ನವದೆಹಲಿ: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ತಯಾರಿಸಿರುವ ಅಭ್ಯರ್ಥಿಗಳ ಪಟ್ಟಿ ಇಂದು ಕೇಂದ್ರ ಚುನಾವಣಾ ಸಮಿತಿಗೆ ರವಾನೆಯಾಗಲಿದೆ.


COMMERCIAL BREAK
SCROLL TO CONTINUE READING

ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ಹಿರಿಯ ಮುಖಂಡ ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ಸ್ಕ್ರೀನಿಂಗ್ ಕಮಿಟಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ತಯಾರಿಸಿರುವ ಪಟ್ಟಿ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಚುನಾವಣಾ ಸಮಿತಿಗೆ ರವಾನೆಯಾಗಲಿದ್ದು, ನಾಳೆ(ಏ. 13) ದೆಹಲಿಯಲ್ಲಿ ನಡೆಯಲಿರುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರಿಗೆ ಅಂತಿಮ ಮುದ್ರೆ ಬೀಳಲಿದೆ.


ಸಭೆಯ ಬಳಿಕ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಮೊದಲ ಹಂತದ ಪಟ್ಟಿಯಲ್ಲಿ 150ಕ್ಕೂ ಹೆಚ್ಚು ಅಭ್ಯರ್ಥಿಗಳ ಹೆಸರು ಪ್ರಕಟವಾಗುವ ನಿರೀಕ್ಷೆ ಇದೆ.


ಸ್ಕ್ರೀನಿಂಗ್ ಕಮಿಟಿಯಲ್ಲಿ ಸಿಎಂ‌‌ ಸಿದ್ದರಾಮಯ್ಯ, ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ‌‌ ಮೊಯ್ಲಿ, ಎಸ್.ಆರ್. ಪಾಟೀಲ್, ದಿನೇಶ್ ಗುಂಡೂರಾವ್, ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ, ಬಿ.ಕೆ. ಹರಿಪ್ರಸಾದ್, ಪ್ರಕಾಶ್ ಹುಕ್ಕೇರಿ, ಕೆ.ಸಿ ರಾಮಮೂರ್ತಿ‌, ಎನ್. ಚಂದ್ರಪ್ಪ ಮತ್ತಿತರರಿಂದ  ಅಭಿಪ್ರಾಯ ಸಂಗ್ರಹಿಸಲಾಗಿದೆ.