ಮಕ್ಕಳಲ್ಲಿನ ಅಪೌಷ್ಟಿಕತೆ ದೂರಮಾಡಿ ಪೌಷ್ಟಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಚಿಕ್ಕ ಚಿಕ್ಕ ಮಕ್ಕಳನ್ನು ಬಿಟ್ಟು ಕೂಲಿ ಸೇರಿದಂತೆ ಇತರೆ ಕೆಲಸಗಳಿಗೆ ಹೋಗುವ ಮಹಿಳೆಯರಿಗಾಗಿ ಸರ್ಕಾರ ಕೂಸಿನ ಮನೆ ಪ್ರಾರಂಭಿಸಿದೆ.
ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ನಾಗವಲ್ಲಿಯ ಕೆಪಿಎಸ್ ಶಾಲೆಯ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಆರಂಭವಾಗಿರುವ ಕೂಸಿನ ಮನೆಯನ್ನು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಉದ್ಘಾಟಿಸಿದರು.
ಇದನ್ನೂ ಓದಿ- ವರ್ಷಾಂತ್ಯವನ್ನ ಕಲರ್ ಫುಲ್ಲಾಗಿ ಸೆಲಬ್ರೆಟ್ ಮಾಡ್ಬೇಕು ಅಂದ್ರೆ ನಿಮಗೆ ರೂಮ್ ಸಿಗಲ್ಲ..!
ಇತ್ತೀಚಿನ ದಿನಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡಿ, ಪೌಷ್ಟಿಕತೆ ಹೆಚ್ಚಿಸಲು ಶಾಲಾ ಮಕ್ಕಳಿಗೆ ಮೊಟ್ಟೆ, ಹಾಲು, ಬಿಸಿಯೂಟದ ಮೂಲಕ ಪೌಷ್ಟಿಕ ಆಹಾರ ವಿತರಿಸಲಾಗುತ್ತಿದೆ. ಇಂತಹ ಸರಕಾರ ನೀಡುತ್ತಿರುವ ಯೋಜನೆಗಳ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ಸುರೇಶ್ ಗೌಡ ಮನವಿ ಮಾಡಿದರು.
ಇದನ್ನೂ ಓದಿ- ಉಡುಪಿ ಶ್ರೀಕಷ್ಣ ಮಠಕ್ಕೆ 4.5 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಅರ್ಪಿಸಿದ ತೆಲಂಗಾಣದ ಭಕ್ತ
ಮೇಲಾಧಿಕಾರಿಗಳು ಕೂಸಿನ ಮನೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಬೇಕಿದೆ. ನಾನೂ ಕೂಡ ಕೂಸಿನ ಮನೆಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ಸರಕಾರದ ಗಮನಕ್ಕೆ ತಂದು ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.