ಬನ್ನೇರುಘಟ್ಟದಲ್ಲಿ ಚಿರತೆ ಸಾವು: ಎಲ್ಲಾ ಮೃಗಾಲಯದಲ್ಲಿ ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ
ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಇತರ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಯ ಪ್ರಾಣಿಗಳು ಅಂದರೆ ಚಿರತೆ, ಸಿಂಹ, ಹುಲಿ, ಕಾಡುಬೆಕ್ಕು ಇತ್ಯಾದಿಗಳಿಗೆ ಅಗತ್ಯವಿದ್ದರೆ ಲಸಿಕೆ ನೀಡುವಂತೆ ಸಚಿವರು ಸೂಚಿಸಿದರು.
ಬನ್ನೇರುಘಟ್ಟ: ರಾಜ್ಯದ ಯಾವುದೇ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಗೆ ಸೇರಿದ ವನ್ಯಮೃಗಗಳಿಗೆ ಸೋಂಕು ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನದಲ್ಲಿ ಬೆಕ್ಕುಗಳಿಗೆ ತಗಲುವ ಮಾರಕ ಫೆಲಿನ್ ಪ್ಯಾನ್ಲೂಕೋಪೇನಿಯಾ (ಎಫ್.ಪಿ.ವಿ.) ವೈರಾಣು ಸೋಂಕಿನಿಂದ 7 ಚಿರತೆ ಮರಿಗಳು ಮತ್ತು ಉದರ ಸಂಬಂಧಿ ಕಾಯಿಲೆ (ಹೆಮೊರೈಜಿಕ್ ಎಂಟ್ರೈಟಿಸ್ ಮತ್ತು ಎಂಡೋಕಾರ್ಡೈಟಿಸ್)ಯಿಂದ ಹಾಗೂ ಪರಸ್ಪರ ಸಂಘರ್ಷದಿಂದ 16 ಜಿಂಕೆಗಳು ಸಾವಿಗೀಡಾಗಿರುವ ಹಿನ್ನೆಲೆ ಖುದ್ದು ಉದ್ಯಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಈ ಉದ್ಯಾನದಲ್ಲಿ ಚಿರತೆಗಳಿಗೆ ಸೋಂಕು ಬಂದಿರುವ ಹಿನ್ನೆಲೆ ಇಲ್ಲಿನ ಯಾವುದೇ ಸಿಬ್ಬಂದಿ ರಾಜ್ಯದ ಬೇರೆ ಯಾವುದೇ ಮೃಗಾಲಯಕ್ಕೆ ಭೇಟಿ ನೀಡದಂತೆ ಆದೇಶ ನೀಡಿದರು. ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಇತರ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಯ ಪ್ರಾಣಿಗಳು ಅಂದರೆ ಚಿರತೆ, ಸಿಂಹ, ಹುಲಿ, ಕಾಡುಬೆಕ್ಕು ಇತ್ಯಾದಿಗಳಿಗೆ ಅಗತ್ಯವಿದ್ದರೆ ಲಸಿಕೆ ನೀಡುವಂತೆ ಸಚಿವರು ಸೂಚಿಸಿದರು.
ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರದ ಒಪ್ಪಿಗೆ
ಜಿಂಕೆಗಳ ಸಾವಿನ ಕುರಿತಂತೆ ಸುದೀರ್ಘ ಚರ್ಚೆ ನಡೆಸಿದ ಸಚಿವರಿಗೆ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಿಂದ ಸಂರಕ್ಷಣೆ ಮಾಡಿ ತರಲಾದ ಜಿಂಕೆಗಳಿಗೆ ಉದರ ಸಂಬಂಧಿ ಕಾಯಿಲೆಗಳಿತ್ತು. ಹೀಗಾಗಿ ಅವುಗಳನ್ನು ಪ್ರತ್ಯೇಕವಾಗಿ ಇಡಲಾಗಿತ್ತು. ಅವು ಪರಸ್ಪರ ಕಚ್ಚಾಟದಿಂದ ಮತ್ತು ಸೋಂಕಿನಿಂದ ಮೃತಪಟ್ಟಿವೆ ಎಂದು ತಿಳಿಸಲಾಯಿತು. ಮೃಗಾಲಯ ಅತ್ಯಂತ ಸುರಕ್ಷಿತ ಮತ್ತು ಸಂರಕ್ಷಿತ ತಾಣವಾಗಿದ್ದು, ಇಲ್ಲಿ ಇಷ್ಟು ಪ್ರಮಾಣದಲ್ಲಿ ಮೃಗಗಳ ಸಾವು ನಿಜಕ್ಕೂ ಆಘಾತಕಾರಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಿ ಎಂದು ಸಚಿವರು ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸೂಚನೆ ನೀಡಿದರು.
ಅರಣ್ಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು ಸಮನ್ವಯದೊಂದಿಗೆ ಎಲ್ಲಾ ಪ್ರಾಣಿಗಳನ್ನು ಗಮನವಿಟ್ಟು ಪರೀಕ್ಷಿಸಿ. ಅವುಗಳ ಆರೈಕೆ ಮತ್ತು ಸಂರಕ್ಷಣೆಗೆ ಆದ್ಯತೆ ನೀಡಬೇಕು. ಯಾವುದೇ ವೈಮನಸ್ಯ, ಮನಸ್ತಾಪದಿಂದ ಸಂಸ್ಥೆಗೆ ಸರ್ಕಾರಕ್ಕೆ ಕೆಟ್ಟ ಹೆಸರು ಬಾರದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಯಾವುದೇ ವನ್ಯಮೃಗಗಳು ಹಠಾತ್ ಅಥವಾ ಅನುಮಾಸ್ಪದ ಸಾವಿಗೀಡಾದರೆ ತಕ್ಷಣವೇ ಸರ್ಕಾರಕ್ಕೆ ಮತ್ತು ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಇದೇ ವೇಳೆ ಆದೇಶಿಸಿದರು.
ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ ಸರಕಾರ ವಜಾಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಕಾರ್ಯದರ್ಶಿ (ಅರಣ್ಯ ವಿಭಾಗ) ಸಂಜಯ್ ಬಿಜ್ಜೂರ್, ವನ್ಯಜೀವಿ ಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುಭಾಶ್ ಮಾಲ್ಕಡೆ, ಅರಣ್ಯ ಪಡೆಯ ಮುಖ್ಯಸ್ಥರಾದ ರಾಜೀವ್ ರಂಜನ್ ಮತ್ತು ಅಧಿಕಾರಿಗಳು ಹಾಜರಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.