ಬಸ್ ನಲ್ಲಿ ಪಾನಮತ್ತ ಎಂದು ಹೇಳಲಾದ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಕಾಲಿನಿಂದ ದೂಡಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಲ್ಲಿ ನಿರ್ವಾಹಕನನ್ನು ಅಮಾನತು ಮಾಡಲಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Palmistry : ಅಂಗೈಯಲ್ಲಿರುವ ಈ ಗುರುತುಗಳು ರಾಜಯೋಗ ಸೂಚಿಸುತ್ತವೆ


ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಈಶ್ವರಮಂಗಲದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪಡುವನ್ನೂರು ಗ್ರಾಮದ ಪದಡ್ಕದ ನಿವಾಸಿ ಕೃಷ್ಣಪ್ಪ ಎಂಬುವವರು ಪದಡ್ಕಕ್ಕೆ ಹೋಗಲು ಬಸ್ಸನ್ನು ಹತ್ತಿದ್ದು, ಮದ್ಯಪಾನ ಮಾಡಿದ್ದಾನೆ ಎಂದು ಬಸ್ ನಿರ್ವಾಹಕ ಕೃಷ್ಣಪ್ಪರನ್ನು ಕೈಯಿಂದ ದೂಡಿ, ಹಲ್ಲೆ ನಡೆಸಿ ಕಾಲಿನಿಂದ ಒದ್ದಿರುವುದರಿಂದ ಪ್ರಯಾಣಿಕ ಕೃಷ್ಣಪ್ಪ ಕೆಳಗೆ ರಸ್ತೆಗೆ ಬಿದ್ದಿದ್ದಾರೆ. ಈ ಕೃತ್ಯದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕೃತ್ಯಕ್ಕೆ ಕಾರಣರಾದ ಬಸ್ ನಿರ್ವಾಹಕನನ್ನು ಅಮಾನತುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದರು. 


ಅದರಂತೆ ಕ್ರಮ ಕೈಗೊಳ್ಳಲಾಗಿದೆ. Ksrtc ಚಾಲನಾ ಸಿಬ್ಬಂದಿಗಳಿಗೆ ಸಾರ್ವಜನಿಕ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ನಿರಂತರ ತರಬೇತಿ ಹಾಗೂ ತಿಳುವಳಿಕೆ ನೀಡಿದ್ದಾಗ್ಯೂ ಸಹ ಈ ರೀತಿಯ ಘಟನೆ ನಡೆದಿರುವುದು ದುಃಖದ ಸಂಗತಿ. ನಿಗಮದ ಸಿಬ್ಬಂದಿಗಳಿಗೆ‌‌ ಇನ್ನೂ‌ ಹೆಚ್ಚಿನ ತರಬೇತಿ ನೀಡಿ ಪ್ರಯಾಣಿಕರೊಡನೆ ಸೌಜನ್ಯವಾಗಿ ವರ್ತಿಸುವ ಸಂಬಂಧ  ಕ್ರಮಕೈಗೊಳ್ಳಲಾಗುವುದು ಹಾಗೂ  ಈ ರೀತಿಯ ಘಟನೆಗಳಿಗೆ ಕಾರಣರಾಗುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ದೇಶದ 1319 ಜೈಲುಗಳಿಗೆ ಮಾದರಿಯಾದ ಪರಪ್ಪನ ಅಗ್ರಹಾರ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.