ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಪ್ರಾರಂಭವಾಗಿದ್ದು, ಇದೇ ತಿಂಗಳೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೊಬ್ಬ ನಾಯಕ ಬರುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಸದ್ಯ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ, ಡೆಲ್ಲಿ ಪ್ರವಾಸ ಮುಗಿಸಿ ಬಂದಿದ್ದು ಅನುಭವಿ ರಾಜಕಾರಣಿ ಚುನಾವಣೆಗೂ ಮುನ್ನ ಮತ್ತೆ ರಾಜ್ಯದಲ್ಲಿ ಸಿಎಂ ಆಗಬೇಕು. ಈ ಹಿನ್ನಲೆಯಲ್ಲಿ ರಾಜೀನಾಮೆ ನೀಡಬೇಕು ಎಂದು ಹೈ ಕಮಾಂಡ್ ಸೂಚನೆ ನೀಡಿದೆ ಎಂದು ಕಮಲ ಪಾಲಯದಲ್ಲಿ ಚರ್ಚೆ ಶುರುವಾಗಿವೆ.
ಇದನ್ನು ಓದಿ: K Sudhakar : ನಾನೊಬ್ಬ ಸೆಕ್ಯುಲರ್ ರಾಜಕಾರಣಿ : ಸಚಿವ ಸುಧಾಕರ್
ಇದೇ ತಿಂಗಳ 14ರಂದು ಬಿಜೆಪಿ ಕಾರ್ಯಕಾರಣಿ ಸಭೆ ಹೊಸಪೇಟೆಯಲ್ಲಿ ನಡೆಯುತ್ತಿದೆ. ಈ ಸಭೆಯಲ್ಲಿ ಪ್ರಮುಖವಾಗಿ ಹೈಕಮಾಂಡ್ ನಾಯಕರು ಇದರ ಬಗ್ಗೆ ಸಮಾಲೋಚನೆ ನಡೆಸಿ ಏಪ್ರಿಲ್ 24ರೊಳಗೆ ಸಿಎಂ ಬದಲಾವಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಡೆಲ್ಲಿಗೆ ಶೆಟ್ಟರ್; ಹೈ ನಾಯಕರ ಜತೆ ಚರ್ಚೆ!
ವರಿಷ್ಠರನ್ನು ಭೇಟಿಯಾದ ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಾರಣಾಸಿಗೆ ಭೇಟಿ ನೀಡಿ ಕಾಶಿ ವೀರಶೈವ ಲಿಂಗಾಯತ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.ನಂತರ ಡೆಲ್ಲಿಗೆ ಭೇಟಿ ನೀಡಿ ರಹಸ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದ್ದಾರೆ.
ಇದನ್ನು ಓದಿ: Bengaluru Karaga: ಬೆಂಗಳೂರಿನಲ್ಲಿ ಈ ಬಾರಿ ಜರುಗಲಿದೆ ಅದ್ದೂರಿ ಕರಗ ಉತ್ಸವ
ಇನ್ನು ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬರುವ ಮುನ್ನಾ ಶಾಸಕ ಅರವಿಂದ್ ಬೆಲ್ಲದ್ ಡೆಲ್ಲಿಗೆ ಭೇಟಿ ನೀಡಿ ಅಮಿತ್ ಶಾ ಜತೆ ಸಭೆ ನಡೆಸಿದ್ದಾರೆ. ಉಭಯ ನಾಯಕರನ್ನ ಹೊರೆತುಪಡಿಸಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಕೂಡ ಹೈ ಕಮಾಂಡ್ ನಾಯಕರನ್ನ ಭೇಟಿ ಮಾಡಿದ್ದಾರೆ.
ಒಟ್ಟಾರೆ , ಚುನಾವಣೆಯ ಹೊಸ್ತಿಲಲ್ಲಿ ಇರುವ ಸಂದರ್ಭದಲ್ಲಿ ಬಿಜೆಪಿ ಮತ್ತೆ ನಾಯಕತ್ವ ಬದಲಾವಣೆ ಬಗ್ಗೆ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಬದಲಾವಣೆ ಮಾಡಿದ ಸಂದರ್ಭದಲ್ಲಿ ರಾಜ್ಯದ ಜನತೆ ಹೇಗೆ ಸ್ವೀಕಾರ ಮಾಡುತ್ತಾರೆ ಎಂದು ಕಾದುನೋಡಬೇಕಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.