14 ನೇ ಕರ್ನಾಟಕ ವಿಧಾನಸಭೆಯ ಕೊನೆಯ ಅಧಿವೇಶನ ಇಂದಿನಿಂದ ಆರಂಭ
14 ನೇ ಕರ್ನಾಟಕ ವಿಧಾನಸಭೆಯ ಕೊನೆಯ ಅಧಿವೇಶನ ಇಂದು ಬೆಳಿಗ್ಗೆ 11 ಗಂಟೆಗೆ ಆರಂಭವಾಗಿದೆ.
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆಯ ಈ ವರ್ಷದ ಮೊದಲ ಅಧಿವೇಶನ ಮತ್ತು 14 ನೇ ಕರ್ನಾಟಕ ವಿಧಾನಸಭೆಯ ಕೊನೆಯ ಅಧಿವೇಶನ ಇಂದು ಬೆಳಿಗ್ಗೆ 11 ಗಂಟೆಗೆ ಆರಂಭವಾಗಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಿದ್ದಾರೆ.
ಮುಂಬರಲಿರುವ ವಿಧಾನಸಭೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಮತ್ತು ಶಾಸಕರು ಮುಂಬರುವ ವಿಧಾನಸಭೆ ಚುನಾವಣೆಯತ್ತಲೇ ದೃಷ್ಟಿ ನೆಟ್ಟಿರುವುದರಿಂದ ಅಧಿವೇಶನದಲ್ಲಿ ರಾಜಕೀಯ ಚರ್ಚೆ, ಆರೋಪ-ಪ್ರತ್ಯಾರೋಪಗಳೇ ಪ್ರಮುಖ ಪಾತ್ರವಹಿಸಲಿದ್ದು, ಅಭಿವೃದ್ಧಿಗೆ ಪೂರಕವಾಗುವ ಚರ್ಚೆಗಳು ನಡೆಯುವ ಸಾಧ್ಯತೆ ಕಡಿಮೆ.
ಅಲ್ಲದೆ, ಹೆಚ್ಚುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆ, ಕೇಂದ್ರದ ಅನುದಾನ ಬಳಕೆಯಲ್ಲಿ ಸರ್ಕಾರದ ವೈಫಲ್ಯತೆ, ಸರ್ಕಾರದ ಅವಧಿ ಪೂರ್ಣಗೊಳ್ಳುವ ಸಂದರ್ಭದಲ್ಲಿ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿರುವುದು ಮೊದಲಾದ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಸದನದಲ್ಲಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಪ್ರತಿಪಕ್ಷಗಳು ಸನ್ನದ್ಧವಾಗಿರುವುದರಿಂದ ಕೋಲಾಹಲಕ್ಕೆ ಕಾರಣವಾಗುವ ಸಾಧ್ಯತೆ ಇದೆ.