ಬೆಂಗಳೂರು: 62 ತಾಲ್ಲೂಕುಗಳು ಮಾರ್ಗಸೂಚಿಯೊಳಗೆ ಗುರುತಿಸಲಾಗಿದೆ. 136 ತಾಲ್ಲೂಕುಗಳ ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ವರದಿ ಬಂದ ನಂತರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಮೇಕೆದಾಟು ಯೋಜನೆಗೆ ಅನುಮತಿ ನೀಡದಿರುವುದು ಕೇಂದ್ರದ ಬಿಜೆಪಿ ಸರ್ಕಾರ, ಈ ಯೋಜನೆಗೆ ತಕರಾರು ಮಾಡಲು ತಮಿಳುನಾಡಿಗೆ ಯಾವುದೇ ಹಕ್ಕಿಲ್ಲ. ರಾಜ್ಯಕ್ಕೆ ನಿಗದಿಪಡಿಸಿರುವ 177.25 ಟಿಎಂಸಿ ನೀರನ್ನು ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ಬಿಡಬೇಕು. ಸಂಕಷ್ಟದ ಸಮಯದಲ್ಲಿ ಸಂಕಷ್ಟದ ಸೂತ್ರ ಅನುಸರಿಸಬೇಕು ಎಂದಿದೆ. ಆದರೆ ತಮಿಳುನಾಡಿನವರು ಅನಗತ್ಯವಾಗಿ ತಕರಾರು ತೆಗೆಯುತ್ತಿದ್ದಾರೆ ಎಂದರು.


ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಇರುವುದರಿಂದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ರಾಜ್ಯ ಬಿಜೆಪಿ ನಾಯಕರು ಮನವಿ ಮಾಡಿಕೊಳ್ಳಬೇಕು. ಆದರೆ ರಾಜ್ಯ ಬಿಜೆಪಿಯವರು ಸರ್ವಪಕ್ಷ ಸಭೆಯಲ್ಲಿ ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಸಹಕರಿಸುವುದಾಗಿ ತಿಳಿಸಿ, ಹೊರಗಡೆ ಅದೇ ವಿಷಯದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.


ಇದನ್ನೂ ಓದಿ-ಕೇರಳ ಗಡಿನಾಡ ಘಟಕದ ಕಸಾಪ ಅಧ್ಯಕ್ಷ ಎಸ್.ವಿ.ಭಟ್‌ ಹೃದಯಾಘಾತದಿಂದ ನಿಧನ


ಮೈಸೂರು, ಬೆಂಗಳೂರು ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸುವುದು ನೀರು ನೀತಿಯಂತೆ ಮೊದಲ ಆದ್ಯತೆಯಾಗಿದೆ. ಈ ಮಧ್ಯೆ ರೈತರ ಹಿತ ಕಾಪಾಡಬೇಕು.ಸರ್ವೋಚ್ಛ ನ್ಯಾಯಾಲಯದಲ್ಲಿ ತಮಿಳುನಾಡು ಕೇಸು ದಾಖಲಿಸಿದ್ದು, ರಾಜ್ಯದ ನಿಲುವನ್ನು ಸರ್ಕಾರ ಸ್ಪಷ್ಟವಾಗಿ ತಿಳಿಸಲಿದೆ. ಯಾವುದೇ ಕಾರಣಕ್ಕೂ ರಾಜ್ಯದ ರೈತರ ಹಿತರಕ್ಷಣೆಯ ವಿಷಯದಲ್ಲಿ ಯಾರೊಬ್ಬರೂ ರಾಜಕಾರಣ ಮಾಡಬಾರದು. ಈ ವಿಚಾರವಾಗಿ ಸರ್ವಪಕ್ಷ ನಿಯೋಗದ ಭೇಟಿಗೆ ಪ್ರಧಾನಮಂತ್ರಿಗಳ ಸಮಯ ಕೋರಿದ್ದು, ಯಾವುದೇ ಉತ್ತರ ಬಂದಿಲ್ಲವಾದ್ದರಿಂದ ರಾಜ್ಯ ಬಿಜೆಪಿ ಸಂಸದರು ಪ್ರಧಾನಿಗಳ ಭೇಟಿಗೆ ಸಮಯ ನಿಗದಿಪಡಿಸಲಿ ಎಂದು ಹೇಳಿದರು.


ಕೆಲವು ರಾಜ್ಯಗಳಲ್ಲಿ ಇತ್ತೀಚೆಗಷ್ಟೇ ವಿಧಾನಸಭಾ ಚುನಾವಣೆ ನಡೆದು ಸರ್ಕಾರಗಳು ಅಸ್ತಿತ್ವಕ್ಕೆ ಬಂದಿವೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ ರಾಜ್ಯ ವಿಧಾನಸಭೆಗಳನ್ನು ವಿಸರ್ಜಿಸಲು ಸಾಧ್ಯವಿದೆಯೇ ಅಥವಾ ಚುನಾವಣೆ ನಡೆಯುವವರೆಗೂ ರಾಷ್ಟ್ರಪತಿ ಅಧಿಕಾರ ಹೇರಲು ಸಾಧ್ಯವಿದೆಯೇ? ಇಂತಹ ಸಂದರ್ಭಗಳು ಉದ್ಭವಿಸುವ ಸಾಧ್ಯತೆಯಿಂದಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ: ಸಾಧ್ಯವಿಲ್ಲ ಎಂದರು 


ಇದನ್ನೂ ಓದಿ-ಸಿಎಂ ವಿರುದ್ಧ ಬಿಕೆ ಹರಿಪ್ರಸಾದ್ ಹೇಳಿಕೆ ಬಗ್ಗೆ ಪಕ್ಷ ನಿಗಾ: ಸಚಿವ ಎಂ ಬಿ ಪಾಟೀಲ


ಪ್ರಜಾಪ್ರಭುತ್ವದಲ್ಲಿ ಮುಷ್ಕರ ಮಾಡುವವರಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಖಾಸಗಿ ಸಾರಿಗೆಯವರ ಅಹವಾಲುಗಳನ್ನು ಆಲಿಸಿದ್ದೇವೆ. ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆಯವರಿಗೆ ನಷ್ಟವುಂಟಾಗುತ್ತಿದ್ದು, ಆ ನಷ್ಟವನ್ನು ಭರಿಸಿಕೊಡಬೇಕು ಎಂಬಂತಹ ಅಸಾಧ್ಯ ಬೇಡಿಕೆಗಳನ್ನು ಇಟ್ಟಿದ್ದಾರೆ, ಆದರೆ ಈ ಬೇಡಿಕೆಗಳ ಈಡೇರಿಕೆ ಸಾಧ್ಯವಿಲ್ಲ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.