CM Siddaramaiah: ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಿಸಿದರು.


COMMERCIAL BREAK
SCROLL TO CONTINUE READING

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- 50" ನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371 ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3000 ಕೋಟಿ ರೂ ಹೆಚ್ಚುವರಿ ಅನುದಾನ ನೀಡಿದ್ದೇವೆ ಎಂದರು. 


ಬಸವಣ್ಣನವರ ರೀತಿ ನಾನೂ ಮೌಡ್ಯ ನಂಬುವುದಿಲ್ಲ: 
ನನಗೆ ಮೌಢ್ಯದಲ್ಲಿ ನಂಬಿಕೆ ಇಲ್ಲ. ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ ಎಂದು ಸ್ಪಷ್ಟಪಡಿಸಿದರು. 


ಇದನ್ನೂ ಓದಿ- ವಿದ್ಯುತ್‌ ದರ ಏರಿಕೆಗೆ ಹಿಂದಿನ ರಾಜ್ಯ ಬಿಜೆಪಿ ಮತ್ತು ಪ್ರಸ್ತುತ ಕೇಂದ್ರದ ಬಿಜೆಪಿ ಸರ್ಕಾರಗಳೇ ಹೊಣೆ: ಸಿಎಂ


ಕನ್ನಡ ಬದುಕನ್ನು ಉನ್ನತೀಕರಿಸುವ ಆಶಯದಿಂದ ಏಕೀಕರಣ ಚಳವಳಿ ನಡೆದು ಹಲವರ ಪ್ರಾಣ ತ್ಯಾಗವನ್ನೂ ಪಡೆದು ವಿಶಾಲ ಕನ್ನಡ ನಾಡು ಉದಯವಾಗಿದೆ. ಕರ್ನಾಟಕ ನಾಮಕರಣಗೊಂಡು 50 ನೇ ವರ್ಷಕ್ಕೆ ಬಿಜೆಪಿ ಇಡೀ ವರ್ಷ ಕನ್ನಡ ಸಂಭ್ರಮವನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ತಕ್ಷಣ ಮೊದಲ ಬಜೆಟ್ ನಲ್ಲೇ "ಕನ್ನಡ ಸಂಭ್ರಮ-50" ನ್ನು ಘೋಷಿಸಿದೆ. ನಾವು ಕರ್ತವ್ಯಲೋಪ ಮಾಡಲಿಲ್ಲ ಎಂದರು. 


ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದೆ. ಎಲ್ಲಾ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರಣೆ ನೀಡಿದ್ದೆ ಎಂದು ಸ್ಮರಿಸಿದರು. 


ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ ಎಂದು ಕರೆ ನೀಡಿ ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಿ ಎಂದು ಕರೆ ನೀಡಿದರು. 


ಇದನ್ನೂ ಓದಿ- ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ: ಸಿಎಂ ಸಿದ್ದರಾಮಯ್ಯ 


ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಗೌರವ ಉಪಸ್ಥಿತಿ ವಹಿಸಿದ್ದರು. 


ಮುಖ್ಯ ಅತಿಥಿಗಳಾಗಿ ಹಿರಿಯ ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ.ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ,  ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.