ಬೆಂಗಳೂರು: ನಾನು ನೀಲಿ ಚಿತ್ರಗಳನ್ನು ಪ್ರದರ್ಶನ ಮಾಡುತ್ತಿದ್ದೆ ಎಂದು ಆರೋಪ ಮಾಡಿರುವ ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.


COMMERCIAL BREAK
SCROLL TO CONTINUE READING

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.


ಇದನ್ನೂ ಓದಿ : ಪ್ರತಾಪ್‌ ಒಳ್ಳೆತನಕ್ಕೆ ಮನಸೋತ್ರಾ ಸಂಗೀತಾ ಶೃಂಗೇರಿ..! ಇನ್ಮುಂದೆ ಲವ್‌ ಪ್ರಪಂಚದಲ್ಲಿ ಹಾರುತ್ತಂತೆ ಡ್ರೋನ್‌ 


ನಾನು ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಟೂರಿಂಗ್ ಟಾಕೀಸ್‌ ಗಳನ್ನು ಇಟ್ಟಿದ್ದೇ. ಒಂದಲ್ಲ ಮೂರ್ನಾಲ್ಕು ಕಡೆ ಟೆಂಟ್‌ಗಳನ್ನು ಇಟ್ಟಿದ್ದೆ. ದೊಡ್ಡಆಲಹಳ್ಳಿ, ಹಾರೋಬೆಲೆ, ಕೋಡಿಹಳ್ಳಿಗಳಲ್ಲಿ ನಡೆಸುತ್ತಿದ್ದೆ. ಹುಣಸೇಹಳ್ಳಿಯಲ್ಲಿ ಈಗಲೂ ಟೆಂಟ್ ಇದೆ. ಈ ಊರುಗಳಿಗೆ ಹೋಗಿ ಮಾದ್ಯಮದವರೇ ಸಮೀಕ್ಷೆ ನಡೆಸಿ, ನಾನು ಯಾವ ಚಿತ್ರಗಳ ಪ್ರದರ್ಶನ ಮಾಡಿಸುತ್ತಿದ್ದೆ ಎಂದು ಜನರ ಬಳಿ ಕೇಳಿ.  ಕುಮಾರಸ್ವಾಮಿ ಅವರಿಗೆ ನೀವೆ ಉತ್ತರಿಸಿ ಎಂದರು.


ಇದನ್ನೂ ಓದಿ-ಚಳಿಗಾಲದಲ್ಲಿ ಕೇವಲ 20 ರೂ.ಗಳಿಗೆ ಸಿಗುವ ಈ 5 ತರಕಾರಿಗಳು ಇಡೀ ಋತುವಿನಲ್ಲಿ ನಿಮ್ಮ ಮಧುಮೇಹ ನಿಯಂತ್ರಣದಲ್ಲಿಡುತ್ತವೆ!


ಕುಮಾರಸ್ವಾಮಿ ಪದೇ, ಪದೇ ನಿಮ್ಮ ಮೇಲೆ ಸರಣಿ ಆರೋಪಗಳನ್ನು ಮಾಡುತ್ತಿರುವುದರ ಹಿಂದಿನ ಕಾರಣವೇನು ಎಂದು ಕೇಳಿದಾಗ "ಅವರು ದೊಡ್ಡವರು, ಏನೇ ಹೇಳಿದರು ನಾವು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ. ಅವರು ಬಳಸುತ್ತಾರೆ ಎಂದು ನಾನು ಏಕವಚನ ಬಳಸುವುದಿಲ್ಲ. ಅದು ಅವರ ಸಂಸ್ಕೃತಿ. ಅವರು ಕುಳಿತಿದ್ದ ಸ್ಥಾನ ದೊಡ್ಡದು, ಅದಕ್ಕೆ ಅವರಿಗೆ ಗೌರವ ಕೊಡುತ್ತೇನೆ" ಎಂದು ಹೇಳಿದರು.


ಪ್ರತಿದಿನ‌ ವೈಯಕ್ತಿಕ ದಾಳಿ ನಡೆಸುತ್ತಲೇ ಇದ್ದಾರಲ್ಲ ಎಂದಾಗ, "ಇದರಿಂದ ಅವರಿಗೆ ಯಶಸ್ಸು ದೊರೆಯುವುದಿದ್ದರೆ ದೊರೆಯಲಿ" ಎಂದು ಹಾರೈಸಿದರು.


https://bit.ly/3AClgDd
Apple Link - https://apple.co/3wPoNgr


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.