ಬೆಂಗಳೂರು: ಈ ರಾಜ್ಯದಲ್ಲಿ ಅರಬೆಂದ ಗೃಹ ಸಚಿವನೊಬ್ಬ ಇದ್ದಾನೆ. ಆತ ಯಾವಾಗಲೂ ನಷೆಯಲ್ಲಿ ಇದ್ದ ಹಾಗೆ ಮಾತನಾಡುತ್ತಾನೆ. ಎಣ್ಣೆ ಕುಡಿಯಲ್ಲ ಅನಿಸುತ್ತೆ, ಆದರೆ ಅವರು ಗಾಂಜಾ ಹೊಡಿತಾರೆ ಅನಿಸುತ್ತೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಸೋಮವಾರ ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರನಿಗೆ ಏನು ಮಾತನಾಡಬೇಕು ಅನ್ನೋದೇ ಗೊತ್ತಿಲ್ಲ. ಹೀಗಾಗಿ ಸುಮ್ಮನೇ ಏನೇನೋ ಮಾತನಾಡ್ತಾನೆ ಎಂದು ಏಕವಚನದಲ್ಲಿ ಕಿಡಿಕಾರಿದರು.


ಇದನ್ನೂ ಓದಿ: National Herald Case: ಇಡಿ ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಖರ್ಗೆ


ಮಾಜಿ ಸಚಿವ ರಾಮಲಿಂಗ ರೆಡ್ಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮದುವೆ ಆದರು. ಆದರೆ, ಸಂಸಾರವನ್ನೇ ಮಾಡಲಿಲ್ಲ. ಹೆಂಡತಿ ಜೊತೆಗೆ ಇದ್ದಿದ್ರೆ ಬೆಲೆ ಏರಿಕೆ ಬಿಸಿ ಅವರಿಗೆ ಗೊತ್ತಾಗುತಿತ್ತು ಎಂದು ವ್ಯಂಗ್ಯವಾಡಿದರು.


ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ಚುನಾವಣೆ ಗೆದ್ದ ತಕ್ಷಣ ಜನರನ್ನು ಲೂಟಿ ಮಾಡುತ್ತಿದೆ. ಪಂಚ ರಾಜ್ಯಗಳ ಚುನಾವಣೆ ನಂತರ ಬೆಲೆ ಏರಿಕೆ ಆಕಾಶಕ್ಕೆ, ಆದಾಯ ಪಾತಾಳಕ್ಕೆ ಹೋಗುತ್ತಿದೆ. ರೈತರ ಆದಾಯ ದ್ವಿಗುಣ ಮಾಡುತ್ತೇವೆಂದು ಪ್ರಧಾನಿ ಮೋದಿ ಹೇಳುತ್ತಾರೆ. ಆದರೆ ಬಿಜೆಪಿಯ ಯಾವ ನಾಯಕರಿಗೂ ಇದು ಆಗಿಲ್ಲ. ಸದ್ಯ ಯುವಕರು ದೇಶಬಿಟ್ಟು ಉದ್ಯೋಗವನ್ನರಿಸಿ ಬೇರೆ ರಾಷ್ಟ್ರಗಳಿಗೆ ಹೋಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.


ಇದನ್ನೂ ಓದಿ: ಕಾಂಗ್ರೆಸ್ ಪಕ್ಷದಲ್ಲಿ ಸತ್ಯಕ್ಕೆ ಬೆಲೆಯೇ ಇಲ್ಲ!: ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ವ್ಯಂಗ್ಯ


ಗೊಬ್ಬರ, ವಿದ್ಯುತ್ ದರ, ಬಟ್ಟೆ, ಸಕ್ಕರೆ ಸೇರಿದಂತೆ ಎಲ್ಲಾ ಪದಾರ್ಥಗಳ ಬೆಲೆ ಹೆಚ್ಚಳ ಆಗಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಹೈರಾಣಾಗಿದ್ದಾರೆ. ನಾವು ಜನರ ಬಳಿಗೆ ಹೋಗಬೇಕಿದೆ. ರಾಜ್ಯ ಹಾಗೂ ಕೇಂದ್ರದಲ್ಲಿ ನಮ್ಮ ಸರ್ಕಾರವಿದ್ದಾಗ ಬೆಲೆ ಏರಿಕೆ ಹೇಗೆ ನಿಗ್ರಹ ಮಾಡಿದ್ವಿ ಎಂದು ಮನವರಿಕೆ ಮಾಡಬೇಕಿದೆ. ಜನರ ಮನೆಮನೆಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.