ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಮುಡಾ ಭೂ ಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತು. ಅದಾದ ನಂತರವೂ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅರ್ಜಿ ಸಲ್ಲಿಸಿದ ನಂತರ ಮುಡಾ ಅಧ್ಯಕ್ಷ ಮತ್ತು ಆಯುಕ್ತರು 50:50 ಅನುಪಾತದಲ್ಲಿ ನಿವೇಶನ ನೀಡಿದ್ದಾರೆ. ಇದರಿಂದ ಮುಡಾಗೆ ನಷ್ಟವಾಗಿದೆ. 50:50 ಮಾಡುವುದಾದರೆ ಸರ್ಕಾರಕ್ಕೆ ಕಳುಹಿಸಿ ಒಪ್ಪಿಗೆ ಸಿಕ್ಕಿ ಆದೇಶವಾಗಬೇಕು. ಅಕ್ರಮವಾಗಿ ಅವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಉದಾಹರಣೆಗೆ ದಾಸರಹಳ್ಳಿಯಲ್ಲಿ ಭೂಸ್ವಾಧೀನವಾದರೆ ಎಂ.ಜಿ.ರಸ್ತೆಯ ಜಮೀನು ಕೊಟ್ಟಂತಾಗಿದೆ. ಈ ಹಗರಣದ ತನಿಖೆಯನ್ನು ಸರ್ಕಾರದಡಿಯ ಸಂಸ್ಥೆಗೆ ನೀಡಿದರೆ ಮುಖ್ಯಮಂತ್ರಿಯವರನ್ನು ಆರೋಪಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಿಬಿಐಗೆ ತನಿಖೆಗೆ ವಹಿಸಲಿ ಎಂದು ಒತ್ತಾಯಿಸಿದರು.


COMMERCIAL BREAK
SCROLL TO CONTINUE READING

ಡಿನೋಟಿಫೈ ಆದ ಭೂಮಿಯ ಬದಲಿಗೆ ಪ್ರತಿಷ್ಠಿತ ಸ್ಥಳದ ಕಡೆ ಜಾಗ ನೀಡಲಾಗಿದೆ. ಡಿನೋಟಿಫೈ ಆದ ಜಮೀನನ್ನು ಅಭಿವೃದ್ಧಿ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಭೂ ಮಾಲೀಕರು ಅದನ್ನು ನೋಡಿಕೊಂಡು ಏಕೆ ಸುಮ್ಮನಿದ್ದರು ಎಂದು ಅನುಮಾನವಾಗುತ್ತದೆ. ನಾನು ಕೂಡ ಈ ಕುರಿತು ದಾಖಲೆಗಳನ್ನು ಕೇಳಿದ್ದರೂ ಏನೂ ಸಿಕ್ಕಿಲ್ಲ. ಈ ವಹಿವಾಟುಗಳಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಮೈಸೂರು ಜಿಲ್ಲಾಧಿಕಾರಿ ಹಲವಾರು ಬಾರಿ ಮುಡಾಗೆ ಪತ್ರ ಬರೆದು ಸ್ಪಷ್ಟನೆ ಕೇಳಿದ್ದಾರೆ. ಆದರೆ ಇದಕ್ಕೆ ಮುಡಾದಿಂದ ಉತ್ತರ ದೊರೆತಿಲ್ಲ. ಅಲ್ಲೇ ಎಲ್ಲರೂ ಸೇರಿಕೊಂಡು ಗ್ಯಾಂಗ್‌ ಮಾಡಿಕೊಂಡಿದ್ದಾರೆ. ಇದರ ಹಿಂದೆ ದೊಡ್ಡ ಜಾಲವಿದೆ ಎಂದರು. 


ಇದನ್ನೂ ಓದಿ-ನಟ ದರ್ಶನ್‌ ಪ್ರಕರಣದ ಬಗ್ಗೆ ನಿರ್ಮಾಪಕ ಕೆ.ಮಂಜು ಹೇಳಿದ್ದೇನು?


ಇದು ಬಿಜೆಪಿ ಕಾಲದಲ್ಲೇ ನಡೆದಿದ್ದು ಎಂದು ಸಿಎಂ ಹೇಳಿದ್ದಾರೆ. ಅದು ಯಾರೇ ಆಗಿದ್ದರೂ ಅವರನ್ನು ಮೊದಲು ಬಂಧನ ಮಾಡಿಸಬೇಕು. ಇದಕ್ಕೆ ನಮ್ಮ ಆಕ್ಷೇಪಣೆ ಇಲ್ಲ. ಇದರಲ್ಲಿ ಬಿಜೆಪಿ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ನಿವೇಶನ ಮಂಜೂರನ್ನು ಮೊದಲು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.


86 ಸಾವಿರ ಜನರು ನಿವೇಶನ ಕೊಡಿ ಎಂದು ಮನವಿ ಮಾಡಿದ್ದರೂ ಕಾಂಗ್ರೆಸ್‌ ನಾಯಕರಿಗೆ ಮಾತ್ರ ಸೈಟುಗಳು ಸಿಕ್ಕಿದೆ. ಸರ್ಕಾರದ ಆಸ್ತಿಗಳನ್ನು ಯಾರ‍್ಯಾರೋ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.


ಇದನ್ನೂ ಓದಿ-ಮುಡಾ ಅಕ್ರಮ: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಗಂಭೀರ ಆರೋಪ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.