ವಿಧಾನ ಪರಿಷತ್ ಚುನಾವಣೆ : 48 ಗಂಟೆಗಳ ಕಾಲ ನಿಷೇಧಿಸಿದ್ದ ಕ್ರಮ ಎತ್ತಿಹಿಡಿದ ಹೈಕೋರ್ಟ್

ವಿಧಾನಪರಿಷತ್‌ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ದಿನಕ್ಕೂ ಹಿಂದಿನ 48 ಗಂಟೆ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದ ಜಿಲ್ಲಾಧಿಕಾರಿಯ ಕ್ರಮವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಕೇವಲ ಮತ ಎಣಿಕೆ ಹಾಗೂ ಮತದಾನ ದಿನಕ್ಕೆ ಸೀಮಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದೆ.

Written by - Prashobh Devanahalli | Edited by - Manjunath N | Last Updated : Feb 15, 2024, 04:33 PM IST
  • ಜಿಲ್ಲಾಧಿಕಾರಿಗಳ ಆದೇಶದಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ವಿವರಿಸಿದರು.
  • ಅಲ್ಲದೆ, ಏಕ ಸದಸ್ಯಪೀಠ ಮದ್ಯಮಾರಾಟವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಿರುವ ಆದೇಶ ಕಾನೂನಿಗೆ ವಿರುದ್ದವಾಗಿದೆ.
  • ಜತೆಗೆ, ಮದ್ಯ ಮಾರಾಟ ಮಾಡುವುದು ಮೂಲಭೂತ ಹಕ್ಕು ಅಲ್ಲ. ಆದ್ದರಿಂದ ಈ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು.‌
ವಿಧಾನ ಪರಿಷತ್ ಚುನಾವಣೆ : 48 ಗಂಟೆಗಳ ಕಾಲ ನಿಷೇಧಿಸಿದ್ದ ಕ್ರಮ ಎತ್ತಿಹಿಡಿದ ಹೈಕೋರ್ಟ್ title=

ಬೆಂಗಳೂರು : ವಿಧಾನಪರಿಷತ್‌ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ದಿನಕ್ಕೂ ಹಿಂದಿನ 48 ಗಂಟೆ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದ ಜಿಲ್ಲಾಧಿಕಾರಿಯ ಕ್ರಮವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಕೇವಲ ಮತ ಎಣಿಕೆ ಹಾಗೂ ಮತದಾನ ದಿನಕ್ಕೆ ಸೀಮಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದೆ.

ಮಧ್ಯಮಾರಾಟ ನಿಷೇಧ ಒಂದು ದಿನಕ್ಕೆ ಸೀಮಿತಗೊಳಿಸಿ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು‌. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಅವರಿದ್ದ ವಿಭಾಗೀಯ ಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದೆ.

ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತೀಮಾ ಹೊನ್ನಾಪುರ, ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ ೧೫೩(ಸಿ) ಪ್ರಕಾರ ಯಾವುದೇ ಚುನಾಚಣೆ ಘೋಷಣೆ ಆದರೂ, ಚುನಾವಣೆಗೂ ಮುನ್ನ ೪೮ ಗಂಟೆಗಳ ಕಾಲ ಮದ್ಯಮಾರಾಟಕ್ಕೆ ನಿರ್ಬಂಧ ವಿಧಿಸಬೇಕು ಎಂದು ತಿಳಿಸಲಾಗಿದೆ.ಅದರಂತೆ ಸರ್ಕಾರ ವಿಧಾನ ಪರಿಷತ್ ಉಪಚುನಾವಣೆಗೆ ಮತದಾನದ ದಿನಕ್ಕೂ ಮುನ್ನ ೪೮ ಗಂಟೆಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ವಿವರಿಸಿದರು. ಅಲ್ಲದೆ, ಏಕ ಸದಸ್ಯಪೀಠ ಮದ್ಯಮಾರಾಟವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಿರುವ ಆದೇಶ ಕಾನೂನಿಗೆ ವಿರುದ್ದವಾಗಿದೆ.ಜತೆಗೆ, ಮದ್ಯ ಮಾರಾಟ ಮಾಡುವುದು ಮೂಲಭೂತ ಹಕ್ಕು ಅಲ್ಲ. ಆದ್ದರಿಂದ ಈ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು.‌ ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಜಿಲ್ಲಾಧಿಕಾರಿಗಳ ಆದೇಶವನ್ನು ಎತ್ತಿಹಿಡಿದಿದೆ.

ಇದನ್ನೂ ಓದಿ- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ : ಯಾರಾಗಲಿದ್ದಾರೆ ಬಿಜೆಪಿ ಅಭ್ಯರ್ಥಿ..?

ಅಲ್ಲದೆ, ಮತದಾನಕ್ಕೂ ಮುನ್ನ ೪೮ ಗಂಟೆಗಳು ಹಾಗೂ ಮತ ಎಣಿಕೆ ದಿನದಲ್ಲಿ ಆಹಾರ ಪೂರೈಸಲು ಹೋಟೆಲ್‌ ಮತ್ತು ರೆಸ್ಟೋರೆಂಟ್ ಗಳಿಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಪೀಠ ಇದೇ  ವೇಳೆ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು ? 

ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಫೆ.14ರಂದು ಸಂಜೆ 5ರಿಂದ ಮತದಾನ ನಡೆಯುವ ಫೆ.16ರ ಮಧ್ಯರಾತ್ರಿ 12ರವರೆಗೆ ಮತ್ತು ಮತ ಎಣಿಕೆ ದಿನವಾದ ಫೆ.20ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ನಗರದ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಆರ್‌. ಕೃಷ್ಣಕುಮಾರ್‌ ಅವರಿದ್ದ ನ್ಯಾಯಪೀಠ, ಚುನಾವಣೆ ಮುಕ್ತಾಯಕ್ಕೆ ಹಿಂದಿನ 48 ಗಂಟೆ ಅವಧಿಯಲ್ಲಿ ಮದ್ಯ‌ ಮಾರಾಟ ನಿರ್ಬಂಧಿಸಬಹುದು ಎಂಬ ಸರ್ಕಾರದ ವಾದವನ್ನು ತಿರಸ್ಕರಿಸಿತು. ಜತೆಗೆ, ಮತದಾನದ ದಿನವಾದ ಫೆ.16 ಮತ್ತು ಮತ ಎಣಿಕೆ ದಿನವಾದ ಫೆ.20ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಮಾತ್ರ ನಗರದಲ್ಲಿ ಮದ್ಯ ಮಾರಾಟ‌ಕ್ಕೆ ನಿರ್ಬಂಧಿಸಿ ವಿಧಿಸಿ ಮಧ್ಯಂತರ ಆದೇಶ ಮಾಡಿತು. ಆ ಮೂಲಕ ನಗರ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ಆಯುಕ್ತರ ಆದೇಶವನ್ನು ಮಾರ್ಪಡಿಸಿತು. ಇದನ್ನು ಪ್ರಶ್ನಿಸಿ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News