ಧಾರವಾಡ ಲೋಕಸಭೆ ಕ್ಷೇತ್ರಕ್ಕೆ ಸ್ವಾಮೀಜಿಯೊಬ್ಬರ ಎಂಟ್ರಿ..!!
Loksabha Election 2024: ಒಂದೆಡೆ ಧಾರವಾಡ ಜಿಲ್ಲೆಯ ವಿವಿಧ ಗ್ರಾಮಗಳಿಂದ ಬರುತ್ತಿರುವ ಭಕ್ತರ ದಂಡು ದಿಂಗಾಲೇಶ್ವರ ಸ್ವಾಮೀಜಿಯವರನ್ನು ಭೇಟಿಯಾಗಿ ಲೋಕಸಭೆಗೆ ಸ್ಪರ್ಧೆ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಮತ್ತೊಂದೆಡೆ ವಿವಿಧ ಲಿಂಗಾಯತ ಮುಖಂಡರಿಂದಲೂ ಸ್ವಾಮೀಜಿಗೆ ಸ್ಪರ್ಧೆ ಮಾಡುವಂತೆ ಒತ್ತಡ ಹೆಚ್ಚಾಗುತ್ತಿದೆ.
Shirahatti Mutt in Gadag District: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭೆ ಅಖಾಡದಲ್ಲಿ ಸ್ವಾಮೀಜಿಯೊಬ್ಬರು ಕಣಕ್ಕಿಲಿಯುವ ಸಾಧ್ಯತೆ ಇದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಗದಗ ಜಿಲ್ಲೆಯ ಶಿರಹಟ್ಟಿ ಮಠದ ಪೀಠಾಧಿಪತಿಯಾಗಿರೋ ದಿಂಗಾಲೇಶ್ವರ ಸ್ವಾಮೀಜಿಯವರನ್ನು ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಭಕ್ತರು ಒತ್ತಾಯಿಸುತ್ತಿದ್ದು, ಸ್ವಾಮೀಜಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಒಂದೆಡೆ ಧಾರವಾಡ ಜಿಲ್ಲೆಯ ವಿವಿಧ ಗ್ರಾಮಗಳಿಂದ ಬರುತ್ತಿರುವ ಭಕ್ತರ ದಂಡು ದಿಂಗಾಲೇಶ್ವರ ಸ್ವಾಮೀಜಿಯವರನ್ನು ಭೇಟಿಯಾಗಿ ಲೋಕಸಭೆಗೆ ಸ್ಪರ್ಧೆ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಮತ್ತೊಂದೆಡೆ ವಿವಿಧ ಲಿಂಗಾಯತ ಮುಖಂಡರಿಂದಲೂ ಸ್ವಾಮೀಜಿಗೆ ಸ್ಪರ್ಧೆ ಮಾಡುವಂತೆ ಒತ್ತಡ ಹೆಚ್ಚಾಗುತ್ತಿದೆ.
ಇದನ್ನೂ ಓದಿ - ಚುನಾವಣಾ ಚೆಕ್ ಪೋಸ್ಟ್: ಬಿಸಿಲಿಗೆ ಬೆಂಡಾದ ಚುನಾವಣಾ ಸಿಬ್ಬಂದಿ
ಗಮನಾರ್ಹವಾಗಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಐದು ಲಕ್ಷಕ್ಕೂ ಹೆಚ್ಚು ಲಿಂಗಾಯತ ಮತಗಳಿವೆ. ದಿಂಗಾಲೇಶ್ವರ ಸ್ವಾಮೀಜಿಯವರು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಈ ಕಾರಣಕ್ಕಾಗಿಯೇ ಭಕ್ತರು ಈ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸ್ವಾಮೀಜಿಯವರನ್ನು ಒತ್ತಾಯಿಸುತ್ತಿದ್ದಾರೆ.
ಇದನ್ನೂ ಓದಿ - Lok Sabha Election 2024: ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಐಎಡಿಎಂಕೆ
ಕಳೆದ ತಿಂಗಳು ದಿಂಗಾಲೇಶ್ವರ ಸ್ವಾಮೀಜಿ ಹುಬ್ಬಳ್ಳಿಯಲ್ಲಿ ದೊಡ್ಡ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರು. ಅಷ್ಟೇ ಅಲ್ಲದೆ, ಶಿರಹಟ್ಟಿ ಮಠದ ಪಕ್ಕೀರ ಸ್ವಾಮೀಜಿಗಳ ತುಲಾಭಾರ ಮಾಡಿದ್ದ ಸ್ವಾಮೀಜಿ, 5555 ನಾಣ್ಯಗಳ ತುಲಾಭಾರ ಮಾಡಿದ್ದರು. ಇದಲ್ಲದೆ ಹುಬ್ಬಳ್ಳಿ ಸೇರಿ ವಿವಿಧ ಕಡೆ ಭಾವೈಕ್ಯತಾ ರಥಯಾತ್ರೆಯನ್ನು ಕೂಡ ಕೈಗೊಂಡಿದ್ದರು. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಬಗ್ಗೆ ಊಹಾಪೋಹಗಳು ಮೂಡುದ್ದವು. ಮಾತ್ರವಲ್ಲ, ಚುನಾವಣಾ ದೃಷ್ಟಿಯಿಂದಲೇ ಶ್ರೀಗಳು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮ ಮಾಡಿದ್ರಾ ಅನ್ನೋ ಅನುಮಾನಗಳು ಕೂಡ ವ್ಯಕ್ತವಾಗಿದ್ದವು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.