ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್

R Ashok Statement: ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಅವರು,  ಬಜೆಟ್ ತಯಾರಿಕೆ ಎನ್ನುವುದು ಗಂಭೀರ ಹಾಗೂ ಪವಿತ್ರವಾದ ಸಾಂವಿಧಾನಿಕ ಕರ್ತವ್ಯ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘ಅಡ್ಡಕಸುಬಿʼ ಬಜೆಟ್‌’ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂದು ಹೇಳಿದ್ದಾರೆ.

Written by - Bhavishya Shetty | Last Updated : Feb 16, 2024, 01:41 PM IST
    • ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ
    • ಪವಿತ್ರ ಸಾಂವಿಧಾನಿಕ ಕರ್ತವ್ಯವನ್ನು ಚುನಾವಣಾ ಭಾಷಣವಾಗಿಸಿ ದುರ್ಬಳಕೆ
    • ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಆರ್ ಅಶೋಕ್
ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ title=
Budget 2024

ಬೆಂಗಳೂರು: ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 'ಅಡ್ಡಕಸುಬಿ ಬಜೆಟ್‌ʼ ಮಂಡಿಸಿದ್ದು, ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಟುವಾಗಿ ಟೀಕಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಅವರು,  ಬಜೆಟ್ ತಯಾರಿಕೆ ಎನ್ನುವುದು ಗಂಭೀರ ಹಾಗೂ ಪವಿತ್ರವಾದ ಸಾಂವಿಧಾನಿಕ ಕರ್ತವ್ಯ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘ಅಡ್ಡಕಸುಬಿʼ ಬಜೆಟ್‌’ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:  Karnataka Budget 2024 : ಸಿದ್ದರಾಮಯ್ಯ ಲೆಕ್ಕದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಸಿಕ್ಕಿದೆಷ್ಟು ? 

ಸಾಧನೆಯ ಬಲದಿಂದಾಗಲೀ, ಅಭಿವೃದ್ಧಿ ಕೆಲಸಗಳಿಂದಾಗಲೀ, ಲೋಕಸಭೆ ಚುನಾವಣೆ ಎದುರಿಸುವುದು ಅಸಾಧ್ಯವೆಂದು ತಿಳಿದಿರುವ ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡನೆಯ ಪವಿತ್ರ ಸಾಂವಿಧಾನಿಕ ಕರ್ತವ್ಯವನ್ನು ಚುನಾವಣಾ ಭಾಷಣವಾಗಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಸಂವಿಧಾನಕ್ಕೆ ಮತ್ತು ಮತ ನೀಡಿ ಅಧಿಕಾರ ಕೊಟ್ಟ ಕನ್ನಡಿಗರಿಗೆ ಅಪಮಾನ ಎಸಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಲಾ 44,000 ರೂ. ಸಾಲಭಾಗ್ಯ 

ತಮ್ಮ ಮೊದಲ ಅವಧಿಯಲ್ಲಿ 1 ಲಕ್ಷ ಕೋಟಿ ರೂ.ಗೂ ಹೆಚ್ಚು ಸಾಲ ಮಾಡಿ ಪ್ರತಿ ಪ್ರಜೆಯ ತಲೆಯ ಮೇಲೆ 44,000 ರೂ. ಗೂ ಅಧಿಕ ಸಾಲದ ಹೊರೆ ಹೇರಿದ್ದು ಮುಖ್ಯಮಂತ್ರಿ ಸಿದ್ದರಾಮ್ಯಯನವರ ದೊಡ್ಡ ಸಾಧನೆ. ಆ ಭಾಗ್ಯ, ಈ ಭಾಗ್ಯ ಎಂದು ರಾಜ್ಯದ ಜನತೆಯ ಮೇಲೆ ʼಸಾಲ ಭಾಗ್ಯʼ ಹೊರಿಸಿ, ಹಳಿ ತಪ್ಪಿದ್ದ ವಿತ್ತೀಯ ಶಿಸ್ತನ್ನು ನಂತರ ಬಂದ ಬಿಜೆಪಿ ಸರ್ಕಾರ ಕೋವಿಡ್ ಸಂಕಷ್ಟದ ಹೊರತಾಗಿಯೂ ಸರಿ ದಾರಿಗೆ ತಂದಿತ್ತು. ಆದರೆ ಈಗ ಎರಡನೇ ಅವಧಿಯಲ್ಲೂ ಸಿಎಂ ಸಿದ್ದರಾಮಯ್ಯನವರು ಕರ್ನಾಟಕವನ್ನು ದೊಡ್ಡ ಸಾಲದ ಸುಳಿಯಲ್ಲಿ ಸಿಲುಕಿಸಲು ಹೊರಟಿದ್ದಾರೆ. "ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು" ಎಂಬುದು ಈ ಸರ್ಕಾರದಲ್ಲಿ "ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ" ಎಂಬಂತಾಗಿದೆ ಎಂದರು.

ಕೇಂದ್ರದ ಮೇಲೆ ಆರೋಪ: ಬಜೆಟ್‌ ಪುಸ್ತಕದಲ್ಲಿ ಸುಳ್ಳುಗಳು

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ದ್ವೇಷ ಭಾಷಣವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಸಂಪತ್ತಿನ ಶೇಖರಣೆ, ಅಸಮಾನತೆ ಎಂಬ ಹಳೆಯ ವಾದವನ್ನೇ ಜನರ ಮುಂದಿಟ್ಟಿದ್ದಾರೆ. ಹೀಗೆ ಹೇಳುತ್ತಲೇ ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಅನ್ನು ಬೇರೆ ಯೋಜನೆಗಳಿಗೆ ಬಳಸಿದ್ದಾರೆ. ಬೊಕ್ಕಸದಲ್ಲಿ ಹಣವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಪರೋಕ್ಷವಾಗಿ ಹೇಳಿದ್ದು, ಹಾಗೆನೂ ಇಲ್ಲ ಎಂದು ಬಜೆಟ್‌ನಲ್ಲಿ ಸಮರ್ಥಿಸಿಕೊಂಡಿದ್ದಾರೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

15 ನೇ ಹಣಕಾಸು ಯೋಜನೆಯಡಿ ವಿಶೇಷ ಅನುದಾನ ಎಂಬ ಹಸಿ ಸುಳ್ಳನ್ನು ಬಜೆಟ್‌ ಪುಸ್ತಕದಲ್ಲಿ ಸೇರಿಸಿದ್ದಾರೆ. ಈ ರೀತಿಯ ಶಿಫಾರಸನ್ನು ಮಾಡಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅಲ್ಲದೆ ರಾಜ್ಯಕ್ಕೆ ಎಷ್ಟು ನಷ್ಟವಾಗಿದೆ ಎಂಬ ಹೊಸ ತಲೆ ಬುಡವಿಲ್ಲದ ಲೆಕ್ಕವನ್ನು ನೀಡಿದ್ದಾರೆ. 2004-2014 ರ ಅವಧಿಯಲ್ಲಿ ಯುಪಿಎ ನೀಡಿದ್ದು 81,795 ಕೋಟಿ ರೂ. 2014-2024 ರ ಅವಧಿಯಲ್ಲಿ ಮೋದಿ ಸರ್ಕಾರ ನೀಡಿರುವುದು 2,82,791 ಕೋಟಿ ರೂ. ಅಂದರೆ ಈ ಪ್ರಮಾಣ 242% ಕ್ಕೂ ಅಧಿಕ ಎಂದು ಆರ್.ಅಶೋಕ ಸತ್ಯಾಂಶವನ್ನು ವಿವರಿಸಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ಜನರ ಆದಾಯ ಹೆಚ್ಚಿದೆ ಎಂದಿದ್ದಾರೆ. ಒಂದು ಕಡೆ ವಿದ್ಯುತ್‌ ದರ ಏರಿಕೆ, ರೈತರ ಪಂಪ್‌ಸೆಟ್‌ಗೆ ವಿದ್ಯುತ್‌ ಕಡಿತ, ಕಿಸಾನ್‌ ಸಮ್ಮಾನ್‌ ನಿಧಿ ಸ್ಥಗಿತ, ವಿದ್ಯಾನಿಧಿ ಸ್ಥಗಿತ, ಹೈನುಗಾರರಿಗೆ ಹಾಲಿನ ಪ್ರೋತ್ಸಾಹಧನ ಸ್ಥಗಿತ, ಮುದ್ರಾಂಕ ಶುಲ್ಕ ದರ ಏರಿಕೆ ಮೊದಲಾದವುಗಳ ಮೂಲಕ ಜನರಿಗೆ ದರ ಏರಿಕೆಗಳ ಬರೆ ಹಾಕಿದ್ದಾರೆ ಎಂದು ಹೇಳಿದ್ದಾರೆ. 

ಒಟ್ಟಿನಲ್ಲಿಈ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್. ಬಜೆಟ್ ಬಗೆಗಿನ ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಇದು‌ ‌'ಸಾಲರಾಮಯ್ಯನ ಸೋಗಲಾಡಿ' ಬಜೆಟ್ ಆಗಿದೆ ಎಂದು ಟೀಕಿಸಿದ್ದಾರೆ.

ಪದೇ ಪದೆ ಆರೋಪ

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ, ಮುಖ್ಯಮಂತ್ರಿಗಳು ವಿಧಾನಸಭೆಯ ಒಳಗೆ ಕಾಂಗ್ರೆಸ್‌ನ ಶಾಲು ಧರಿಸಿಕೊಂಡು ಬಜೆಟ್‌ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ನಿರಂತರವಾಗಿ ಆರೋಪ ಮಾಡಿ ತೆಗಳಿದ್ದಾರೆ. 15 ನೇ ಹಣಕಾಸು ಆಯೋಗವಿದ್ದಾಗ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದರು. ಅದಕ್ಕೆ ಅವರೇ ಒಪ್ಪಿಗೆ ಕೊಟ್ಟು ಈಗ ಅನ್ಯಾಯ ಆಗಿದೆ ಎಂದರೆ ಕುಣಿಯಲಾಗದವರು ನೆಲ ಡೊಂಕು ಎಂದಂತಾಗುತ್ತದೆ. ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಬೇಕು. ಇಡೀ ದೇಶಕ್ಕೆ ಇವರೊಬ್ಬರೇ ತೆರಿಗೆ ಪಾವತಿಸುವಂತೆ ಮಾತಾಡುತ್ತಾರೆ. ಕೇಂದ್ರ ಸರ್ಕಾರದಿಂದ ಅನುದಾನ ತರುವುದು ಹೇಗೆಂದು ಯೋಚಿಸದೆ ತೆಗಳುವ ಕೆಲಸ ಮಾಡಿರುವುದರಿಂದ ನಾವು ಸಭಾತ್ಯಾಗ ಮಾಡಿದ್ದೇವೆ ಎಂದರು.

ಹಿಂದೆ ಬಿಜೆಪಿ ಬಜೆಟ್‌ ಮಂಡನೆ ವೇಳೆ ಕಾಂಗ್ರೆಸ್‌ನವರು ಕಿವಿ ಮೇಲೆ ಹೂ ಇಟ್ಟುಕೊಂಡಿದ್ದರು. ಆದರೆ ಈಗ ನಾವು ಪ್ರತಿಭಟಿಸಿದ್ದನ್ನು ಸ್ಪೀಕರ್‌ ಮಾಧ್ಯಮಕ್ಕೆ ತಿಳಿಯದಂತೆ ಮಾಡಿದ್ದಾರೆ. ರಾಜ್ಯಕ್ಕೆ 14,000 ಕೋಟಿ ರೂ. ಆದಾಯ ಕಡಿಮೆಯಾದರೆ, ಕೇಂದ್ರದಿಂದ ಬರುವ ಅನುದಾನ 3,000 ಕೋಟಿ ರೂ. ಹೆಚ್ಚಿದೆ. ಸಿಎಂ ಸಿದ್ದರಾಮಯ್ಯನವರು 7 ಕೋಟಿ ಕನ್ನಡಿಗರ ಮೇಲೆ ತೆರಿಗೆಯ ಜೊತೆಗೆ ಸಾಲದ ಹೊರೆ ಹಾಕಿದ್ದಾರೆ. ಒಟ್ಟು ಸಾಲ 1 ಲಕ್ಷ ಕೋಟಿ ರೂ. ದಾಟಿದೆ. ಸಾಲವನ್ನು ಈ ಮಟ್ಟಕ್ಕೆ ದಾಟಿಸಿದ ಮೊದಲ ಮುಖ್ಯಮಂತ್ರಿ ಇವರೇ ಎಂದರು.

ಇದನ್ನೂ ಓದಿ: 2024-25 ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ನಲ್ಲಿ ಪೌರಾಡಳಿತ ಇಲಾಖೆಯ ಘೋಷಣೆಗಳು

ಲೂಟಿ ಹೊಡೆದ ಹಣವನ್ನು ಸಾಗಿಸಲು ಸುರಂಗ ಯೋಜನೆ ರೂಪಿಸಿದ್ದಾರೆ. ಬಿ.ಎಸ್‌.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಉತ್ತಮ ಅನುದಾನ ನೀಡಿದ್ದಾರೆ. ಆದರೆ ಈಗಿನ ಬಜೆಟ್‌ನಲ್ಲಿ ಬೆಂಗಳೂರಿಗೆ ಅನುದಾನವೇ ಇಲ್ಲ. ಇದು ಚುನಾವಣೆಗಾಗಿ ಮಾಡಿದ ಬೋಗಸ್‌ ಬಜೆಟ್‌ ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News