ಬೆಂಗಳೂರು: ರಾಜ್ಯದಲ್ಲಿ ಸದ್ಯದಲ್ಲೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕುಸಿದು ಬೀಳಲಿದೆ. ಮೈತ್ರಿ ಧರ್ಮ ಪಾಲಿಸದ ಸರಕಾರದ ಕಾರ್ಯವೈಖರಿ ನೋಡಿದರೆ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ಜೆಡಿಎಸ್ ಸಮಾರಂಭದಲ್ಲಿ ವಿಷಕಂಠನಾಗಿ ನೋವು ನುಂಗುತ್ತಿದ್ದೇನೆ ಎಂದು ಹೇಳುತ್ತಾ ಕಣ್ಣೀರು ಸುರಿಸಿದ ಘಟನೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳು ಮಕ್ಕಳ ರೀತಿ ಅಳುವುದು ಸರಿಯಲ್ಲ. ಕಣ್ಣೀರು ಹಾಕುವುದು ನಾಚಿಕೆಗೇಡಿನ ವಿಚಾರ. ಇದರಿಂದ ಕಾಂಗ್ರೆಸ್ ಪಕ್ಷದ ಘನತೆಗೆ ಧಕ್ಕೆ ಉಂಟಾಗುತ್ತದೆ ಎಂದು ಹೇಳಿದರು.
ಇತ್ತಿಚೆಗಷ್ಟೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಮೈತ್ರಿ ಸರ್ಕಾರದಲ್ಲಿ ತಾವು ವಿಷಕಂಠನಾಗಿ ನೋವನ್ನು ನುಂಗುತ್ತಿರುವುದಾಗಿ ಜೆಡಿಎಸ್ ಅಭಿನಂದನಾ ಸಮಾರಂಭದಲ್ಲಿ ಕಣ್ಣೀರು ಹಾಕಿದ್ದರಲ್ಲದೆ, ತಾವು ಯಾವಗಬೇಕಾದರೂ ಮುಖ್ಯಮಂತ್ರಿ ಸ್ಥಾನದಿಂದ ಇಳಿಯಬಹುದು ಎಂದು ಹೇಳಿಕೆ ನೀಡಿದ್ದರು. ಈ ಮಾತುಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.