ಶಿವಮೊಗ್ಗ: ಯಾವುದೇ ರಾಜಕಾರಣಿ ಆಗಿರಲಿ ಸರ್ಕಾರಿ ಉನ್ನತ ಅಧಿಕಾರಿಯೇ ಆಗಿರಲಿ ತಮ್ಮ ಖಾಸಗಿ ಕಾರ್ಯಕ್ರಮಗಳಿಗೆ ಖಾಸಗಿಯಾಗಿಯೇ ಆಹ್ವಾನ ನೀಡುತ್ತಾರೆಯೇ ಹೊರತು. ಸರ್ಕಾಕದ ಲೆಟರ್ ಹೆಡ್ ನ್ನು ದುರ್ಬಳಿಕೆ ಮಾಡಿಕೊಳ್ಳುವುದಿಲ್ಲ.
ಆದರೆ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೇಸರ್ ವೀರಭದ್ರಪ್ಪ ತಮ್ಮ ಮಗಳ ಹುಟ್ಟು ಹಬ್ಬಕ್ಕೆ ಸರ್ಕಾರದ ಲೆಟರ್ ಹೆಡ್ ನಲ್ಲಿ ಆಹ್ವಾನಿಸಲು ಸುತ್ತೋಲೆ ಹೊರಡಿಸುವ ಮೂಲಕ ಎಡವಟ್ಟು ಮಾಡಿದ್ದಾರೆ.
ಕುವೆಂಪು ವಿಶ್ವವಿದ್ಯಾನಿಲಯದ ಲೋಗೋ ಇರುವ ಸರ್ಕಾರಿ ಲೆಟರ್ ನಲ್ಲಿ ಸುತ್ತೋಲೆ ಹೊರಡಿಸಿರುವ ಅವರು ಎಲ್ಲಾ ನೌಕರ ಸಿಬ್ಬಂದಿಗಳು ಖುದ್ದಾಗಿ ಹಾಜರಾಗುವಂತೆ ಫರ್ಮಾನು ರೀತಿಯಲ್ಲಿ ಆದೇಶ ಮಾಡಿದ್ದಾರೆ.
ಪತ್ರದ ಒಕ್ಕಣೆ ಈ ರೀತಿ ಇದೆ. ನನ್ನ ಮಗಳ ಜನ್ಮ ದಿನದ ಪ್ರಯುಕ್ತ ದಿನಾಂಕ 28-05-23 ರ ಮದ್ಯಾಹ್ನ 12.30 ಕ್ಕೆವಿಶ್ವನಿದ್ಯಾನಿಲಯದ ಆವರಣದಲ್ಲಿರವ ಕುಲಪತ್ರಿಗಳ ಗೃಹದಲ್ಲಿ ಸಂತೋಷ ಕೂಟವನ್ನು ಏರ್ಪಡಿಸಿದೆ.
ಇದನ್ನೂ ಓದಿ: Congress Government: 34 ಸಚಿವರು ಮತ್ತು ಖಾತೆ..! ಸಿದ್ದು ಸಂಪೂರ್ಣ ಸಂಪುಟ ಮಾಹಿತಿ ಇಲ್ಲಿದೆ
ವಿಶ್ವವಿದ್ಯಾನಿಲಯದ ಎಲ್ಲಾ ಅಧ್ಯಾಪಕರುಅದ್ಯಾಪೇಕತರ ನೌಕರರು ಅತಿಥಿ ಉಪನ್ಯಾಸಕರು ಏಜೆನ್ಸಿ ನೌಕರರುತಪ್ಪದೆ ಹಾಜರಾಗಬೇಕೆಂದು ಕೋರಲಾಗಿದೆ.ಇದನ್ನ ವೈಯಕ್ತಿಕ ಆಹ್ವಾನವೆಂದು ಭಾವಿಸಿ ಎಲ್ಲರೂ ಸಂತೋಷ ಕೂಟದಲ್ಲಿ ಭಾಗವಹಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದ ಎಲ್ಲಾ ವಿಭಾಗಗಳ ಮುಖ್ಯಸ್ಥರಿಗೂ ಸುತ್ತೋಲೆ ಹೊರಡಿಸಿದ್ದಾರೆ. ಸದ್ಯ ಕಾನೂನಿಗೆ ವಿರೋಧವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ