ಬೆಂಗಳೂರು : ಸರ್ಕಾರದ ಭ್ರಷ್ಟಾಚಾರ ಮತ್ತು ತಮ್ಮ ಬೇಡಿಕೆಗಳ ನಿರ್ಲಕ್ಷ್ಯವನ್ನು ವಿರೋಧಿಸಿ ನವೆಂಬರ್ 20 ರಂದು ಕರ್ನಾಟಕದಲ್ಲಿ ಮದ್ಯ ಮಾರಾಟವನ್ನು ಸ್ಥಗಿತಗೊಳಿಸಲಾಗುವುದು ಎಂದು ವೈನ್ ಮರ್ಚೆಂಟ್ ಅಸೋಸಿಯೇಷನ್ಸ್ ಫೆಡರೇಶನ್ ಘೋಷಿಸಿದೆ. ತಮ್ಮ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಒಂದು ವಾರದಿಂದ ಒಕ್ಕೂಟವು ತನ್ನ ಅಸಮಾಧಾನ ವ್ಯಕ್ತಪಡಿಸಿದೆ.


COMMERCIAL BREAK
SCROLL TO CONTINUE READING

ವರದಿಯ ಪ್ರಕಾರ, ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ ಹೆಗ್ಡೆ, ಅಂಗಡಿಗಳನ್ನು ಮುಚ್ಚುವ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ಸುಮಾರು 120 ಕೋಟಿ ರೂಪಾಯಿಗಳ ಅಂದಾಜು ನಷ್ಟ ಉಂಟಾಗಲಿದೆ ಎಂದು ಹೇಳಿದ್ದಾರೆ. "ನಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿರುವ ಪರಿಣಾಮವಾಗಿ, ನವೆಂಬರ್ 20 ರಂದು ಮದ್ಯ ಮಾರಾಟವನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ. ಈ ಪ್ರತಿಭಟನೆಯು ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ. 


ಇದನ್ನೂ ಓದಿ : ಯಾರೇ ಗೆದ್ರೂ ಕೂದಲೆಳೆ ಅಂತರದಲ್ಲಿ ಗೆಲ್ಲುತ್ತೇವೆ: ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್


ಚಾಲ್ತಿಯಲ್ಲಿರುವ ನಿಯಮಗಳನ್ನು ಪರಿಗಣಿಸದೆ ಸರ್ಕಾರವು ಹೊಸ ಪರವಾನಗಿಗಳನ್ನು ನೀಡುವ ಮೂಲಕ ಅನಿಯಂತ್ರಿತ ಸ್ಪರ್ಧೆಯನ್ನು ಏರ್ಪಡಿಸುತ್ತಿದೆ. ನಾವು ರಾಜ್ಯದಲ್ಲಿ ವಾರ್ಷಿಕ 38,000 ಕೋಟಿ ವ್ಯವಹಾರವನ್ನು ಒದಗಿಸುತ್ತೇವೆ. ಆದರೆ ಇಲಾಖೆಯಲ್ಲಿನ ಭ್ರಷ್ಟಾಚಾರದಿಂದಾಗಿ ಅನೇಕ ವಿತರಕರು ತಮ್ಮ ವ್ಯವಹಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು  ಆರೋಪಿಸಿದ್ದಾರೆ. 


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.