ಬೆಂಗಳೂರು: ಟೀಕೆ ಮಾಡುವವರು ಮಾಡಲಿ, ನಾವು ಕೆಲಸ ಮಾಡಿ ಉತ್ತರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಅವರು ಎನ್ ಪಿ ಎಸ್ ಬಳಿ ಮಾಧ್ಯಮದವರ ಜೊತೆ ಮಾತನಾಡುತ್ತಿದ್ದರು.


COMMERCIAL BREAK
SCROLL TO CONTINUE READING

ನಾನು ಓದಿದ ಶಾಲೆಗೆ ಭೇಟಿ ನೀಡಿ ನಮ್ಮ ಗುರುಗಳಾದ ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದೆ. ಅವರು ಶಿಕ್ಷಣ ಕ್ಷೇತ್ರದಲ್ಲಿ ಬಹಳ ಸಾಧನೆ ಮಾಡಿದ್ದಾರೆ. ಈ ನ್ಯಾಷನಲ್ ಪಬ್ಲಿಕ್ ಶಾಲೆ ದೇಶದಲ್ಲೇ ಮೊದಲ ಸ್ವಾಯತ್ತ ಶಾಲೆಯಾಗಿದೆ. ನಾವು ನಮ್ಮ ಪ್ರಣಾಳಿಕೆಯಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ನವೋದಯ ಮಾದರಿಯ ಉನ್ನತ ಗುಣಮಟ್ಟದ ಶಾಲೆ ಆರಂಭಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಇದನ್ನು ಯಾವ ರೀತಿ ಮಾಡಬೇಕು ಎಂದು ಮಾರ್ಗದರ್ಶನ ನೀಡಬೇಕು ಎಂದು ಗೋಪಾಲಕೃಷ್ಣ ಅವರ ಬಳಿ ಮನವಿ ಮಾಡಿದ್ದೇನೆ. ಹಳ್ಳಿಯಿಂದ ಶಿಕ್ಷಣಕ್ಕೆ ಮಕ್ಕಳು ನಗರಕ್ಕೆ ವಲಸೆ ಬರುವುದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಿದ್ದೇವೆ. ನಾನು ಪರಮೇಶ್ವರ್ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವರು ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ RDPR ಖಾತೆ ಹಂಚಿಕೆ


ಹಳ್ಳಿ ಜನರಿಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂಬ ಹಂಬಲವಿದೆ. ಎಲ್ಲಾ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಬೇಕು. ಇದು ನಮ್ಮ ಸರ್ಕಾರದ ಆದ್ಯತೆ.ಕಾಂಗ್ರೆಸ್ ಪ್ರಣಾಳಿಕೆ ಭರವಸೆ ಜಾರಿ ಅಸಾಧ್ಯ ಎಂಬ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, "ಯಾವುದೇ ಊಹಾಪೋಹಗಳ ಅಗತ್ಯವಿಲ್ಲ. ಚರ್ಚೆ ಮಾಡುವವರಿಗೆ, ಟೀಕೆ ಮಾಡುವವರಿಗೆ, ಸಲಹೆ ನೀಡುವವರಿಗೆ ಬೇಡ ಎನ್ನಲು ಸಾಧ್ಯವಿಲ್ಲ. ಮಾತನಾಡುವವರು, ಟೀಕೆ ಮಾಡುವವರು ಮಾಡಲಿ. ನಾವು ಕೆಲಸ ಮಾಡಿ ಉತ್ತರ ನೀಡುತ್ತೇವೆ" ಎಂದು ತಿಳಿಸಿದರು.


ಇದನ್ನೂ ಓದಿ: ಖಾತೆ ಕ್ಯಾತೆಗೆ ರಾತ್ರೋರಾತ್ರಿ ಡಿಸಿಎಂ ಡಿಕೆಶಿ ಮದ್ದು


ಬೆಂಗಳೂರಿನ ಅಧಿಕಾರಿಗಳ ಜತೆ ಸಭೆ ಬಗ್ಗೆ ಕೇಳಿದಾಗ, "ಅಧಿಕಾರಿಗಳ ಬೇಜವಾಬ್ದಾರಿಯಿಂದ ಯಾರಿಗೂ ತೊಂದರೆ ಆಗಬಾರದು. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕು. ಹೀಗಾಗಿ ಸಭೆ ಮಾಡುತ್ತಿದ್ದೇವೆ" ಎಂದು ತಿಳಿಸಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ