ವಹಿವಾಟಿನ ಇತಿಹಾಸದಲ್ಲಿ ಇದೊಂದು ದಾಖಲೆಯಾಗಿದೆ ಎಂದು ಸಂಸ್ಥೆ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಕಳೆದ ತಿಂಗಳು ಕೆಎಸ್ಡಿಎಲ್ 852 ಟನ್ ಮಾರ್ಜಕಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ 775 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಅದನ್ನೀಗ ಮುರಿದು, ವಹಿವಾಟಿನಲ್ಲೂ ವಿಕ್ರಮ ಸಾಧಿಸಲಾಗಿದೆ' ಎಂದಿದ್ದಾರೆ.


ಇದನ್ನೂ ಓದಿ : 2024ರ ವಿಶ್ವಕಪ್’ಗೆ ತಂಡ ಪ್ರಕಟಿಸಿದ ಕೋಚ್: ಈ ನಾಲ್ವರು ಹೊಸ ಮುಖಗಳಿಗೆ ಮಣೆ ಹಾಕಿದ ಆಯ್ಕೆ ಸಮಿತಿ 


ಕೆಎಸ್ಡಿಎಲ್ ನಲ್ಲಿ ಇದುವರೆಗೆ ಮಾರ್ಜಕಗಳ ಉತ್ಪಾದನಾ ವಿಭಾಗದಲ್ಲಿ ಒಂದು ಪಾಳಿಯ ಕೆಲಸದ ವ್ಯವಸ್ಥೆ ಇತ್ತು. ಅದನ್ನೀಗ ಮೂರು ಪಾಳಿಗಳಿಗೆ ವಿಸ್ತರಿಸಲಾಗಿದೆ. ಜೊತೆಗೆ, ಈವರೆಗೆ ಸಂಸ್ಥೆಯಲ್ಲಿ ಮಾರ್ಜಕಗಳ ತಯಾರಿಕೆಗೆ ಕೇವಲ ಒಂದು ಯಂತ್ರ ಮಾತ್ರವಿತ್ತು. ಸರಕಾರಿ ಉದ್ದಿಮೆಗಳು ಖಾಸಗಿ ವಲಯದಂತೆಯೇ ಲಾಭ ಗಳಿಸಬೇಕೆಂಬ ಉದ್ದೇಶದಿಂದ ಈಗ ಈ ವಿಭಾಗದಲ್ಲಿ ಮೂರು ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಸಂಸ್ಥೆಯು ಮೊದಲಿನಿಂದಲೂ ಸಾಬೂನು ತಯಾರಿಕೆಗೆ ಹೆಸರುವಾಸಿಯಾಗಿದ್ದು, ಮಾರುಕಟ್ಟೆ ಕೂಡ ಅದರ ಸುತ್ತಲೇ ಕೇಂದ್ರೀಕೃತವಾಗಿತ್ತು. ಇತ್ತೀಚೆಗೆ ಮಾರ್ಜಕಗಳ ಮಾರಾಟಕ್ಕೂ ಹೆಚ್ಚಿನ ಗಮನ ಹರಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಅದು ಈಗ ಫಲ ನೀಡಿದೆ. ಮುಂದಿನ ದಿನಗಳಲ್ಲಿ ಖಾಸಗಿ ಕಂಪನಿಗಳ ಮಾರ್ಜಕಗಳಿಗೆ ಸಡ್ಡು ಹೊಡೆಯುವ ರೀತಿಯಲ್ಲಿ ಮಾರುಕಟ್ಟೆ ಜಾಲವನ್ನು ಅಖಿಲ ಭಾರತ ಮಟ್ಟದಲ್ಲಿ ವಿಸ್ತರಿಸಲಾಗುವುದು ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ : ಈ ಇಬ್ಬರು ಆಟಗಾರರನ್ನು ಪಡೆದ ಟೀಂ ಇಂಡಿಯಾವೇ ಜಗತ್ತಿನ ಅದೃಷ್ಟಶಾಲಿ ತಂಡ: ಇಂಗ್ಲೆಂಡ್ ಆಟಗಾರ ಹೊಗಳಿದ್ದು ಯಾರನ್ನು? 


ಹೋದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ 2023-24ನೇ ಹಣಕಾಸು ವರ್ಷದಲ್ಲಿ ಡಿಸೆಂಬರ್ ಅಂತ್ಯದವರೆಗೆ ಸಾಬೂನು, ಮಾರ್ಜಕ ಮತ್ತು ಕಾಸ್ಮೆಟಿಕ್ಸ್ ಉತ್ಪಾದನೆ ನಿಗದಿತ ಗುರಿಗಿಂತ ಹೆಚ್ಚಾಗಿದೆ. ಸಂಸ್ಥೆಯು ಹೋದ ಸಾಲಿನಲ್ಲಿ 118 ಕೋಟಿ ರೂ. ಲಾಭ ಗಳಿಸಿತ್ತು. ಈ ಹಣಕಾಸು ಸಾಲಿನ ಮೊದಲ ಒಂಬತ್ತು ತಿಂಗಳಲ್ಲಿ ಸಂಸ್ಥೆಯು 1,171 ಕೋಟಿ ರೂ. ಮೊತ್ದಷ್ಟು ವಹಿವಾಟು ನಡೆಸಿದೆ. ಈ ವರ್ಷಕ್ಕೆ ಒಟ್ಟು 1,404 ಕೋಟಿ ರೂ. ವಹಿವಾಟು ನಿಗದಿ ಪಡಿಸಲಾಗಿದ್ದು, ಇದನ್ನು ಮೀರುವುದರಲ್ಲಿ ಅನುಮಾನವಿಲ್ಲ ಎಂದು ಎಂ ಬಿ ಪಾಟೀಲ ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.