ಪ್ರವಾಹ, ಕೋಮು ಗಲಭೆ ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡುವ 'ಸಾಂತ್ವನ ' ಯೋಜನೆಗೆ ಜಮೀರ್ ಅಹಮದ್ ಖಾನ್ ಚಾಲನೆ 

ಪ್ರವಾಹ, ಅಗ್ನಿ ದುರಂತ, ಕೋಮು ಗಲಭೆ ಹಾಗೂ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೇರವಾಗಲು 'ಸಾಂತ್ವನ ' ಯೋಜನೆ ಆರಂಭಿಸಿದೆ.

Written by - Prashobh Devanahalli | Edited by - Manjunath N | Last Updated : Oct 19, 2023, 06:17 PM IST
  • ಐದು ಲಕ್ಷ ರೂ. ಪೈಕಿ ಶೇ.50 ರಷ್ಟು ಅಂದರೆ 2.50 ಲಕ್ಷ ರೂ. ಸಾಲ, ಉಳಿದ 2.50 ಲಕ್ಷ ಸಬ್ಸಿಡಿ ದೊರೆಯಲಿದ್ದು ಸಾಲಕ್ಕೆ ಶೇ.3 ರಷ್ಟು ಬಡ್ಡಿ ವಿಧಿಸಲಾಗುವುದು.
  • ಈ ಮೊತ್ತದಲ್ಲಿ ಸಂತ್ರಸ್ತ ಕುಟುಂಬಗಳು ವ್ಯಾಪಾರ ಅಥವಾ ಇತರೆ ಉದ್ಯೋಗದಲ್ಲಿ ತೊಡಗಬಹುದುಎಂದು ತಿಳಿಸಿದರು.
  • ಅಲ್ಪಸಂಖ್ಯಾತರ ಸಮುದಾಯದ ಕುಟುಂಬಗಳಿಗೆ ಈ ಯೋಜನೆಯಡಿಯಲ್ಲಿ ನೆರವು ಸಿಗಲಿದೆ.
ಪ್ರವಾಹ, ಕೋಮು ಗಲಭೆ ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡುವ 'ಸಾಂತ್ವನ ' ಯೋಜನೆಗೆ ಜಮೀರ್ ಅಹಮದ್ ಖಾನ್ ಚಾಲನೆ  title=

ಬೆಂಗಳೂರು : ಪ್ರವಾಹ, ಅಗ್ನಿ ದುರಂತ, ಕೋಮು ಗಲಭೆ ಹಾಗೂ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೇರವಾಗಲು 'ಸಾಂತ್ವನ ' ಯೋಜನೆ ಆರಂಭಿಸಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್  ನೂತನ ಯೋಜನೆಗೆ ಚಾಲನೆ ನೀಡಿ, ಪ್ರಕೃತಿ ವಿಕೋಪ ಹಾಗೂ ಕೋಮು ಗಲಭೆ ಯಲ್ಲಿ ಸಂತ್ರಸ್ತರಾಗಿ ಮನೆ ಹಾಗೂ ಅಂಗಡಿ ಕಳೆದುಕೊಳ್ಳುವ ಕುಟುಂಬ ಗಳಿಗೆ ಐದು ಲಕ್ಷ ರೂ. ವರೆಗೆ ಸಾಲ ನೀಡುವ ಯೋಜನೆ ಇದಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಜೆಡಿಎಸ್​​ನಿಂದ ಸಿಎಂ ಇಬ್ರಾಹಿಂಗೆ ಗೇಟ್‌ ಪಾಸ್‌..! ಹೈಕೋರ್ಟ್‌ಗೆ ಹೋಗ್ತೀನಿ ಎಂದ ಮಾಜಿ ಅಧ್ಯಕ್ಷ

ಐದು ಲಕ್ಷ ರೂ. ಪೈಕಿ ಶೇ.50 ರಷ್ಟು ಅಂದರೆ 2.50 ಲಕ್ಷ ರೂ. ಸಾಲ, ಉಳಿದ 2.50 ಲಕ್ಷ ಸಬ್ಸಿಡಿ ದೊರೆಯಲಿದ್ದು ಸಾಲಕ್ಕೆ ಶೇ.3 ರಷ್ಟು ಬಡ್ಡಿ ವಿಧಿಸಲಾಗುವುದು. ಈ ಮೊತ್ತದಲ್ಲಿ ಸಂತ್ರಸ್ತ ಕುಟುಂಬಗಳು ವ್ಯಾಪಾರ  ಅಥವಾ ಇತರೆ ಉದ್ಯೋಗದಲ್ಲಿ ತೊಡಗಬಹುದುಎಂದು ತಿಳಿಸಿದರು.ಅಲ್ಪಸಂಖ್ಯಾತರ ಸಮುದಾಯದ ಕುಟುಂಬಗಳಿಗೆ ಈ ಯೋಜನೆಯಡಿಯಲ್ಲಿ ನೆರವು ಸಿಗಲಿದೆ. ಇದರಿಂದ ಸಂಕಷ್ಟ ಕ್ಕೆ ಸಿಲುಕುವ ಕುಟುಂಬಗಳಿಗೆ ನೆರವು ಸಿಗಲಿದೆ ಎಂದು ತಿಳಿಸಿದರು.ಇದಕ್ಕೂ ಮುನ್ನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿ ಸಭೆಯಲ್ಲಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಪಾಲ್ಗೊಂಡರು.ಕೆ ಎಂ ಡಿಸಿ ವ್ಯವಸ್ಥಾಪಕ ನಿರ್ದೇಶಕ ನಜೀರ್, ಇಲಾಖೆ ನಿರ್ದೇಶಕ ಮನೋಜ್ ಜೈನ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಬಿಜೆಪಿ ಷಡ್ಯಂತ್ರಕ್ಕೆ ನ್ಯಾಯಾಲಯ ಮತ್ತು ನನ್ನ ಆಸ್ತಿ ಪಟ್ಟಿ ಉತ್ತರ ಕೊಡುತ್ತೆ : ಡಿಸಿಎಂ ಡಿ.ಕೆ.ಶಿವಕುಮಾರ್

ಇದೇ ಸಂದರ್ಭದಲ್ಲಿ ಯೋಜನಾ ಸಚಿವ ಡಿ. ಸುಧಾಕರ್ ಅವರೊಂದಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯೋಜನೆಗಳ ಅನುಷ್ಠಾನ ಕುರಿತು ಚರ್ಚಿಸಿ ದರು.ಯೋಜನೆ ಇಲಾಖೆ ಸಚಿವ ಡಿ. ಸುಧಾಕರ್ ಅವರೊಂದಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯೋಜನೆ ಗಳ ಸಂಬಂಧ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಗುರುವಾರ ಕೆ ಎಂ ಡಿಸಿ ಸಭಾಂಗಣ ದಲ್ಲಿ ಸಭೆ ನಡೆಸಿದರು ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಗೃಹ ಮಂಡಳಿ ಆಯುಕ್ತ ರಾದ ಕವಿತಾ ಮಣ್ಣಿಕೇರಿ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News