ಶೀಘ್ರದಲ್ಲೇ ಲಕ್ಕುಂಡಿ ಹಂಪಿ ವ್ಯಾಪ್ತಿಗೆ ಸೇರ್ಪಡೆ: ಸಿಎಂ ಬೊಮ್ಮಾಯಿ

CM Bommai : ಕಲ್ಯಾಣ ಚಾಲುಕ್ಯರ ವಾಸ್ತುಶಿಲ್ಪದ ಪ್ರಮುಖ ಕೇಂದ್ರವಾದ ಲಕ್ಕುಂಡಿಯನ್ನು ಹಂಪಿ ಸರ್ಕ್ಯೂಟ್ನಲ್ಲಿ ಸೇರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಅಲ್ಲದೇ ಈ ಕುರಿತು ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ಸಿಎಂ. ಬೊಮ್ಮಾಯಿ ತಿಳಿಸಿದ್ದಾರೆ.
ಲಕ್ಕುಂಡಿಯನ್ನು ಹಂಪಿ ಸರ್ಕ್ಯೂಟ್‌ಗೆ ಸೇರಿಸುವ ಪ್ರಸ್ತಾವನೆಯನ್ನು ಭಾರತ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ರೋನ್‌ನಲ್ಲಿ ನಡೆದ ಫಲಾನುಭವಿಗಳ ಸಮಾವೇಶದ ನೇಪಥ್ಯದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಇದಲ್ಲದೇ ರಾಜ್ಯದ ಸ್ಥಿಗತಿಯ ಕುರಿತು ಮಾತನಾಡಿದ ಅವರು, ಕೋವಿಡ್-19ರಿಂದ ಮೃತಪಟ್ಟ ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರ ಕುಟುಂಬಗಳಿಗೆ ಪರಿಹಾರ ನೀಡದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಮೃತರ ವಿವರ ಪಡೆದು ಮೃತರ ಕುಟುಂಬಕ್ಕೆ ಪರಿಹಾರ ವಿತರಿಸುವುದಾಗಿ ತಿಳಿಸಿದರು.
ಇದನ್ನೂ ಓದಿ-ಉದ್ಯೋಗಾಕಾಂಕ್ಷಿಗಳು, ಗುತ್ತಿಗೆದಾರರನ್ನು ವಂಚಿಸಲು ಮಹಿಳೆಯ DRDO ಕಮಾಂಡರ್ ಪೋಸ್..!
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಿಡಿ ಬಳಸಿ ಬಿಜೆಪಿಯ ಕೆಲವು ಸಚಿವರನ್ನು ಕಾಂಗ್ರೆಸ್‌ಗೆ ಸೇರಿಸಲು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂಬ ಪಕ್ಷದ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ಕುರಿತು ಕೇಳಿದಾಗ ಬೊಮ್ಮಾಯಿ, “ಸಿಡಿ ಬೆದರಿಕೆಯ ಬಗ್ಗೆ ರಮೇಶ್ ಜಾರಕಿಹೊಳಿ ಅವರಿಗೆ ತಿಳಿದಿರಬೇಕು. ಆದರೆ ಯಾವ ಸಚಿವರಿಗೂ ಸಿಗುವುದಿಲ್ಲ... ಎಂದು ಪ್ರತಿಪಕ್ಷದ ಬಗ್ಗೆ ಮಾತನಾಡಿದ್ದಾರೆ.
ಇದನ್ನೂ ಓದಿ-Bengaluru Airhostess: ಡೇಟಿಂಗ್ ಆ್ಯಪಲ್ಲಿ ಲವ್: ಮದುವೆಯಾಗು ಎಂದಿದ್ದಕ್ಕೆ ಗಗನಸಖಿ ಕೊಂದ ಟೆಕ್ಕಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.