ನವದೆಹಲಿ: ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ 387 ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌(Website)ನಲ್ಲಿ ನೀಡಲಾಗಿರುವ ಅಧಿಸೂಚನೆಯನ್ನು ಓದುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  


COMMERCIAL BREAK
SCROLL TO CONTINUE READING

ಅರ್ಜಿದಾರರು KSPಯ http://rec21.ksp-online.in ಅಧಿಕೃತ ವೆಬ್‌ಸೈಟ್‌ನಲ್ಲಿ ಸೆಪ್ಟೆಂಬರ್ 6, 2021ರೊಳಗೆ ಈ ನೇಮಕಾತಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ ಸೆಪ್ಟೆಂಬರ್ 8, 2021 ಆಗಿದೆ. ಕೆಎಸ್‌ಪಿ ಪೊಲೀಸ್ ನೇಮಕಾತಿ(Karnataka State Police) 2021ಕ್ಕೆ ಅರ್ಜಿ ಸಲ್ಲಿಸುವ ಮುನ್ನ ಇತ್ತೀಚಿನ ಅಧಿಸೂಚನೆಯನ್ನು ಪರಿಶೀಲಿಸಲು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ.


ಇದನ್ನೂ ಓದಿ: Independence Day 2021: ‘ಅಮೃತ’ ಹೊಸ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ್ ಬೊಮ್ಮಾಯಿ


ಕೆಎಸ್‌ಪಿ ಕಾನ್ಸ್ಟೇಬಲ್ ನೇಮಕಾತಿ 2021: ಪ್ರಮುಖ ಮಾಹಿತಿ ಈ ಕೆಳಗಿನಂತಿದೆ


  • ಆನ್ಲೈನ್ ​​ಅರ್ಜಿ ಪ್ರಕ್ರಿಯೆಯ ಆರಂಭ ದಿನಾಂಕ - ಆಗಸ್ಟ್ 19, 2021

  • ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಕೊನೆಯ ದಿನಾಂಕ - ಸೆಪ್ಟೆಂಬರ್ 6, 2021

  • ಶುಲ್ಕ ಪಾವತಿಸಲು ಕೊನೆಯ ದಿನಾಂಕ - ಸೆಪ್ಟೆಂಬರ್ 8, 2021

  • ಪರೀಕ್ಷಾ ದಿನಾಂಕ - ಶೀಘ್ರದಲ್ಲೇ ಘೋಷಿಸಲಾಗುವುದು


ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹೀಗಿದೆ


ಲಿಖಿತ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಸಾಧನೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.


ಅಭ್ಯರ್ಥಿಗಳ ವಯೋಮಿತಿ


ಅಭ್ಯರ್ಥಿಗಳು ಮೀಸಲಾತಿ ಇಲ್ಲದ ವರ್ಗಕ್ಕೆ 19 ರಿಂದ 31 ವರ್ಷ ಮತ್ತು ಮೀಸಲಾತಿ ವರ್ಗಕ್ಕೆ 19 ರಿಂದ 33 ವರ್ಷ ವಯೋಮಿತಿಯೊಳಗಿರಬೇಕು.


ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ


ಅಭ್ಯರ್ಥಿಗಳು ಪಿಯುಸಿ II(CBSE) ಅಥವಾ 12ನೇ ತರಗತಿ(12nd PUC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.


ಪರೀಕ್ಷಾ ಅರ್ಜಿ ಶುಲ್ಕ


ಮೀಸಲಲ್ಲದ ಮತ್ತು ಒಬಿಸಿ ಅಭ್ಯರ್ಥಿಗಳಿಗೆ- 400 ರೂ. ಅರ್ಜಿ ಶುಲ್ಕವಿರುತ್ತದೆ


Direct link to apply online for KSP Constable Recruitment 2021 here


ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಇಲಾಖೆ(KSP Police)ಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: Big Fight: ಏಕವಚನದಲ್ಲಿಯೇ ಬಾಯಿಗೆ ಬಂದಂತೆ ಬೈದಾಡಿಕೊಂಡ ಜನಪ್ರತಿನಿಧಿಗಳು..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ