ಶಕ್ತಿ ಯೋಜನೆ ಶೀಘ್ರದಲ್ಲೇ ಸ್ಥಗಿತ ವದಂತಿಗೆ ಸ್ಪಷ್ಟೀಕರಣ ನೀಡಿದ ಕೆಎಸ್ಆರ್ಟಿಸಿ

ಸಾಮಾಜಿಕ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎನ್ನುವ ವದಂತಿ ವ್ಯಾಪಕವಾಗಿ ಹರಡಿರುವ ಬೆನ್ನಲ್ಲೇ ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಪಷ್ಟೀಕರಣ ನೀಡಿದೆ.

Written by - Manjunath N | Last Updated : Aug 16, 2023, 08:42 PM IST
  • "ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು,
  • ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ.
  • ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ.
ಶಕ್ತಿ ಯೋಜನೆ ಶೀಘ್ರದಲ್ಲೇ ಸ್ಥಗಿತ ವದಂತಿಗೆ ಸ್ಪಷ್ಟೀಕರಣ ನೀಡಿದ ಕೆಎಸ್ಆರ್ಟಿಸಿ title=

ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎನ್ನುವ ವದಂತಿ ವ್ಯಾಪಕವಾಗಿ ಹರಡಿರುವ ಬೆನ್ನಲ್ಲೇ ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಪಷ್ಟೀಕರಣ ನೀಡಿದೆ.

ಇದನ್ನೂ ಓದಿ: ಐತಿಹಾಸಿಕ ಕೆಂಪುಕೋಟೆಯಲ್ಲಿ ಕಾಂಗ್ರೆಸ್ ವಿರುದ್ಧ ಗುಡುಗಿದ ಪ್ರಧಾನಿ ಮೋದಿ!

ಈ ಕುರಿತಾಗಿ ಪ್ರಕಟಣೆ ನೀಡಿರುವ ಕೆಎಸ್ಆರ್ಟಿಸಿ "ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ.

.

ಇದನ್ನೂ ಓದಿ: Mandya: ಅನುಮಾನದ ಭೂತಕ್ಕೆ ಹೆಂಡತಿ ಕೊಂದು ಮಗನೊಂದಿಗೆ ಪತಿ ಎಸ್ಕೇಪ್!

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯು ಎಂದಿನಂತೆ ಮುಂದುವರೆಯಲಿದೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News