ಬೆಳಗಾವಿ : ನಮ್ಮ ತಂದೆ ಅವರು ಈ ಬಾರಿ ಸಾರ್ವತ್ರಿಕ ಚುನಾವಣೆ ಸ್ವರ್ಧೆ ಮಾಡುತ್ತಾರೆ ಅಥಣಿ ಮತ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಮಾಜಿ ಡಿಸಿಎಂ ಹಾಗೂ ವಿಧಾನಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಅವರು ಸ್ಪೋಟಕ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಅಥಣಿಯಲ್ಲಿ ಮಾತನಾಡಿದ ಚಿದಾನಂದ ಸವದಿ, ನಾನು ಹೈಕಮಾಂಡಗೆ ನೇರವಾಗಿ ಹೇಳಲು ಇಚ್ಚಿಸುತ್ತೇನೆ. ನಾವು ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಕೊಡುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ಸವಾಲ್ ಹಾಕಿದ್ದಾರೆ. 


 ಇದನ್ನೂ ಓದಿ : Karnataka Assembly Election 2023 : ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗದಿಂದ ಭರ್ಜರಿ ತಯಾರಿ!


ಮತ್ತೋಂದು ಕಡೆ ರಮೇಶ್ ಜಾರಕಿಹೊಳಿ ವಿರುದ್ಧ ಚಿದಾನಂದ ಸವದಿ ಅಸಮಾಧಾನ ಹೊರಹಾಕಿದ್ದಾರೆ. ಒಬ್ಬ ಹೆಣ್ಣು ಮಕ್ಕಳಿಗೆ ನಾಯಿ, ನರಿ ಎಂದು ಸೆಡ್ಡು ಹೊಡೆಯುತ್ತಾರೆ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 


ಮತ್ತೋಂದು ಕಡೆ ಲಕ್ಷ್ಮಿ ಹೆಬ್ಬಾಳಕರ ಪರವಾಗಿ ಬ್ಯಾಟಿಂಗ್ ಮಾಡಿದ ಚಿದಾನಂದ ಸವದಿ, ಅಥಣಿ ಬಿಜೆಪಿ ಟಿಕೆಟ್ ಮಹೇಶ್ ಕುಮಟಳ್ಳಿ ಕೊಡಲಿಲ್ಲ ಅಂದ್ರೆ. ಗೋಕಾಕ್ ನಿಂದ ನಾನು ಸ್ಪರ್ಧೆ ಮಾಡುದಿಲ್ಲ ಎಂದು ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆ ಅಷ್ಟೇ ರಮೇಶ್ ಜಾರಕಿಹೊಳಿ ಅಥಣಿ ಕ್ಷೇತ್ರವನ್ನು ಬಿಟ್ಟು ಕೊಡುವುದಿಲ್ಲ. ಜಾರಕಿಹೊಳಿ ಮಹೇಶ್ ಕುಮಟಳ್ಳಿ ನೀಡಬೇಕೆಂದು ಬಿಜೆಪಿ ವರಿಷ್ಠರಿಗೆ ಸಂದೇಶ ರವಾನೆ ಮಾಡಿದ್ದರು.


 ಇದನ್ನೂ ಓದಿ : ಮಾನಸಿಕ ಒತ್ತಡ ಧ್ರುವನಾರಾಯಣರನ್ನು ಬಲಿ ಪಡೆಯಿತು: ಶಾಸಕ ಎನ್.ಮಹೇಶ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.