ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ: ಡಿ ಕೆ ಶಿವಕುಮಾರ್
DK Shivakumar : ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ನವದೆಹಲಿ: ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಖರ್ಗೆ ಅವರ ಬಣ್ಣ ಮತ್ತು ತಲೆಗೂದಲು ಬಗ್ಗೆ ಆರಗ ಜ್ಞಾನೇಂದ್ರ ಅವರು ಅವಹೇಳನ ಮಾಡಿರುವ ಬಗ್ಗೆ ಮಾಧ್ಯಮದವರು ಬುಧವಾರ ಪ್ರಸ್ತಾಪಿಸಿದಾಗ ಶಿವಕುಮಾರ್ ಅವರು ಹೀಗೆ ಹೇಳಿದರು.
ಬೆಂಗಳೂರಲ್ಲಿ ನಿಮಾನ್ಸ್ ಆಸ್ಪತ್ರೆ ಉತ್ತಮವಾಗಿದೆ. ಅದು ಫರ್ಸ್ಟ್ ಕ್ಲಾಸ್ ಆಗಿದೆ. ಅಲ್ಲಿಗೆ ಆರಗ ಜ್ಞಾನೇಂದ್ರ ಅವರನ್ನು ಕಳುಹಿಸೋಣ ಎಂದರು.
ಮಂತ್ರಿಗಳು ಸೇರಿ ಕರ್ನಾಟಕದ ಸುಮಾರು 50 ಮಂದಿ ನಾಯಕರ ಸಭೆಯನ್ನು ವರಿಷ್ಠರು ಕರೆದಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರು ಎಲ್ಲ ರಾಜ್ಯದ ಮುಖಂಡರ ಸಭೆ ನಡೆಸುತ್ತಿದ್ದಾರೆ. ಕರ್ನಾಟಕದ ಸಭೆ ವಿಶೇಷವೇನಲ್ಲ.
ಇದನ್ನೂ ಓದಿ-ಗೃಹಲಕ್ಷ್ಮಿ-ಶಕ್ತಿ ಯೋಜನೆಯಿಂದ ಅತ್ತೆ-ಸೊಸೆ ನಡುವೆ ಕಂದಕ ಸೃಷ್ಟಿಯಾಗಿದೆ: ಬಿಜೆಪಿ
ಹಿಂದೆಯೇ ಬೆಂಗಳೂರಲ್ಲಿ ಸಭೆ ನಡೆಯಬೇಕಿತ್ತು. ರಾಹುಲ್ ಗಾಂಧಿ ಅವರ ಜತೆ ಎಲ್ಲ ಮಂತ್ರಿಗಳ ಫೋಟೋ ಸೆಷನ್ ಕೂಡ ಇತ್ತು. ಉಮಾನ್ ಚಾಂಡಿ ಅವರ ನಿಧನದ ಹಿನ್ನೆಲೆಯಲ್ಲಿ ಆ ಸಭೆ ರದ್ದಾಗಿತ್ತು. ಅದು ಈಗ ದೆಹಲಿಯಲ್ಲಿ ನಡೆಯುತ್ತಿದೆ. ಸಚಿವರ ಪ್ರತ್ಯೇಕ ಸಭೆ ಕೂಡ ನಡೆಯಲಿದೆ. ಲೋಕಸಭೆ ಚುನಾವಣೆ, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚೆ ಆಗಲಿದೆ ಎಂದರು.
ಬೆಂಗಳೂರು ವಾಹನ ಸಂಚಾರ ದಟ್ಟಣೆ ನಿವಾರಣೆಗೆ ಸುರಂಗ ರಸ್ತೆ, ಮೇಲು ಸೇತುವೆ ರಸ್ತೆ ನಿರ್ಮಾಣ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜತೆ ಚರ್ಚೆ ಮಾಡುವುದಾಗಿ ತಿಳಿಸಿದರು.
ಇದನ್ನೂ ಓದಿ-Kalaburgi: ಸಚಿವರು ತಮ್ಮ ವರ್ತನೆ ಸರಿಪಡಿಸಿಕೊಳ್ಳದಿದ್ದರೆ ನಮ್ಮ ಹೋರಾಟ ಮುಂದುವರೆಯಲಿದೆ - ಶಾಸಕ ಬಿ.ಆರ್.ಪಾಟೀಲ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.