ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ, ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್!
ಮುಖ್ಯಮಂತ್ರಿ ಸಿದ್ಧರಾಮಯ್ಯ ಜಾತಿ-ಜಾತಿಗಳ ನಡುವೆ ಕಲಹ ಸೃಷ್ಟಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ರಾಜ್ಯ ವಿಧಾನಸಭಾ ಚುನಾವಣೆಗಳ ಮೊದಲು ರಾಜ್ಯ ಸರ್ಕಾರ ಲಿಂಗಾಯತರನ್ನು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯವೆಂದು ಮಾನ್ಯತೆ ನೀಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಭಾರಿ ಹಿನ್ನೆಡೆಯಾಗಿದೆ.
ಸರ್ಕಾರದ ಈ ನಿರ್ಣಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ಆಗಿ ಪರಿಣಮಿಸಲಿದೆ. ಏಕೆಂದರೆ ಲಿಂಗಾಯತ ಸಮುದಾಯದ ಶೇ.17ರಷ್ಟು ಜನ ಸಾಂಪ್ರದಾಯಿಕವಾಗಿ ಬಿಜೆಪಿ ಮತದಾರರಾಗಿದ್ದಾರೆ. 10 ವರ್ಷಗಳ ಹಿಂದೆ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಮಲ ಅರಳುವಲ್ಲಿ ಈ ಸಮುದಾಯವು ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಸಮುದಾಯಕ್ಕೆ ಸೇರಿದವರಾಗಿದ್ದು, ಲಿಂಗಾಯತ ಮತ ಬ್ಯಾಂಕ್ ಪಡೆಯಲು ರಾಜ್ಯ ಸರ್ಕಾರ ಲಿಂಗಾಯತರನ್ನು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯವೆಂದು ಪರಿಗಣಿಸುವ ಕಾರ್ಡ್ ಬಳಸಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಆದರೆ, ಕಳೆದ ದಶಕದಲ್ಲಿ ಲಿಂಗಾಯತ ಗುಂಪು ಪ್ರತ್ಯೇಕ ಧಾರ್ಮಿಕ ಸಮುದಾಯವನ್ನು ಒತ್ತಾಯಿಸುತ್ತಿದೆ. ಆದರೆ ಕಳೆದ ಒಂದು ವರ್ಷದಿಂದ ಈ ಬೇಡಿಕೆ ಹೆಚ್ಚಾಗಿದೆ. ಆದರೆ, ಬಿಜೆಪಿಯು ಅದರ ಸಲುವಾಗಿ ಕಾಂಗ್ರೆಸ್ ಅನ್ನು ದೂಷಿಸುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಜಾತಿ-ಜಾತಿಗಳ ನಡುವೆ ಕಲಹ ಸೃಷ್ಟಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.