ಬೆಂಗಳೂರು: 2020ರ ಗ್ರಾಮ ಪಂಚಾಯಿತಿ ಚುನಾವಣೆ  ಸದಸ್ಯ ಸ್ಥಾನಗಳಿಗೆ ಹರಾಜಿನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕರಣಗಳು ಕಂಡುಬಂದಲ್ಲಿ  ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚಾಮರಾಜನಗರದ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಗ್ರಾಮ ಪಂಚಾಯಿತಿ ಸಾರ್ವತ್ರಿಕ  ಚುನಾವಣೆ ಸಂಬಂಧ ರಾಜ್ಯದ ಜಿಲ್ಲೆಗಳ ಕೆಲವು ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಹರಾಜಿನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂಬ ವರದಿಗಳು ಕೆಲ ದಿನ ಪತ್ರಿಕೆಗಳಲ್ಲಿ ಪ್ರಕಟ ಗೊಂಡಿರುವುದು ಕಂಡುಬಂದಿದೆ.ಗ್ರಾಮ ಪಂಚಾಯತ್ ಚುನಾವಣೆಯನ್ನು ನ್ಯಾಯಸಮ್ಮತ, ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಸುವುದು ಚುನಾವಣಾ ಆಯೋಗದ ಉದ್ದೇಶವಾಗಿದೆ.


ಗ್ರಾಮಪಂಚಾಯತ್ ಚುನಾವಣೆಗೆ ಮುಹೂರ್ತ ಫಿಕ್ಸ್


ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಹರಾಜಿನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಂಡು ಬಂದಲ್ಲಿ ಇಂತಹ ಪ್ರಕರಣಗಳನ್ನು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ  ಚಟುವಟಿಕೆ ಎಂದು ಪರಿಗಣಿಸಿ ಅಂತಹವರ ವಿರುದ್ದ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯವರಾದ ಡಾ.ಎಂ.ಆರ್. ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.