ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆಂದು ಕೆಎಸ್‌ಆರ್‌ಟಿಸಿ ತನ್ನ ಪ್ರಯಾಣಿಕರಿಗೆ ವಿಶೇಷ ಕೊಡುಗೆ ನೀಡಿದ್ದು, ಟಿಕೆಟ್ ದರದಲ್ಲಿ ಶೇ.10 ರಿಯಾಯಿತಿ ನೀಡುವುದಾಗಿ ಘೋಷಿಸಿದೆ. 


COMMERCIAL BREAK
SCROLL TO CONTINUE READING

ಹಬ್ಬದ ಸಂದರ್ಭದಲ್ಲಿ ಬೇರೆ ಊರುಗಳಿಗೆ ಹೋಗಿ ಬರುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಸುಖಕರ ಪ್ರಯಾಣಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜನವರಿ 11 ಹಾಗೂ 12 ರಿಂದಲೇ ವಿವಿಧ ಮಾರ್ಗಗಳಿಗೆ 500 ಹೆಚ್ಚವರಿ ಬಸ್ ಗಳನ್ನು ಬಿಡಲು ನಿರ್ಧರಿಸಿದೆ. 


ಅಷ್ಟೇ ಅಲ್ಲದೆ, ಹಬ್ಬದ ಸಮಯದಲ್ಲಿ ಟಿಕೆಟ್ ನಲ್ಲಿ ರಿಯಾಯಿತಿ ಕೂಡ ಘೋಷಣೆ ಮಾಡಿರುವ ಕೆಎಸ್‌ಆರ್‌ಟಿಸಿ, ನಾಲ್ಕಕ್ಕಿಂತ ಹೆಚ್ಚು ಮಂದಿ ಟಿಕೆಟ್ ಬುಕಿಂಗ್ ಮಾಡಿದರೆ ಶೇ.5 ಮತ್ತು ಹೋಗಿ-ಬರುವ ಎರಡೂ ಟಿಕೆಟ್ಗಳನ್ನು ಒಟ್ಟಿಗೇ ಬುಕ್ ಮಾಡಿದರೆ ಶೇ.10ರಷ್ಟು ರಿಯಾಯಿತಿ ನೀಡುವುದಾಗಿ ಘೋಷಣೆ ಮಾಡಿದೆ. ಪ್ರಯಾಣಿಕರು ಹೆಚ್ಚಿನ ಮಾಹಿತಿಗೆ ಸಂಸ್ಥೆಯ ವೆಬ್​ಸೈಟ್ ಗೆ ಭೇಟಿ ನೀಡುವಂತೆ ಕೆಎಸ್ಆರ್ಟಿಸಿ ವ್ಯವಸ್ಥಾಪಕರು ತಿಳಿಸಿದ್ದಾರೆ.


[[{"fid":"173900","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]